AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರಿಗೆ ಗುಡ್​ನ್ಯೂಸ್​: ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಶುಚಿ ಯೋಜನೆ

ಕೊರೋನಾದ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮತ್ತೆ ಜೀವ ಸಿಕ್ಕಿದೆ. ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವ ಶುಚಿ ಯೋಜನೆ ಮತ್ತೆ ಕರ್ನಾಟಕದಲ್ಲಿ ಪ್ರಾರಂಭವಾಗಲಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿನಿಯರಿಗೆ ಗುಡ್​ನ್ಯೂಸ್​: ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಶುಚಿ ಯೋಜನೆ
ಶುಚಿ ಯೋಜನೆ
ರಮೇಶ್ ಬಿ. ಜವಳಗೇರಾ
|

Updated on:Aug 16, 2023 | 1:31 PM

Share

ಬೆಂಗಳೂರು, (ಆಗಸ್ಟ್ 16): ಕರ್ನಾಟಕದ ಅನುದಾನಿತ ಹಾಗೂ ಸರ್ಕಾರಿ ಶಾಲೆಯ(School) ವಿದ್ಯಾರ್ಥಿನಿಯರಿಗೆ (Students) ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವ ಶುಚಿ ಯೋಜನೆಯು(Shuchi free sanitary pad scheme ) ಮತ್ತೆ ಮರು ಆರಂಭವಾಗಲಿದೆ. ಪದವಿಪೂರ್ವ ಶಿಕ್ಷಣದ ವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸುವ ಯೋಜನೆ ಇದಾಗಿದೆ. ಈ ಶುಚಿ ಯೋಜನೆ 2013- 2014ರಲ್ಲಿ ಪ್ರಾರಂಭಗೊಂಡಿತ್ತು. ಆದ್ರೆ, ಕೊರೋನಾ ಸಮಯದಲ್ಲಿ ಈ ಯೋಜನೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕರ್ನಾಟಕದಲ್ಲಿ ಶುಚಿ ಯೋಜನೆಗೆ ಮತ್ತೆ ಚಾಲನೆ ದೊರೆತಿದೆ.

ಸ್ಯಾನಿಟರಿ ನ್ಯಾಪ್‍ಕಿನ್ ವಿತರಿಸುವ ಮೂಲಕ ಹದಿಹರೆಯದ ಹೆಣ್ಣುಮಕ್ಕಳ ಆರೋಗ್ಯ ಕಾಪಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಂಡಿತ್ತು. ಕೇಂದ್ರ ಸರ್ಕಾರವೂ ರಾಷ್ಟ್ರೀಯ ಆಯೋಗ್ಯ ಯೋಜನೆಯ ಮೂಲಕ ರಾಜ್ಯ ಸರ್ಕಾರದೊಂದಿಗೆ ಕೈ ಜೋಡಿಸಿತ್ತು. 2015ರಲ್ಲಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶುಚಿ ಯೋಜನೆಯ ಮೂಲಕ ಈ ಯೋಜನೆ ಪ್ರಾರಂಭಿಸಿದ್ದರು. ಆದರೆ ಕೇಂದ್ರ ಸರ್ಕಾರ ‘ಕಿಶೋರಿ ಶಕ್ತಿ ಯೋಜನೆ’ಯ ಹೆಸರಿನಲ್ಲಿ 2013ರಲ್ಲಿಯೇ ಇದೇ ಮಾದರಿ ಯೋಜನೆಯನ್ನು ಜಾರಿಗೊಳಿಸಿತ್ತು. ಕೊರೋನಾದ ಸಂದರ್ಭದಲ್ಲಿ ಈ ಯೊಜನೆಯು ಸ್ಪಲ್ಪದಿನಗಳ ಕಾಲ ಸ್ಥಗಿತಗೊಂಡಿದ್ದು, ಈಗ ಮತ್ತೆ ಪ್ರಾರಂಭಗೊಂಡಿದೆ.

ಇದನ್ನೂ ಓದಿ: ಹೆಚ್ಚಿನ ಮಕ್ಕಳು 9,10ನೇ ತರಗತಿಯಿಂದ ಹೊರಗುಳಿದಿದ್ದಾರೆ; ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾಹಿತಿ

ಪ್ರಸ್ತುತ ಈ ಯೋಜನೆಯಡಿಯಲ್ಲಿ 34,369 ಹಾಸ್ಟೆಲ್ ಹಾಗೂ ಶಾಲೆಗಳನ್ನು ಗುರುತಿಸಲಾಗಿದೆ. 17.99 ಲಕ್ಷದಷ್ಟು ವಿದ್ಯಾರ್ಥಿನಿಯರು ಈ ಯೋಜನೆಯ ಫಲಾನುಭವಿಗಳಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಈ ಯೋಜನೆಯನ್ನು ರೂಪಿಸಿದೆ. ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಈ ಯೋಜನೆ ಹೆಚ್ಚು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಈ ಯೋಜನೆ ಪ್ರಾರಂಭವಾಗಿದೆ. ಕೊರೋನಾ ಕಾಲದಲ್ಲಿ ಸ್ಥಗಿತಗೊಂಡಿದ್ದ ಈ ಯೋಜನೆ ಪುನರಾಂಭಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ.

ಇನ್ನು ಈ ಯೋಜನೆ ಆರಂಭಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಶುಚಿ ಯೋಜನೆ ಆರಂಭಗೊಳ್ಳಲು ಬೇಕಾದ ಸಿದ್ಧತೆಗಳೆಲ್ಲವೂ ನಡೆದಿದ್ದು, ಸೆಪ್ಟೆಂಬರ್​ನಿಂದ ಈ ಯೋಜನೆ ಜಾರಿಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ವರದಿ: ಸುಚೇತಾ ಹೆಗಡೆ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:27 pm, Wed, 16 August 23

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ