ಅಮ್ಮನನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು ಮೆಚ್ಚಿದ ಸಿದ್ದರಾಮಯ್ಯ

ದಕ್ಷಿಣ ಕನ್ನಡ ಜಿಲ್ಲೆ ಕಿನ್ನಿಗೋಳಿ ಬಳಿ ತನ್ನ ತಾಯಿ ಮೇಲೆ ಪಲ್ಟಿಯಾಗಿದ್ದ ಆಟೋ ಎತ್ತಿದ ಮಗಳ ಕಾರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಬಾಲಕಿ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ. ಸಮಾಜಕ್ಕೆ ಸಂದೇಶವನ್ನ ರವಾನಿಸಿದೆ ಎಂದು ಹೇಳಿದ್ದಾರೆ.

ಅಮ್ಮನನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು ಮೆಚ್ಚಿದ ಸಿದ್ದರಾಮಯ್ಯ
ಅಮ್ಮನನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು ಮೆಚ್ಚಿದ ಸಿದ್ದರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 09, 2024 | 11:07 PM

ಬೆಂಗಳೂರು, ಸೆಪ್ಟೆಂಬರ್​ 09: ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ತನ್ನ ತಾಯಿಗೆ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಅಲ್ಲೇ ಇದ್ದ ಮಗಳು ತಕ್ಷಣವೇ ಆಟೋ ಮೇಲೆತ್ತಿ ತಾಯಿತ ಪ್ರಾಣ ಉಳಿಸಿದ್ದಳು. ಆ ಬಾಲಕಿಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಆಕೆಯ ಸಮಯಪ್ರಜ್ಞೆ ಮತ್ತು ಧೈರ್ಯ ಶ್ಲಾಘಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವಿಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದಿದ್ದಾರೆ.

ವರದಿ: ಈರಣ್ಣ ಬಸವ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ