ಜ್ವರ ಕಾಣಿಸಿಕೊಂಡ ಹಿನ್ನೆಲೆ, ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು: ಜ್ವರ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣ ಅವರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನ ವಿಶ್ರಾಂತಿ ಪಡೆಯಲು ಸಿದ್ದರಾಮಯ್ಯಗೆ ವೈದ್ಯರು ಸೂಚಿಸಿದ್ದು, ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ಜ್ವರ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದೆ.
ಹೀಗಾಗಿ ತಕ್ಷಣ ಅವರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನ ವಿಶ್ರಾಂತಿ ಪಡೆಯಲು ಸಿದ್ದರಾಮಯ್ಯಗೆ ವೈದ್ಯರು ಸೂಚಿಸಿದ್ದು, ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.