ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ರಿಂದ ಆಮಿಷ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಭೇಟಿ ನೀಡಿ ಮಾತುಕತೆ ನಡೆಸಿದರು. ಕೇಂದ್ರ ಸಚಿವರನ್ನು ಬೀಳ್ಕೊಟ್ಟ ನಂತರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್​ಡಿ ಕುಮಾರಸ್ವಾಮಿ, ನಮ್ಮ ಶಾಸಕರಿಗೆ ಆಮಿಷ ಹಾಕುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಆರೋಪಿಸಿದರು.

ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ರಿಂದ ಆಮಿಷ: ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: Rakesh Nayak Manchi

Updated on: Jan 07, 2024 | 7:49 PM

ಬೆಂಗಳೂರು, ಜ.7: ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಉದ್ದೇಶವಾಗಿದೆ. ಹೀಗಾಗಿ ನಮ್ಮ ಶಾಸಕರಿಗೆ ಆಮಿಷ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಭೇಟಿ ನೀಡಿ ಮಾತುಕತೆ ನಡೆಸಿದರು. ಕೇಂದ್ರ ಸಚಿವರನ್ನು ಬೀಳ್ಕೊಟ್ಟ ನಂತರ ಕುಮಾರಸ್ವಾಮಿ ಮಾತನಾಡಿದರು.

ದೇವೇಗೌಡರ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತಾಡಿದ್ದಾರೆ. ಮಾತನಾಡಿದವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಅ ಇಬ್ಬರು ನಾಯಕರ ಅಜೆಂಡಾ ಇದೆ ಆಗಿದೆ. ಈಗಲೂ ಸಹ ಅವರಿವರ ಮನೆ ಬಾಗಿಲು ತಟ್ಟುತಿದ್ದಾರೆ ಎಂದು ಹೇಳುವ ಮೂಲಕ ಜೆಡಿಎಸ್ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ ಎಂದರು.

ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್​​ಗೆ ಬನ್ನಿ. ಏನು ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ‌ ಅಷ್ಟು ಕೊಡುತ್ತೇವೆ, ಪಕ್ಷಕ್ಕೆ ಬನ್ನಿ ಅಂತಾರೆ. ಯಾವ ಕಾರಣಕ್ಕೆ ಇದನ್ನು ಮಾಡುತ್ತೀರಿ. ವಿರೋಧ ಪಕ್ಷ ಉಳಿಸೋಕೆ ಮಾಡುತ್ತಿರೋದಾ? ಜೆಡಿಎಸ್ ಮುಗಿಸಬೇಕು ಅಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಇದನ್ನೂ ಓದಿ: ಸೋಮಣ್ಣ ಬೆನ್ನಲ್ಲೇ ಕುಮಾರಸ್ವಾಮಿ ಭೇಟಿಯಾದ ಬಿಜೆಪಿ ನಾಯಕ ಸಿಟಿ ರವಿ; ಕುತೂಹಲ ಮೂಡಿಸಿದ ಭೇಟಿ

ಯಾವ ಪಕ್ಷದಿಂದ ಬೆಳೆದುಕೊಂಡು ಬಂದರು ಇವರು (ಸಿದ್ದರಾಮಯ್ಯ)? ಯಾರ ನಾಯಕತ್ವದಲ್ಲಿ ಈ ಹಂತಕ್ಕೆ ಬಂದರು? ಯಾವುದಕ್ಕೂ ಅವರಿಗೆ ಕೃತಜ್ಞತೆ ಅನ್ನುವುದು ಇಲ್ಲ. ದೇವೇಗೌಡರು ಅವರ ಶತ್ರುಗಳಿಗೂ ಶಾಪ ಹಾಕಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ‌ಸಮಾಪ್ತಿ ಮಾಡುತ್ತಾರೆ ಎಂದು ದೇವೇಗೌಡರು ಹೇಳಿದ್ದಾರೆ ಅಷ್ಟೆ ಎಂದರು.

ಡಿಕೆ ಶಿವಕುಮಾರ್ ನಮ್ಮ ಕಾಂಗ್ರೆಸ್ 135 ವರ್ಷದ ಪಕ್ಷ ಅಂತಾರೆ‌. ಗಾಂಧಿಜೀ‌ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ. ಇವರು ಮಾಡುತ್ತೀರುವುದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದರು.

ಅಗತ್ಯ ಬಿದ್ದರೆ ಸುಮಲತಾ ಅವರನ್ನೂ ಭೇಟಿಯಾಗುತ್ತೇನೆ: ಕುಮಾರಸ್ವಾಮಿ

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಮುಂದೆ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಉದ್ದೇಶ ಮಾತ್ರ ಇದೆ. ಅದರ ಬಗ್ಗೆ ಚರ್ಚೆ ಆಗಿದೆ. ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಮಂಡ್ಯ ಸಂಸದೆ ಸುಮಲತಾ ಅವರ ಬೆಂಬಲಿಗ ಸಚ್ಚಿದಾನಂದ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭೇಟಿ ಮಾಡುವ ಅವಶ್ಯಕತೆ ಬಂದರೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ. ತಪ್ಪೇನಿದೆ ಎಂದರು.

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು‌ ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೇವಾ? ಇಂತಹವರಿಗೆ ತೊಂದರೆ ಕೊಟ್ಟು ನಿಲ್ಲಬೇಕು ಅಂತಾನೂ ಇದ್ದೇವಾ? ಖಂಡಿತಾ ಇಲ್ಲ. ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇವೆಲ್ಲಾ ಪ್ರಾರಂಭಿಕ ಹಂತದಲ್ಲಿ ‌ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡಲು ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದರು.

ಲೋಕಸಭೆಗೆ ಕುಮಾರಸ್ವಾಮಿ ನಿಲ್ಲುವ ವಿಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ