AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್‌ಗೆ ಮುಡಾ, ವಾಲ್ಮೀಕಿ ಹಗರಣದ ವರದಿ ನೀಡಿದ ಸಿಎಂ, ಡಿಸಿಎಂ: ಸಭೆಯಲ್ಲಿ ಏನೇನು ಆಯ್ತು?ಇಲ್ಲಿದೆ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಜುಲೈ 30) ನವದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು ಖರ್ಗೆ ಅವರು ಸಿಎಂ ಕಾರ್ಯದರ್ಶಿ ಅವರನ್ನು ಕರೆಯಿಸಿಕೊಂಡು ವಿವರಣೆ ಪಡೆದುಕೊಂಡಿದ್ದಾರೆ. ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು? ಸಿಎಂ, ಡಿಸಿಎಂ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಹೈಕಮಾಂಡ್‌ಗೆ ಮುಡಾ, ವಾಲ್ಮೀಕಿ ಹಗರಣದ ವರದಿ ನೀಡಿದ ಸಿಎಂ, ಡಿಸಿಎಂ: ಸಭೆಯಲ್ಲಿ ಏನೇನು ಆಯ್ತು?ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ|

Updated on: Jul 30, 2024 | 8:05 PM

Share

ನವದೆಹಲಿ/ಬೆಂಗಳೂರು, (ಜುಲೈ 30): ಕರ್ನಾಟಕ ಸರ್ಕಾರ ಸರಣಿ ಹಗರಣಗಳ ಸುಳಿಯಲ್ಲಿ ಸಿಲುಕಿದೆ. ಈ ಹಗರಣ ಇದೀಗ ದೆಹಲಿ ಅಂಗಳಕ್ಕೂ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲೂ ಚರ್ಚೆಯಾಗಿದೆ.ಇಂದು (ಜುಲೈ 30) ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಜರಾಗಿದ್ದು, ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್​ಗೆ ಪಿನ್​ ಟು ಪಿನ್ ವರದಿ ಒಪ್ಪಿಸಿದ್ದಾರೆ. ಇನ್ನು ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಸಿಎಂ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರನ್ನೂ ಸಹ ಕರೆಯಿಸಿಕೊಂಡು ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಸಭೆಯಲ್ಲಿ ಆದ ಚರ್ಚೆಯೇನು?

ಹೈಕಮಾಂಡ್ ನಾಯಕರಿಗೆ ಮೊದಲಿಗೆ ವಾಲ್ಮೀಕಿ ಹಗರಣದ ಬಗ್ಗೆ ರಿಪೋರ್ಟ್​ ಕೊಟ್ಟ ಸಿಎಂ, ಡಿಸಿಎಂ, ವಾಲ್ಮೀಕಿ ನಿಗಮದ ಹಗರಣ ಅಧಿಕಾರಿಗಳಿಂದ ಆಗಿದೆ. ಸಚಿವರಾಗಿದ್ದ ಬಿ.ನಾಗೇಂದ್ರರ ತಪ್ಪಿಲ್ಲ, SIT ತನಿಖೆ ಪರಿಣಾಮಕಾರಿಯಾಗಿ ನಡೆಯುತ್ತಿದೆ. ತಪ್ಪಿತಸ್ಥ ಅಧಿಕಾರಿಗಳ ಆಸ್ತಿ ಮೇಲೆ ದಾಳಿಯಾಗಿದೆ. ಪ್ರಕರಣದಲ್ಲಿ ಹಲವರನ್ನ ಬಂಧಿಸಿ ವಿಚಾರಣೆ ನಡೆಯುತ್ತಿದೆ. ಇನ್ನು ವರ್ಗಾವಣೆಯಾಗಿದ್ದ ಹಣ ವಶಪಡಿಸಿಕೊಳ್ಳುತ್ತಿದ್ದೇವೆ. ಈ ಕೇಸ್​ನಲ್ಲಿ ಕೇಂದ್ರ ಸರ್ಕಾರ ಲಾಭ ಪಡೆದುಕೊಳ್ಳುತ್ತಿದೆ. ED ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಬೆದರಿಕೆ, ಇದರ ವಿರುದ್ಧವೂ ಕಾಂಗ್ರೆಸ್ ಹೋರಾಟ ನಡೆಸಿದೆ ಎಂದು ವಿವರಿಸಿದರು.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಸಿದ್ದರಾಮಯ್ಯರನ್ನು ಟ್ರೋಲ್ ಮಾಡಿದ ನಿರ್ಮಲಾ ಸೀತಾರಾಮನ್

ಮುಡಾ ಬಗ್ಗೆ ವಿವರಣೆ ನೀಡಿದ ಸಿಎಂ

ಇನ್ನು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ನಾಯಕರಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಸೈಟು ಹಂಚಿಕೆ ವಿಚಾರವಾಗಿ ಯಾವುದೇ ಅಕ್ರಮ ನಡೆದಿಲ್ಲ, ಈಗಾಗಲೇ ಹಲವು ಈ ಬಾರಿ ನಾನು ಸ್ಪಷ್ಟನೆ ನೀಡಿದ್ದೇನೆ, 50:50 ಹಂಚಿಕೆ ನನ್ನ ಕುಟುಂಬಕ್ಕೆ ವಿಶೇಷವಾಗಿ ಮಾಡಿಲ್ಲ, ಮೇಲಾಗಿ ನಾನು ಅಧಿಕಾರದಲ್ಲಿದ್ದಾಗ ಸೈಟು ಹಂಚಿಕೆ ಆಗಿಲ್ಲ, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಸೈಟ್ ಕೊಟ್ಟಿರುವುದು, ರಾಜಕೀಯ ಕಾರಣಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವರಿಷ್ಠರ ನಾಯಕರ ಮುಂದೆ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಸಿಎಂ ಕಾರ್ಯದರ್ಶಿಯಿಂದಲೂ ಮಾಹಿತಿ ಪಡೆದ ಖರ್ಗೆ

ಇನ್ನು ಎರಡು ಹಗರಣ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಂದ ವರದಿ ಪಡೆದುಕೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರನ್ನು ಸಭೆಗೆಕರೆಯಿಸಿಕೊಂಡು ವಿವರಣೆ ಪಡೆದುಕೊಂಡಿದ್ದಾರೆ. ವಾಲ್ಮೀಕಿ ನಿಗಮದ ಅಕ್ರಮವಾಗಿ ಹೇಗೆ ಹಣ ವರ್ಗಾವಣೆ ಆಯ್ತು? ಇದಕ್ಕೆ ಕಾರಣ ಯಾರು? ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಸೋಲಿನ ಬಗ್ಗೆಯೂ ಚರ್ಚೆ

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸಿಎಂ,ಡಿಸಿಎಂ ಪರಾಮರ್ಶೆ ನಡೆಸಿದರು. ಸೋಲಿಗೆ ಕಾರಣ ಹುಡುಕಲು ಹೈಕಮಾಂಡ್, ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಸತ್ಯಶೋಧನ ಸಮಿತಿ ರಚಿಸಿತ್ತು. ಇಂದಿನ ಸಭೆಯಲ್ಲಿ ಮಧುಸೂದನ್ ಮಿಸ್ತ್ರಿ ವರದಿ ಮುಂದಿಟ್ಟುಕೊಂಡು ಚರ್ಚೆ ಮಾಡಿದ್ದಾರೆ.

ಕೆಲವು ಸಚಿವರು ಲೋಕಸಭೆ ಚುನಾವಣೆಯಲ್ಲಿ ಕೆಲಸ ಮಾಡಿಲ್ಲ. ಮತ್ತೆ ಕೆಲವು ಶಾಸಕರು ಅಭ್ಯರ್ಥಿಗಳಿಗೆ ಸಾಥ್ ನೀಡಿಲ್ಲ. ಪಕ್ಷದ ಅಭ್ಯರ್ಥಿ ವಿರುದ್ಧವೇ ಕೆಲಸ ಮಾಡಿದ್ದಾರೆ. ಹೀಗಾಗಿ ಕೆಲವು ಸಚಿವರಿಗೆ ಕೋಕ್ ನೀಡಬೇಕು . ಹೊಸಬರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಹೆಚ್ಚಾಗಿದೆ ಎಂದು ಮಧುಸೂಧನ್ ಮಿಸ್ತ್ರಿ ವರದಿಯಲ್ಲಿನ ಕೆಲವು ಅಂಶಗಳನ್ನು ಉಲ್ಲೇಖ ಮಾಡಲಾಗಿದ್ದು, ಇದನ್ನೆ ಮುಂದಿಟ್ಟುಕೊಂಡು ಸಂಪುಟಕ್ಕೆ ಸರ್ಜರಿ ಮಾಡುವ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ