ಹಿರಿಯ ನಾಗರಿಕರಿಗೆ ಗುಡ್​ನ್ಯೂಸ್: ವೃದ್ಧಾಪ್ಯ ವೇತನ ಹೆಚ್ಚಿಸುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

International Day for Older Persons (2023) ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಜೀವಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡುವ ಪಿಂಚಣಿ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದಾರೆ.

ಹಿರಿಯ ನಾಗರಿಕರಿಗೆ ಗುಡ್​ನ್ಯೂಸ್: ವೃದ್ಧಾಪ್ಯ ವೇತನ ಹೆಚ್ಚಿಸುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
Malatesh Jaggin
| Updated By: ರಮೇಶ್ ಬಿ. ಜವಳಗೇರಾ

Updated on: Oct 01, 2023 | 4:33 PM

ಬೆಂಗಳೂರು (ಅಕ್ಟೋಬರ್. 01): ಕರ್ನಾಟಕದಲ್ಲಿ ವೃದ್ಧಾಪ್ಯ ವೇತನ ಹೆಚ್ಚಳ ಮಾಡುವುದಕ್ಕೆ ಭಾರಿ ಬೇಡಿಕೆಯಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹಿರಿಯ ನಾಗರಿಕಗರಿಗೆ ಪ್ರಸ್ತುತ 1,200 ರೂ. ವೃದ್ಧಾಪ್ಯ ವೇತನವನ್ನು ನೀಡುತ್ತಿದ್ದೇವೆ. ಅದನ್ನು ಮುಂದಿನ 2024-25ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

ಇಂದು (ಅ.1) ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಇಡೀ ಜಗತ್ತು ವಿಶ್ವ ಹಿರಿಯರ ದಿನಾಚರಣೆ ಮಾಡುತ್ತಿದ್ದೆವು. ನಮ್ಮ ಸರ್ಕಾರ ಸಹಾ ಹಿರಿಯ ನಾಗರಿಕರ ದಿನಾಚರಣೆ ಮಾಡ್ತಿದೆ. ನಾಡಿನ ಎಲ್ಲಾ ಹಿರಿಯ ನಾಗರಿಕರಿಕರಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಶುಭಾಶಯ ಕೊರುತ್ತೇನೆ. ವೃದ್ಧಾಪ್ಯ ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ. ಇದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಮುಂದಿನ ಬಜೆಟ್ ನಲ್ಲಿ ವೃದ್ಧಾಪ್ಯದ ವೇತನ ಹೆಚ್ಚಳ ಮಾಡಿ ಘೋಷಣೆ ಮಾಡುತ್ತೇನೆ. ಆದ್ರೆ, ಎಷ್ಟು ಅಂತ ಈಗಲೇ ಹೇಳುವುದಿಲ್ಲ. ಈಗಿರೋದಕ್ಕಿಂತ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡಲ್ಲ-ಸಿಎಂ ಸಿದ್ದರಾಮಯ್ಯ

ನಾಡಿನ ಎಲ್ಲ ವೃದ್ಧರೂ 100 ವರ್ಷಕ್ಕೂ ಹೆಚ್ಚು ಕಾಲ ಬಾಳಿ ಎಂದು ಆಶಿಸುತ್ತೇನೆ. ಬದುಕಿರೋತನಕ ಆರೋಗ್ಯವಾಗಿರಲಿ ಎಂದು ಆಶಿಸುತ್ತೇನೆ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಅಂದ್ರೆ ಹಿರಿಯರನ್ನ ಗೌರವಿಸೋದು. ನಾವು ಎಷ್ಟು ವರ್ಷ ಬದುಕುತ್ತೇವೆ ಎನ್ನುವುದು ಒಂದು ಭಾಗ. ಬದುಕಿರುವವರೆಗೆ ನಾವು ಸಾರ್ಥಕ ಜೀವನ ಸಾಗಬೇಕು. ಮನುಷ್ಯರಾಗಿ ಸಾಯುವುದು ಬಹಳ ಮುಖ್ಯವಾಗಿದೆ. ಕುವೆಂಪು ಹೇಳಿದಂತೆ ಎಲ್ಲರೂ ವಿಶ್ವಮಾನವರಾಗಬೇಕು. ಯಾವ ಧರ್ಮದಲ್ಲಿ ಹುಟ್ಟಿರಬಹುದು, ಆ ಧರ್ಮ ಪ್ರೀತಿಸಬೇಕು ಗೌರವಿಸಬೇಕು ಆದ್ರೆ ಇನ್ನೊಂದು ಧರ್ಮವನ್ನ ದ್ವೇಷಿಸಬಾರದು ಎಂದು ಕಿವಿ ಮಾತು ಹೇಳಿದರು.

ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ಸಚಿವೆ ಮನವಿ

ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಕರ್ನಾಟಕದ ಸುಮಾರು 49 ಲಕ್ಷ ವೃದ್ಧರಿಗೆ ಸರ್ಕಾರದಿಂದ ಮಾಸಿಕ 1,200 ರೂ. ವೃದ್ಧಾಪ್ಯ ವೇತನವನ್ನು ನೀಡಲಾಗುತ್ತಿದೆ. ಇದನ್ನು 2,000 ರೂ.ವರೆಗೆ ಹೆಚ್ಚಳ ಮಾಡಬೇಕೆಂದು ಸಿದ್ದರಾಮಯ್ಯ ಅವರಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಮನವಿ ಮಾಡಿದರು. ರಾಜ್ಯದಲ್ಲಿ ಹಿರಿಯರು ನಾಗರಿಕರು 5 ಗ್ಯಾರಂಟಿ ಕೊಟ್ಟಿದ್ದೀರಾ. ಹಾಗೇ ನಮಗೆ ಪಿಂಚಣಿ ಜಾಸ್ತಿ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ. ಹೀಗಾಗಿ ನೀವು ಹಿರಿಯರಿದ್ದೀರಾ. ಹಿರಿಯ ನಾಗರಿಕರ ಕಷ್ಟದ ಬಗ್ಗೆಯೂ ತಮಗೆ ಅರಿವಿರುತ್ತದೆ. ಆದ್ದರಿಂದ ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ