ಕೇರಳ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಕರ್ನಾಟಕದ ಶಿರೂರು ದುರಂತ ಮಾಸುವ ಮುನ್ನವೇ, ನೆರೆ ರಾಜ್ಯ ಕೇರಳದಲ್ಲಿ ಗುಡ್ಡ ಕುಸಿತ ಅಟ್ಟಹಾಸ ಮೆರೆದಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜೊತೆಗೆ ಮಂಡ್ಯ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭಿಸಲಾಗಿದೆ.

ಕೇರಳ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಕೇರಳ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on:Jul 31, 2024 | 3:59 PM

ಬೆಂಗಳೂರು, ಜುಲೈ 31: ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ (Kerala Wayanad Landslide)  ಮೃತಪಟ್ಟವರ ಸಂಖ್ಯೆ ಏರಿಕೆ ಆಗುತ್ತಿದೆ. ನಾಪತ್ತೆಯಾದ 100ಕ್ಕೂ ಹೆಚ್ಚು ಜನರಿಗಾಗಿ ಶೋಧ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ (Siddaramaiah) ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.

ಇದನ್ನೂ ಓದಿ: ವಯನಾಡು ಗುಡ್ಡ ಕುಸಿತ: ನಿಮ್ಮೊಂದಿಗೆ ನಾವಿದ್ದೇವೆ, ಕೇರಳಕ್ಕೆ ಸಿದ್ದರಾಮಯ್ಯ ಅಭಯ ಹಸ್ತ

ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.

ಕೇರಳ ಸಿಎಂ ಜೊತೆ ಮಾತನಾಡಿದ ಸಿದ್ದರಾಮಯ್ಯ 

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಇಂದು ಮಾತನಾಡಿ ವಯನಾಡು ಭೂಕುಸಿತದಿಂದುಂಟಾದ ಸಾವು ನೋವಿನ ಬಗ್ಗೆ ನನ್ನ ಕಳವಳ ವ್ಯಕ್ತಪಡಿಸಿ, ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಸಂಕಷ್ಟದಲ್ಲಿರುವ ಜನರ ರಕ್ಷಣಾ ಕಾರ್ಯ, ಆಹಾರ, ನೀರು, ವೈದ್ಯಕೀಯ ನೆರವು ಸೇರಿದಂತೆ ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದೇನೆ.

ಇದನ್ನೂ ಓದಿ: ಕೇರಳ ಗುಡ್ಡ ಕುಸಿತ: ಹೊಸ ಮನೆ ಕೊಂಡ ಸಂತಸದಲ್ಲೇ ಜಲಸಮಾಧಿಯಾದ ಕರ್ನಾಟಕದ ದಂಪತಿ

ಇಂತಹ ನೋವಿನ ಘಳಿಗೆಯಲ್ಲಿ ಕರ್ನಾಟಕವು ಕೇರಳದ ಜೊತೆ ಇರಲಿದೆ, ಒಟ್ಟಾಗಿ ಈ ಸವಾಲನ್ನು ಎದುರಿಸೋಣ ಎಂಬ ಭರವಸೆಯನ್ನು ಪಿಣರಾಯಿ ವಿಜಯನ್ ಅವರಲ್ಲಿ ತುಂಬಿದ್ದೇನೆ ಎಂದಿದ್ದಾರೆ.

ಮಂಡ್ಯ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ಮಂಡ್ಯ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭಿಸಲಾಗಿದೆ. ದುರಂತದಲ್ಲಿ ಸಂಕಷ್ಟಕ್ಕೆ ಸಿಲುಕಿದವರ ಸಹಾಯಕ್ಕೆ ಜಿಲ್ಲಾಡಳಿತ ನಿಂತಿದೆ. ಆ ಮೂಲಕ ವನಾಡಿನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ರೆ ಸಂಪರ್ಕ ಮಾಡುವಂತೆ ಮನವಿ ಮಾಡಲಾಗಿದೆ.

ನೆರವಿಗಾಗಿ 08232-224655, ಡಿಸಿ ಡಾ.ಕುಮಾರ್ ಮೊಬೈಲ್ ನಂ.8277863520, ಎಡಿಸಿ ಡಾ.ನಾಗರಾಜು- 9480783686 ಸಂಖೆಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ್​ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:58 pm, Wed, 31 July 24

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ