AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್: ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ ಸಿಎಂ

Karnataka 7th Pay Commission: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಗುಡ್​ನ್ಯೂಸ್ ನೀಡಿದ್ದಾರೆ. ಆಗಸ್ಟ್​ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಂಯ್ಯ ಪ್ರಕಟಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್:  ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ ಸಿಎಂ
ಸಿಎಂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ|

Updated on:Jul 15, 2024 | 10:53 PM

Share

ಬೆಂಗಳೂರು, (ಜುಲೈ 15): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಂದು(ಜುಲೈ 15) ನಡೆದ ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದ್ದು, ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಜಾಸ್ತಿಯಾಗಲಿದೆ.

ಇದನ್ನೂ ಓದಿ: ರಾಜ್ಯ ನೌಕರರಿಗೆ ಎಷ್ಟು ಸಿಗಲಿದೆ ವೇತನ? 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಬಗ್ಗೆ ಅಧ್ಯಕ್ಷ ಬಿಚ್ಚಿಟ್ಟ ಮಾಹಿತಿ

ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು ಮಾರ್ಚ್‌ 16 ರಂದು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ  ಸಿಎಂ ಸಿದ್ದರಾಮಯ್ಯನವರಿಗೆ ನೀಡಿತ್ತು.  ಬಳಿಕ ಸಿಎಂ, ಇದನ್ನು ಜಾರಿ ತರುವ ಬಗ್ಗೆ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದ‌ರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ. ಇಂದು(ಜುಲೈ 15) ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡಿರಲಿಲ್ಲ. ಅಲ್ಲದೇ ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ತೀರ್ಮಾನವನ್ನು ರಾಜ್ಯ ಸರ್ಕಾರ ಮುಂದೂಡುತ್ತಾ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:55 pm, Mon, 15 July 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ