ಸಿದ್ದರಾಮಯ್ಯಗೆ 75 ವರ್ಷ: ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ -ರಾಹುಲ್ ಗಾಂಧಿಗೆ ಆಹ್ವಾನ

| Updated By: ಸಾಧು ಶ್ರೀನಾಥ್​

Updated on: Jun 29, 2022 | 6:06 PM

siddaramaotsava: ಕರ್ನಾಟಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಆಯೋಜನೆ. ಅದರಲ್ಲಿ ಪಾಲ್ಗೊಳ್ಳಲು ರಾಜ್ಯ ಕಾಂಗ್ರೆಸ್​ ನಾಯಕರುಗಳಿಂದ ರಾಹುಲ್ ಗಾಂಧಿಗೆ ಆಹ್ವಾನ.

ಸಿದ್ದರಾಮಯ್ಯಗೆ 75 ವರ್ಷ: ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ -ರಾಹುಲ್ ಗಾಂಧಿಗೆ ಆಹ್ವಾನ
ಸಿದ್ದರಾಮಯ್ಯಗೆ 75 ವರ್ಷ: ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ -ರಾಹುಲ್ ಗಾಂಧಿಗೆ ಆಹ್ವಾನ
Follow us on

ದೆಹಲಿ: ರಾಜ್ಯ ಕಾಂಗ್ರೆಸ್​ ನಾಯಕರುಗಳು ಇಂದು ದೆಹಲಿಯಲ್ಲಿ ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ( rahul gandhi) ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah) 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು ದಾವಣಗೆರೆಯಲ್ಲಿ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಅದರಲ್ಲಿ ತಾವು ಪಾಲ್ಗೊಳ್ಳಬೇಕು ಎಂದು ರಾಹುಲ್ ಗಾಂಧಿಗೆ ಆಹ್ವಾನ ನೀಡಿದ್ದಾರೆ. ಇದಕ್ಕೆ ರಾಹುಲ್ ಒಪ್ಪಿಗೆ ಸೂಚಿಸಿರುವುದಾಗಿ ನಾಯಕರು ತಿಳಿಸಿದ್ದಾರೆ. ಇನ್ನು ಆಗಸ್ಟ್ 3 ಬುಧವಾರದಂದು ಸಿದ್ದರಾಮೋತ್ಸವ (siddaramaotsava) ಕಾರ್ಯಕ್ರಮವಿದೆ. ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಇಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಕೊತ್ತೂರು ಮಂಜುನಾಥ್ ಮತ್ತು ಡಾ. ಎಂ.ಸಿ. ಸುಧಾಕರ್ ಕೂಡ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದು ದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭ್ರಷ್ಟ ಬಿಜೆಪಿ ಸರ್ಕಾರದ ಆಡಳಿತ ಕೊನೆಗಾಣಿಸಬೇಕಿದೆ. ಮುಂದಿನ ಚುನಾವಣೆಗೆ ಕಾರ್ಯತಂತ್ರ ರೂಪಿಸಿದ್ದೇವೆ. ಕಾರ್ಯತಂತ್ರದ ಬಗ್ಗೆ ರಾಹುಲ್ ಗಾಂಧಿ ಜತೆ ಚರ್ಚಿಸಿದ್ದೇವೆ. ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ಸರ್ವೆ ಪ್ರಕಾರ ಸ್ವಂತ ಬಲದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ರಾಹುಲ್ ಗಾಂಧಿ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (KPCC president D K Shivakumar) ದೆಹಲಿಯಲ್ಲಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರನ್ನ ಕೋಲಾರ -ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಅನೇಕ ಹಾಲಿ ಹಾಗೂ ಮಾಜಿ ಶಾಸಕರು ಭೇಟಿಯಾದರು.

ಇನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಕೋಲಾರ -ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಅನೇಕ ಹಾಲಿ ಹಾಗೂ ಮಾಜಿ ಶಾಸಕರು ಭೇಟಿಯಾದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ನೇತೃತ್ವದ ನಿಯೋಗದಲ್ಲಿ ಇತ್ತೀಚೆಗೆ ಜೆಡಿಎಸ್ ತೊರೆದ ಶಾಸಕ ಶ್ರೀನಿವಾಸ ಗೌಡ, ಮಾಜಿ ಶಾಸಕರಾದ ಚಿಂತಾಮಣಿ ಸುಧಾಕರ್, ಮುಳಬಾಗಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್, ಅವಳಿ ಜಿಲ್ಲೆಯ ಇತರೆ ಪ್ರಮುಖ ನಾಯಕರು ಹಾಜರಿದ್ದರು.

Published On - 6:03 pm, Wed, 29 June 22