ಸಿದ್ದರಾಮಯ್ಯ ಪುಸ್ತಕ ಬರೀ ಸುಳ್ಳಿನ ಕಂತೆ ಎಂದು ಅಂಕಿಅಂಶ ಮುಂದಿಟ್ಟ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ದೇಶ 21ನೇ ಶತಮಾನದತ್ತ ದಾಪುಗಾಲಿಕ್ಕುತ್ತಿದ್ದರೂ, ಇನ್ನೂ ಬ್ರಿಟಿಷ್‌ ಕಾಲದ ನೀತಿಗಳು, ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುವ ಕೆಟ್ಟ ಆರ್ಥಿಕ ನೀತಿಗಳನ್ನೇ ಸಿದ್ದರಾಮಯ್ಯ ಅಭಿವೃದ್ಧಿ ಎಂದು ಹೇಳುತ್ತಿದ್ದಾರೆ. ರಾಜ್ಯಕ್ಕೆ ಈಗಿನ ಕೇಂದ್ರ ಸರ್ಕಾರ ಕೊಟ್ಟಷ್ಟು ಅನುದಾನ, ಬೆಂಬಲಗಳನ್ನು ಹಿಂದಿನ ಬೇರಾವ ಸರ್ಕಾರಗಳೂ ಕೊಟ್ಟಿಲ್ಲ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ಸಿದ್ದರಾಮಯ್ಯ ಪುಸ್ತಕ ಬರೀ ಸುಳ್ಳಿನ ಕಂತೆ ಎಂದು ಅಂಕಿಅಂಶ ಮುಂದಿಟ್ಟ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಸಿದ್ದರಾಮಯ್ಯ ಪುಸ್ತಕ ಬರೀ ಸುಳ್ಳಿನ ಕಂತೆ ಎಂದು ಅಂಕಿಸಂಖ್ಯೆ ಮೂಲಕ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 02, 2022 | 6:53 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನವರು ಮಾಡಿದ ಆರೋಪಗಳನ್ನು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿಯವರು ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಸಿದ್ದರಾಮಯ್ಯನವರು ಅಂಕಿ ಅಂಶ, ವಾಸ್ತವಗಳನ್ನೇ ಮರೆಮಾಚಿ ಸುಳ್ಳಿನ ಕಂತೆಯಂತಿರುವ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಇಡೀ ದೇಶದ ಭದ್ರತೆಯನ್ನು ಯುಪಿಎ ಸರ್ಕಾರ ಮರೆತಿದ್ದಾಗ, ಸಬ್ಸಿಡಿಗಳಿಂದ ಸಾಲ ಕೂಪದಲ್ಲಿ ಮುಳುಗಿದ್ದಾಗ ದೇಶವನ್ನ ಸರಿ ದಾರಿಯಲ್ಲಿ ನಡೆಯೋವಂತೆ ಮಾಡಿದ್ದು ಇದೇ ಪ್ರಧಾನಿ ನೇತೃತ್ವದ ಎನ್‌ಡಿಎ ಸರ್ಕಾರ. ನಿತ್ಯವೂ ಶತಕೋಟಿ ರೂಪಾಯಿ ಮೊತ್ತದಲ್ಲಿ ಭ್ರಷ್ಟಾಚಾರ, ಹಗರಣಗಳನ್ನೇ ನಡೆಸುತ್ತಿದ್ದ ಯುಪಿಎ ಸರ್ಕಾರ ಕಾಲದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ತ್ವರಿತವಾಗಿ ಕಾರ್ಯವೆಸಗುವಂತೆ ಮಾಡಿದ್ದು ಈ ಸರ್ಕಾರದ ಹೆಗ್ಗಳಿಕೆ ಎಂದು ಸಚಿವರು ಹೇಳಿದರು.

ದೇಶ 21ನೇ ಶತಮಾನದತ್ತ ದಾಪುಗಾಲಿಕ್ಕುತ್ತಿದ್ದರೂ, ಇನ್ನೂ ಬ್ರಿಟಿಷ್‌ ಕಾಲದ ನೀತಿಗಳು, ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುವ ಕೆಟ್ಟ ಆರ್ಥಿಕ ನೀತಿಗಳನ್ನೇ ಸಿದ್ದರಾಮಯ್ಯ ಅಭಿವೃದ್ಧಿ ಎಂದು ಹೇಳುತ್ತಿದ್ದಾರೆ. ರಾಜ್ಯಕ್ಕೆ ಈಗಿನ ಕೇಂದ್ರ ಸರ್ಕಾರ ಕೊಟ್ಟಷ್ಟು ಅನುದಾನ, ಬೆಂಬಲಗಳನ್ನು ಹಿಂದಿನ ಬೇರಾವ ಸರ್ಕಾರಗಳೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರಿ ಯೋಜನೆಗಳಲ್ಲಿ ರಾಜ್ಯದ ಬೆಳವಣಿಗೆಯ ಕುರಿತಾಗಿ ಅವರು ಅಂಕಿ ಅಂಶಗಳನ್ನು ತೆರೆದಿಟ್ಟಿದ್ದಾರೆ. ಜೀವನಜ್ಯೋತಿ ಬಿಮಾ ಯೋಜನೆಯಲ್ಲಿ 49.95 ಲಕ್ಷ ನೋಂದಣಿಯಾಗಿದ್ದು, 741.42 ಕೋಟಿ ಕ್ಲೇಮು ಆಗಿದೆ. ಸುರಕ್ಷಾ ಬಿಮಾದಲ್ಲಿ 1.1 ಕೋಟಿ ನೋಂದಣಿಯಾಗಿದ್ದು 144.12 ಕೋಟಿ ಕ್ಲೇಮು ಆಗಿದೆ ಎಂದರು. ಹಾಗೆಯೇ ಅಟಲ್‌ ಪಿಂಚಣಿ ಯೋಜನೆಯಲ್ಲಿ 22.06 ಲಕ್ಷ ಚಂದಾದಾರರಿದ್ದು ಯಶಸ್ವಿ ಯೋಜನೆಯಾಗಿದೆ ಎಂದರು.

ಪಕೋಡ ಮಾರಿ ಎಂದು ಪ್ರತಿ ಮಾತಿಗೆ ಲೇವಡಿ ಮಾಡುವ ಸಿದ್ದರಾಮಯ್ಯಗೆ ಸ್ವಾವಲಂಬನೆ, ಸ್ವಉದ್ಯೋಗದ ಬೆಲೆ ಎಳ್ಳಷ್ಟೂ ತಿಳಿದಿಲ್ಲ. ಯುವಕರನ್ನು ಸ್ವಾವಲಂಬಿಸಿಗಳಾಗಿ ಉದ್ಯಮಿಗಳನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅತ್ಯಂತ ಯಶಸ್ವಿ ಯೋಜನೆಯಾಗಿದ್ದು ಇದರಲ್ಲಿ 1.67 ಲಕ್ಷ ಕೋಟಿ ರೂ. ಈವರೆಗೆ ಮಂಜೂರಾಗಿದ್ದು, 1.63 ಲಕ್ಷ ಕೋಟಿ ರೂ. ಸಾಲವನ್ನು ವಿತರಿಸಲಾಗಿದೆ ಎಂದು ಹೇಳಿದರು.

ಇನ್ನು ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆಯಡಿ ಗ್ರೀನ್‌ಫೀಲ್ಡ್‌ ಉದ್ಯಮ ಸ್ತಾಪನೆಗೆ ಎಸ್‌.ಸಿ/ಎಸ್‌ಟಿ ಸಮುದಾಯಗಳಿಗೆ ನೀಡುವ ಸಾಲದಲ್ಲೂ 7940 ಖಾತೆಗಳಿಗೆ ಸಾಲ ಮಂಜೂರಾಗಿದ್ದು 1,845 ಕೋಟಿ ರೂ. ಸಾಲ ನೀಡಲಾಗಿದೆ. ಎಮರ್ಜೆನ್ಸಿ ಕ್ರೆಡಿಟ್‌ ಲೈನ್‌ ಗ್ಯಾರೆಂಟಿ ಯೋಜನೆಯಲ್ಲೂ 9.77 ಲಕ್ಷ ಖಾತೆಗಳಿಗೆ ಸಾಲ ಮಂಜೂರಾಗಿದ್ದು ಒಟ್ಟು 21,709 ಕೋಟಿ ರೂ. ಮಂಜೂರಾಗಿದೆ. ಇದ್ರಲ್ಲಿ 3.59 ಲಕ್ಷ ಖಾತೆಗಳಿಗೆ 16,270 ಕೋಟಿ ರೂ. ಮೊತ್ತ ಬಿಡುಗಡೆಯಾಗಿದೆ ಎಂದು ಹೇಳಿದರು.

ಬೀದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ 1.61 ಲಕ್ಷ ಖಾತೆಗಳು ಮಂಜೂರಾಗಿದ್ದು 1.42 ಲಕ್ಷ ಖಾತೆಗಳಿಗೆ 10 ಸಾವಿರ ವರೆಗೆ ವರ್ಕಿಂಗ್‌ ಕ್ಯಾಪಿಟಲ್‌ ಸಾಲ ನೀಡಲಾಗಿದೆ. ಡಿಜಿಟಲ್‌ ಪಾವತಿಗಳಿಗೆ ಇದರಡಿ ಬಹುಮಾನವನ್ನೂ ನೀಡಲಾಗುತ್ತಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ ಜನಧನ್‌ ಯೋಜನೆ ಆರಂಭಿಸಿದಾಗ ಬಡವರಿಗೆ ಬ್ಯಾಂಕ್‌ ಖಾತೆ ನಿರ್ವಹಣೆ ಸಾಧ್ಯವೇ..? ಅದರಿಂದೇನು ಪ್ರಯೋಜನ ಎಂದು ಹೀಗಳೆದವರು ಇದೇ ಕಾಂಗ್ರೆಸ್ಸಿಗರು. ಆದರೆ ಇದು 1.56 ಕೋಟಿ ಖಾತೆಗಳು ಈ ಯೋಜನೆಯಡಿ ತೆರೆಯಲಾಗಿದ್ದು, ಖಾತೆಗಳಲ್ಲಿ 5,821 ಕೋಟಿ ರೂ. ಇದೆ. ಮಹಿಳೆಯರ ಹೆಸರಿನಲ್ಲಿ 87.38 ಲಕ್ಷ ಖಾತೆಗಳಿದ್ದು ಜನ್‌ಧನ್‌ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಪ್ರಧಾನ ಮಂತ್ರಿ ಕಿಸಾನ್‌ ಕ್ರೆಡಿಟ್ ಕಾರ್ಡ್‌ ಯೋಜನೆಯಡಿಯೂ, 19,950 ಕೋಟಿ ಸಾಲ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಬಡಬಡಿಸುವ ಸಿದ್ದರಾಮಯ್ಯವನರು ಅಂಕಿ ಅಂಶಗಳನ್ನು ನೋಡುವ ಗೋಜಿಗೆ ಹೋಗಿಲ್ಲ. ಕೇವಲ ಸುಳ್ಳು ಆರೋಪ ಮಾಡುತ್ತಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಶೇ.148ರಷ್ಟು ಏರಿಕೆಯಾಗಿದ್ದರೆ, ಕೇಂದ್ರದ ಅನುದಾನದಲ್ಲಿ ಶೇ.129ರಷ್ಟು ಏರಿಕೆಯಾಗಿದೆ. 2009-14 ಅವಧಿಯಲ್ಲಿ 54,396 ಕೋಟಿ ರೂ. ಇದ್ದ ತೆರಿಗೆ ಹಂಚಿಕೆ 2014-19ರ ಅವಧಿಯಲ್ಲಿ 1.35 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಹಾಗೆಯೇ ಯುಪಿಎ ಅವಧಿಯಲ್ಲಿದ್ದ 39, 919 ಕೋಟಿ ರೂ. ಅನುದಾನ ಹಂಚಿಕೆ ಎನ್‌ಡಿಎ ಅವಧಿಯಲ್ಲಿ 91, 374 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. 2022-23ರ ಬಜೆಟ್‌ನಲ್ಲಿ ಹಣಕಾಸು ಆಯೋಗದಡಿ 5, 058 ಕೋಟಿ ರೂ.ಗಳನ್ನು ನೀಡಲು ಯೋಜಿಸಲಾಗಿದೆ. 2009-10ರಲ್ಲಿ ಇದು 2, 476 ಕೋಟಿ ರೂ. ಆಗಿತ್ತು. ಹಿಂದಿನ ಯುಪಿಎ ಸರ್ಕಾರ ರಾಜ್ಯದ ಪಾಲಿಗೆ ಮಲತಾಯಿ ಧೋರಣೆ ತೋರಿಸಿದ್ದು, ಆಗ ಸಿದ್ದರಾಮಯ್ಯನವರೂ ಸೇರಿದಂತೆ ಯಾವ ಕಾಂಗ್ರೆಸ್ಸಿಗರೂ ರಾಜ್ಯಕ್ಕೆ ಬರಬೇಕಾದ ಅನುದಾನ, ತೆರಿಗೆ ಹಂಚಿಕೆಗಳ ಬಗ್ಗೆ ತುಟಿಪಿಟಕ್ಕೆನ್ನಲಿಲ್ಲ ಎಂದು ಜೋಶಿಯವರು ಕಟುವಾಗಿ ಟೀಕಿಸಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿಗೆ ಹಿಂದೆ ಯಾವ ಸರ್ಕಾರಗಳೂ ಕೊಡದಷ್ಟು ಅನುದಾವನ್ನು ಪ್ರಧಾನಿ ಮೋದಿ ಅವರ ಸರ್ಕಾರ ರಾಜ್ಯಕ್ಕೆ ನೀಡುತ್ತಿದೆ. ಯುಪಿಎ ಕಾಲದಲ್ಲಿ ರಸ್ತೆಗಳು ಹೇಗಿದ್ದವು, ಹೆದ್ದಾರಿ ಕೆಲಸಗಳು ಹೇಗೆ ವರ್ಷಾನುಗಟ್ಟಲೆ ಕುಂಟುತ್ತಾ ನಡೆದಿದ್ದವು ಅನ್ನೋದು ಜನರಿಗೆ ಚೆನ್ನಾಗಿ ತಿಳಿದಿದೆ. ಈಗಿನ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಹಲವಾರು ಯೋಜನೆಗಳು ತ್ವರಿತವಾಗಿ ನಡೆಯುತ್ತಿದ್ದು, ಹಲವಾರು ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ. ಪೂರಕವಾಗಿ 2022-23ರಲ್ಲಿ ರಸ್ತೆ ಯೋಜನೆಗಳಿಗೆ 9. 795 ಕೋಟಿ ರೂ. ನೀಡಲು ಯೋಜಿಸಲಾಗಿದೆ. 2022-23ರ ಅಂತ್ಯಕ್ಕೆ 33, 913 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ 1064 ಕಿ.ಮೀ. ಉದ್ದದ ಪ್ರಮುಖ ರಸ್ತೆ ಯೋಜನೆಗಳು ಅನುಷ್ಠಾನಕ್ಕೆ ಬರಲಿವೆ.

ರಾಜ್ಯದಲ್ಲಿ ಎಲೆಕ್ಟ್ರಾನಿಕ್‌ ಉತ್ಪಾದನೆ ಕೇಂದ್ರ, ಮೀನುಗಾರಿಕೆ ಕ್ಲಸ್ಟರ್‌, ಮೆಗಾಫುಡ್‌ ಪಾರ್ಕ್, ಎನ್‌ಐಸಿಡಿಸಿ, ಫಾರ್ಮಾ, ವಿಶೇಷ ಆರ್ಥಿಕ ವಲಯ ಮತ್ತು ಜವಳಿ ವಲಯಕ್ಕೆ ಕೇಂದ್ರ ಬೆಂಬಲ ನೀಡುತ್ತಿದ್ದು, ಪಿಎಂ ಗತಿಶಕ್ತಿ ರಾಷ್ಟ್ರೀಯ ಪ್ಲ್ಯಾನ್‌ ಭಾಗವಾಗಿ 62 ನೋಡ್‌ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.

ಕೇಂದ್ರ ದೂರದೃಷ್ಟಿಯ ಯೋಜನೆಗಳಿಂದ ರಾಜ್ಯ ಆದಾಯ ಹೆಚ್ಚಳದೊಂದಿಗೆ, ಅಭಿವೃದ್ಧಿಯ ಹೊಸ ಶಕೆಗೆ ತೆರೆದುಕೊಂಡಿದೆ. ನೋಟ್ ಬ್ಯಾನ್‌ ಮೂಲಕ ವಿಶ್ವವೇ ಮೂಗಿನ ಮೇಲೆ ಬೆರಳಿಡುವ ರೀತಿಯಲ್ಲಿ ದಾಖಲೆಯ ಡಿಜಿಟಲ್‌ ವಹಿವಾಟನ್ನು ಭಾರತ ಮಾಡುತ್ತಿದೆ. ಎಲ್ಲ ರಂಗಗಳಲ್ಲೂ ವಿಶ್ವದಲ್ಲೇ ನಂಬರ್‌ 1 ಆಗುವತ್ತ ದಾಪುಗಾಲಿಕ್ಕುತ್ತಿದೆ. ಯುಪಿಎ ಭ್ರಷ್ಟಾಚಾರದಿಂದಲೇ ಮನೆಮಾತಾಗಿತ್ತು. ಆದರೆ ಮೋದಿಯವರ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂದ ಜಾಗತಿಕ ನಾಯಕರೂ ಭಾರತವನ್ನು ಗುರುತಿಸುವಂತಾಗಿದೆ.

ಕೋವಿಡ್ ಮಹಾಮಾರಿ ಜಗತ್ತನ್ನೇ ನರಳುವಂತೆ ಮಾಡಿದ್ದಾಗ 200 ಕೋಟಿ ವ್ಯಾಕ್ಸಿನ್ ಗಳನ್ನು ತನ್ನ ಪ್ರಜೆಗಳಿಗೆ ಉಚಿತವಾಗಿ ನೀಡಿದ್ದು ಭಾರತ ಮಾತ್ರ. ಯುರೋಪ್‌ನ ಹಲವು ರಾಷ್ಟ್ರಗಳ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚು ವ್ಯಾಕ್ಸಿನ್‌ ಅನ್ನು ಭಾರತ, ತನ್ನ ಪ್ರಜೆಗಳಿಗೆ ಉಚಿತವಾಗಿ ನೀಡಿದೆ.

ಕೋವಿಡ್‌ನಂತ ತುರ್ತು ಸಂದರ್ಭದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ದೇಶದ ಜನರಿಗೆ ಉಚಿತ ಆಹಾರವನ್ನು ಒದಗಿಸುವ ಕೆಲಸವನ್ನೂ ಎನ್‌ಡಿಎ ಸರ್ಕಾರ ಮಾಡಿದೆ. ಹಿಂದೆಂದೂ ಕಂಡು ಕೇಳರಿಯದ ರೀತಿಯ ಅತಿ ಸಂಕೀರ್ಣ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು ಇದೇ ಮೋದಿ ಸರ್ಕಾರ. ಆದರೆ ಇದನ್ನು ಸಿದ್ದರಾಮಯ್ಯ ಮರೆತಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಅದು ಕರ್ನಾಟಕಕ್ಕೆ ಕೊಟ್ಟ ಕೊಡುಗೆ ಏನು..? ತನ್ನ ಸಾಧನೆ ಏನು..? ಅಂತ ಮೊದಲು ಸಿದ್ದರಾಮಯ್ಯನವರು ಹೇಳಲಿ. ಯುಪಿಎ ಅವಧಿಯಲ್ಲಿ ಒಂದು ಕುಟುಂಬ ಅಭಿವೃದ್ಧಿಯಾಗಿದ್ದು ಬಿಟ್ಟರೆ ಬೇರೇನೂ ಆಗಿಲ್ಲ.

ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿರುವ ಕೇಂದ್ರ ಸರ್ಕಾರವನ್ನು ವಿರೋಧ ಪಕ್ಷವಾಗಿ ವಿರೋಧಿಸುವುದೇ ನಮ್ಮ ಕೆಲಸ ಎಂಬ ಕಾರಣಕ್ಕೆ ವಿರೋಧಿಸುವ ಚಾಳಿ ಬೇಡ. ಸತ್ಯಾಂಶಗಳನ್ನು ತಿಳಿದುಕೊಳ್ಳದೇ ತಮ್ಮ ಮಗನ ವಯಸ್ಸಿನ ನಕಲಿ ಗಾಂಧಿ, ಅಪ್ರಬುದ್ಧ ರಾಜಕಾರಣಿ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಸಿದ್ದರಾಮಯ್ಯ ಗುಲಾಮಗಿರಿ ಮಾಡುತ್ತಿದ್ದಾರೆ. ವಿಚಿತ್ರ ಹೇಳಿಕೆ ನೀಡುತ್ತಿದ್ದಾರೆ.

ಕಾಂಗ್ರೆಸ್‌ ಸೇರಿದಂತೆ ಅದರ ನಾಯಕರು ಹೇಳುತ್ತಿರುವ ಸುಳ್ಳುಗಳನ್ನು, ದಾರಿತಪ್ಪಿಸುವ ಹೇಳಿಕೆಗಳನ್ನು ಪರಾಮರ್ಶಿಸುವಷ್ಟು ಈಗ ಜನರೂ ಬುದ್ಧಿವಂತರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಗಡಿಭಾಗದಲ್ಲಿ ಹಾಗೂ ದೇಶದೊಳಗೆ ಭಯೋತ್ಪಾದಕ ಚಟುವಟಿಕೆಗಳು ತೀವ್ರವಾಗಿತ್ತು, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಂತಹ ಭಯೋತ್ಪಾದಕ ಚಟುವಟಿಕೆಗಳ ನಿಯಂತ್ರಿಸಿ ರಾಷ್ಟ್ರೀಯ ಸುರಕ್ಷೆ ಕಠಿಣ ಕ್ರಮಗೊಳ್ಳುವಲ್ಲಿ ಯಶಸ್ವಿಯಾಗಿದೆ.

ಹೀಗಿದ್ದರೂ ಸಹ ಸಿದ್ದರಾಮಯ್ಯನವರು ವಿತಂಡವಾದ ಮುಂದಿಡುತ್ತಾ ಇಂತಹ ಹೇಳಿಕೆಗಳನ್ನು ಕೊಡುತ್ತಿರುವುದು ನೋಡಿದರೆ ಇವರೇನು ಸಿದ್ದರಾಮಯ್ಯನವರೋ..? ಅಥವಾ ಸುಳ್ಳುರಾಮಯ್ಯನವರೋ…? ಎಂಬ ಸಂದೇಶ ಮೂಡುತ್ತಿದೆ ಎಂದು ಪ್ರಲ್ಹಾದ ಜೋಶಿಯವರು ಪತ್ರಿಕಾ ಹೇಳಿಕೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Published On - 5:36 pm, Sat, 2 July 22

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ