AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 813 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಸೂರ್ಯಸಿಟಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಮಂಡ್ಯ ನಾಲೆಗಳ ಆಧುನೀಕರಣಕ್ಕೆ 100 ಕೋಟಿ ರೂ. ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು
Cabinet (ಸಂಗ್ರಹ ಚಿತ್ರ)Image Credit source: google
ಪ್ರಸನ್ನ ಗಾಂವ್ಕರ್​
| Edited By: |

Updated on: Mar 12, 2026 | 10:06 PM

Share

ಬೆಂಗಳೂರು, ಮಾರ್ಚ್​ 12: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಒಟ್ಟು 28 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮಂಡ್ಯದ ಮೈಶುಗರ್ ಕಾರ್ಖಾನೆ ದುರಸ್ತಿ ಸೇರಿದಂತೆ 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

813 ಕೋಟಿ ರೂ. ವೆಚ್ಚದಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ

ಕೆಎಚ್‌ಬಿ ಸೂರ್ಯಸಿಟಿಯಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮಹತ್ವದ ಅನುಮೋದನೆ ನೀಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಸುಮಾರು 75 ಎಕರೆ ಜಮೀನಿನಲ್ಲಿ ಸುಮಾರು 813 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಕ್ರೀಡಾಂಗಣದ ಸುತ್ತಮುತ್ತ ವಾಣಿಜ್ಯ ಮಳಿಗೆಗಳು ಹಾಗೂ ಇತರೆ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯೂ ರೂಪಿಸಲಾಗಿದೆ. ಈ ಕಟ್ಟಡ ಕಾಮಗಾರಿಗಳ ಪರಿಷ್ಕೃತ ವೆಚ್ಚದ ವಿವರಗಳನ್ನು ಸಿದ್ಧಪಡಿಸಿ ಮುಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಹತ್ವದ ಹೆಜ್ಜೆಯಾಗಲಿದೆ.

682 ಕೋಟಿ ರೂ ವೆಚ್ಚದಲ್ಲಿ ಶಾಲೆಗಳ ಉನ್ನತೀಕರಣ

76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಳಿಸಲು ನಿರ್ಧರಿಸಲಾಗಿದೆ. 41 ಉರ್ದು ಮಾಧ್ಯಮ ಶಾಲೆ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ 682 ಕೋಟಿ ರೂ ವೆಚ್ಚದಲ್ಲಿ ಉನ್ನತೀಕರಿಸಲು ಸಂಪುಟ ಸಮ್ಮತಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಇನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ನಾಲೆ ಅಭಿವೃದ್ಧಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮಂಡ್ಯ ಕ್ಷೇತ್ರದ ಕಾವೇರಿ ಶಾಖಾ ನಾಲೆ, ಕೆರೆಗೋಡು ಶಾಖಾ ನಾಲೆ, ಶಿಂಷಾ ಶಾಖಾ ನಾಲೆ ಸೇರಿದಂತೆ ನಾಲ್ಕು ಕಾವೇರಿ ವಿತರಣಾ ನಾಲೆಗಳು ಮತ್ತು ಪಿಕಪ್ ನಾಲೆಗಳ ಆಧುನೀಕರಣಕ್ಕೆ 100 ಕೋಟಿ ರೂ ಅನುದಾನ ನೀಡಲು ಸಚಿವ ಸಂಪುಟ ಅಸ್ತು ಎಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us