ಈಶ್ವರಪ್ಪಗೆ ‘ಬಂಡುಕೋರ ನಾಯಕ’ ಎಂದ ಸಿದ್ದರಾಮಯ್ಯ ಮೋದಿಯನ್ನು ‘ವೀಕ್ ಪಿಎಂ’ ಎಂದು ಜರಿದರು!

ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದಲ್ಲಿ ಭಾಷಣ ಮಾಡುತ್ತಾ, ಕರ್ನಾಟಕದಲ್ಲಿ ಸೂಪರ್ ಸಿಎಂ, ಸ್ಯಾಡೋ ಸಿಎಂ, ವೈಟಿಂಗ್ ಸಿಎಂ ಇದ್ದಾರೆ ಎಂದು ಹೇಳಿಕೆ ಸಿದ್ದರಾಮಯ್ಯ ಮತ್ತು ಇವರ ಪುತ್ರ ಯತೀಂದ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವ್ಯಂಗ್ಯವಾಡಿದ್ದರು. ಈ ಬಗ್ಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ, ಈಶ್ವರಪ್ಪರನ್ನು 'ಬಂಡುಕೋರ ನಾಯಕ' ಎಂದು, ಮೋದಿಯನ್ನು 'ವೀಕ್ ಪಿಎಂ' ಎಂದು ಕರೆದಿದ್ದಾರೆ.

ಈಶ್ವರಪ್ಪಗೆ 'ಬಂಡುಕೋರ ನಾಯಕ' ಎಂದ ಸಿದ್ದರಾಮಯ್ಯ ಮೋದಿಯನ್ನು 'ವೀಕ್ ಪಿಎಂ' ಎಂದು ಜರಿದರು!
ಕೆಎಸ್ ಈಶ್ವರಪ್ಪ ಅವರನ್ನು ಬಂಡುಕೋರ ನಾಯಕ ಎಂದು ಕರೆದ ಸಿದ್ದರಾಮಯ್ಯ
Follow us
Anil Kalkere
| Updated By: Rakesh Nayak Manchi

Updated on: Mar 19, 2024 | 6:06 PM

ಬೆಂಗಳೂರು, ಮಾ.19: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿವಮೊಗ್ಗದಲ್ಲಿ ಭಾಷಣ ಮಾಡುತ್ತಾ, ಕರ್ನಾಟಕದಲ್ಲಿ ಸೂಪರ್ ಸಿಎಂ, ಸ್ಯಾಡೋ ಸಿಎಂ, ವೈಟಿಂಗ್ ಸಿಎಂ ಇದ್ದಾರೆ ಎಂದು ಹೇಳಿಕೆ ಸಿದ್ದರಾಮಯ್ಯ (Siddaramaiah) ಮತ್ತು ಇವರ ಪುತ್ರ ಯತೀಂದ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವ್ಯಂಗ್ಯವಾಡಿದ್ದರು. ಈ ಬಗ್ಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ ಅವರು ಹಿಂದುತ್ವವಾದಿ ಕೆಎಸ್ ಈಶ್ವರಪ್ಪ (KS Eshwarappa) ಅವರನ್ನು ‘ಬಂಡುಕೋರ ನಾಯಕ’ ಎಂದು ಕರೆಯುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅಲ್ಲದೆ, ಮೋದಿಯನ್ನು ‘ವೀಕ್ ಪಿಎಂ’ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿ ಅವರ ಪುತ್ರ ರಾಘವೇಂದ್ರ ವಿರುದ್ಧ ಬಂಡಾಯ ಸ್ಪರ್ಧೆ (ಪಕ್ಷೇತರ ಸ್ಪರ್ಧೆ) ಘೋಷಿಸಿರುವ ಹಿಂದುತ್ವ ವಾದಿ, ಹಿಂದೂ ಫಯರ್​ಬ್ರಾಂಡ್ ಎಂದು ಕರೆಯಲ್ಪಡುವ ಈಶ್ವರಪ್ಪ ಅವರನ್ನು ಸಿದ್ದರಾಮಯ್ಯ ಅವರು ಬಂಡುಕೋರ ನಾಯಕ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದ ಎಕ್ಸ್​ನಲ್ಲಿ ಸರಣಿ ಪೋಸ್ಟ್ ಮಾಡಿದ ಸಿದ್ದರಾಮಯ್ಯ, “ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಎಕ್ಸ್ ಪೋಸ್ಟ್

“ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ” ಎಂದರು.

“ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಕರ್ನಾಟಕದ ಕಾಂಗ್ರೆಸ್​ನಲ್ಲಿ ಸೂಪರ್​ ಸಿಎಂ, ಸ್ಯಾಡೋ ಸಿಎಂ, ವೈಟಿಂಗ್ ಸಿಎಂ ಇದ್ದಾರೆ: ಪ್ರಧಾನಿ ಮೋದಿ

“ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ ನರೇಂದ್ರ ಮೋದಿ? ಎಂದು ಪ್ರಶ್ನಿಸಿದ್ದಾರೆ.

“ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂದು ಪ್ರಶ್ನಿಸಿದರು.

Siddaramaiah tweet

“ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಬಿಜೆಪಿ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ..!! ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ನರೇಂದ್ರ ಮೋದಿ ಅವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ