ನನ್ನ ಕುರಿಗಳು ಮೃತಪಟ್ಟಿದ್ದಕ್ಕೆ ನಾನೇ ಅರ್ಜಿ ಸಲ್ಲಿಸಿದ್ದೇನೆ, ಆದರೆ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ: ಸಿದ್ದರಾಮಯ್ಯ
ಯೋಜನೆ ಸ್ಥಗಿತಗೊಳಿಸುವುದಿಲ್ಲ. ಒಟ್ಟು 38 ಕೋಟಿ ರೂಪಾಯಿ ಬಾಕಿ ಇದೆ. 2ರಿಂದ3 ದಿನದಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು: ಕುರಿಗಳು ಮೃತಪಟ್ಟರೆ ಪರಿಹಾರ ನೀಡುವ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ನನ್ನ ಕುರಿಗಳು ಮೃತಪಟ್ಟಿದ್ದಕ್ಕೆ ನಾನೇ ಅರ್ಜಿ ಸಲ್ಲಿಸಿದ್ದೇನೆ. ಆದರೆ ಈವರೆಗೂ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ ಎಂದು ವಿಧಾನಸಭೆಯಲ್ಲಿ ಹೇಳುವ ಸೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಯೋಜನೆಗಳು ಜನರನ್ನು ತಲುಪುತ್ತಿಲ್ಲ ಎಂದು ಸರ್ಕಾರವನ್ನು ದೂಷಿಸಿದ್ದಾರೆ.
ಸಿದ್ದರಾಮಯ್ಯ ಅವರ ಮಾತಿಗೆ ಈ ವೇಳೆ ಧ್ವನಿಗೂಡಿಸಿದ ರಮೇಶ್, ಈ ಯೋಜನೆ ಸ್ಥಗಿತಗೊಳಿಸಿದ ಬಗ್ಗೆ ಇಲಾಖೆಯ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ರಮೇಶ್ ಕುಮಾರ್ ಮಾತಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಉತ್ತರ ನೀಡಿದ್ದು, ಯೋಜನೆ ಸ್ಥಗಿತವಾಗಿಲ್ಲ, ಪರಿಹಾರ ನೀಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಪರಿಹಾರ ನೀಡಲಾಗಿದೆ, ಬಾಕಿ ಉಳಿದರೆ ನಾವು ಅದನ್ನು ಕೊಡುತ್ತೇವೆ ಎಂದು ಉತ್ತರಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಈ ವಿಚಾರವಾಗಿ ಮುಂದುವರಿದು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನ್ನ ಕ್ಷೇತ್ರದಲ್ಲಿ ಮೃತಪಟ್ಟ ಕುರಿಗಳಿಗೆ ಪರಿಹಾರ ನೀಡಿದ್ದೇನೆ. ಯೋಜನೆ ಸ್ಥಗಿತಗೊಳಿಸುವುದಿಲ್ಲ. ಒಟ್ಟು 38 ಕೋಟಿ ರೂಪಾಯಿ ಬಾಕಿ ಇದೆ. 2 ರಿಂದ 3 ದಿನದಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತಿಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಸಿಎಂ ಮಾತಿನ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ನಾನು ಎಲ್ಲಿಗೂ ಓಡಿ ಹೋಗಲ್ಲ, ಮುಂದಿನ ಚುನಾವಣೆಗೂ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ
ಇನ್ನು ಮುಂದೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Published On - 5:54 pm, Mon, 15 March 21