ಕುಮಾರಸ್ವಾಮಿ ಜನತಾದರ್ಶನಕ್ಕೆ ಅಧಿಕಾರಿಗಳ ಗೈರು: ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 05, 2024 | 3:56 PM

ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್​​.ಡಿ ಕುಮಾರಸ್ವಾಮಿ ಜನತಾ ದರ್ಶನ ಆಯೋಜಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದರು. ಈ ವಿಚಾರವಾಗಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದರು. ಸದ್ಯ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ವಿಪಕ್ಷ ನಾಯಕರ ಸಭೆಗೆ ಹೋಗದಂತೆ ಆದೇಶಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಜನತಾದರ್ಶನಕ್ಕೆ ಅಧಿಕಾರಿಗಳ ಗೈರು: ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ
ಕುಮಾರಸ್ವಾಮಿ ಜನತಾದರ್ಶನಕ್ಕೆ ಅಧಿಕಾರಿಗಳ ಗೈರು: ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ
Follow us on

ಬೆಂಗಳೂರು, ಜುಲೈ 05: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy ಜನತಾದರ್ಶನಕ್ಕೆ ಅಧಿಕಾರಿಗಳ ಗೈರು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ವಿಪಕ್ಷ ನಾಯಕರ ಸಭೆಗೆ ಅಧಿಕಾರಿಗಳು ಹೋಗಬಾರದು ಎಂದು ಆದೇಶ ಮಾಡಿದ್ರಲ್ಲಾ ಹಿಂದೆ ಅವರು? ಕುಮಾರಸ್ವಾಮಿಗಾಗಿ ಆದೇಶ ಮಾಡಿದ್ದಲ್ಲ ಅದು. ಹಿಂದೆಯಿಂದಲೂ ಇದೆ, ಅದನ್ನು ಮುಂದುವರಿಸಿದ್ದೇವೆ. ಜನತಾ ದರ್ಶನ ಕಾರ್ಯಕ್ರಮ ಸಿಎಂ, ಡಿಸಿಎಂ ಮಾಡುವುದು ಎಂದು ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಜನತಾದರ್ಶನಕ್ಕೂ ನಮಗೂ ಸಂಬಂಧ ಇಲ್ಲ; ಡಿಕೆ ಶಿವಕುಮಾರ್

ಈ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕೇಂದ್ರ ಸಚಿವರಿಗೆ ಎಷ್ಟು ಶಿಷ್ಟಾಚಾರ ಪಾಲಿಸಬೇಕೋ ಅಷ್ಟು ಮಾಡುತ್ತಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನತಾದರ್ಶನ ಮಾಡ್ಲಿ ಬಿಡಿ. ಜನರನ್ನು ಇಟ್ಕೊಂಡು ಹಳ್ಳಿಹಳ್ಳಿಗೆ ತಿರುಗಲಿ, ಬೇಡ ಅಂದವರು ಯಾರು. ನಮಗೂ ಇದಕ್ಕೂ ಸಂಬಂಧ ಇಲ್ಲ, ನಮಗೆ ಗೊತ್ತೇ ಇಲ್ಲ. ನಾವು ದೆಹಲಿಗೆ ಹೋಗಿ ಏನಾದ್ರೂ ಮಾಡುವುದಕ್ಕಾಗುತ್ತಾ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಪರ ಸತೀಶ್ ಜಾರಕಿಹೊಳಿ ಬ್ಯಾಟಿಂಗ್

ಇನ್ನು ಹೆಚ್​ಡಿ ಕುಮಾರಸ್ವಾಮಿ​ ಆರೋಪಕ್ಕೆ ಸಚಿವ ಸತೀಶ್ ಜಾರಕಿಹೊಳಿ ದನಿಗೂಡಿಸಿದ್ದಾರೆ. ಅಧಿಕಾರಿಗಳಿಗೆ ಯಾರು ಸೂಚಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ಅವರು ಸಭೆ ಕರೆದಾಗ ಅಧಿಕಾರಿಗಳು ಹೋಗಲೇಬೇಕಾಗುತ್ತೆ. ಸಂಸದರು ಹೋಗದಿದ್ದರೆ ಅದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ: ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು: ಸರ್ಕಾರದ ವಿರುದ್ಧ ಗರಂ

ನಮ್ಮ ಜಗದೀಶ್ ಶೆಟ್ಟರ್ ಸಭೆ ಮಾಡಿದಾಗ ಹೋಗುತ್ತಾರೆ. ನಮ್ಮ ಜಿಲ್ಲೆಯ ಎಲ್ಲ ಅಧಿಕಾರಿಗಳು ಎಂಪಿ ಸಭೆಗೆ ಹೋಗಿದ್ದರು. ಸಂಸದರನ್ನು ಸಚಿವರು ಸ್ವಾಗತ ಮಾಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಪರ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಚನ್ನಪಟ್ಟಣ ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿವೆ: ಹೆಚ್ ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ತವರು ಜಿಲ್ಲೆ ಮಂಡ್ಯದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದರು. ಆದರೆ, ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದರು. ಇದು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ. ಹೀಗಾಗಿ ಅಧಿಕಾರಿಗಳು ಗೈರಾಗಿದ್ದರಿಂದ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಗರಂ ಆಗಿದ್ದರು. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.