AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನರ್​​ಗೆ ದೂರು, ಕೋರ್ಟ್​​ಗೆ ಅರ್ಜಿ: ಸ್ಟಿಂಗ್ ಆಪರೇಷನ್ ಬಗ್ಗೆ ಸ್ಫೋಟಕ ಸಂಗತಿಗಳೊಂದಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಕರ್ನಾಟಕ ರಾಜಕೀಯದಲ್ಲಿ ಈಗ ಸ್ಟಿಂಗ್ ಆಪರೇಷನ್ ಸುನಾಮಿ. ಕಳೆದ ಏಳೆಂಟು ದಿನಗಳಿಂದ ಶುರುವಾಗಿರುವ ಈ ರಾಜಕೀಯ ಸಂಚಲನ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಡೆಯಾಜ್ಞೆ ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಇತ್ತ ಕುಮಾರಸ್ವಾಮಿ ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ.ಇತ್ತ ಕಾಂಗ್ರೆಸ್ ನಾಯಕರಿಂದಲೂ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ಎಲ್ಲಾ ಬೆಳವಣಿಗಗಳ ನಡುವೆ ಈ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಕಮಿಷನರ್​​ಗೆ ದೂರು, ಕೋರ್ಟ್​​ಗೆ ಅರ್ಜಿ: ಸ್ಟಿಂಗ್ ಆಪರೇಷನ್ ಬಗ್ಗೆ ಸ್ಫೋಟಕ ಸಂಗತಿಗಳೊಂದಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
Siddaramaiah
ಪ್ರಸನ್ನ ಗಾಂವ್ಕರ್​
| Edited By: |

Updated on: Oct 13, 2026 | 6:10 PM

Share

ಬೆಂಗಳೂರು, ಅಕ್ಟೋಬರ್ 13: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಕಿಡಿ ಹೊತ್ತಿಕೊಂಡಿದ್ದು, ಕ್ಷಣ ಕ್ಷಣಕ್ಕೂ ಜ್ವಾಲೆಯಾಗಿ ಮಾರ್ಪಡುತ್ತಿದೆ. ಆರಂಭದಲ್ಲಿ ಸಚಿವರಿಗೆ ನೀಡಿದ ಎಚ್ಚರಿಕೆ ನೀಡಿತ್ತಾದರೂ ಆಮೇಲೆ ಆರೋಪ-ಪ್ರತ್ಯಾರೋಪಗಳ ನಡುವೆ ಸಿದ್ದರಾಮಯ್ಯನವರನ್ನು ಸ್ಟಿಂಗ್ ಆಪರೇಷನ್ ಬಲೆಗೆ ಬೀಳಿಸಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಸಿದ್ದರಾಮಯ್ಯ, ಅಪಪ್ರಚಾರಕ್ಕೆ ತಡೆಯಾಜ್ಞೆ ಕೋರಿ ಕೋರ್ಟ್​ ಮೊರೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಸ್ಟಿಂಗ್ ಆಪರೇಷನ್ ಸುತ್ತ ರಾಜಕೀಯದ ಹೊಸ ಅಧ್ಯಾಯವೇ ಶುರುವಾಗಿದೆ. ಹೀಗಾಗಿ ಸಂಬಂಧ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ. ಸ್ಟ್ರಿಂಗ್ ಆಪರೇಷನ್ ವಿಡಿಯೋ ಬಳಸಿಕೊಂಡು ಕೆಲವು ಕಿಡಿಗೇಡಿಗಳು, ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದಾರೆ.

ಈ ಬಗ್​ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ತೆರೆದ ಪುಸ್ತಕದಂತಿರುವ ನನ್ನ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎನ್ನುವ ವಿಶ್ವಾಸ ನನಗಿದೆ. ಯಾವ ಭಯವೂ ನನಗಿಲ್ಲ, ಅಂತಿಮವಾಗಿ ಸತ್ಯವೇ ಗೆಲ್ಲುತ್ತೆಂಬ ವಿಶ್ವಾಸವಿದೆ. ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ಬೆಂಗಳೂರು ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸ್ಟಿಂಗ್​​ ಆಪರೇಷನ್​​ ವಿಚಾರದಲ್ಲಿ ಮೌನ ಮುರಿಯುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಪಕ್ಷಗಳ ಆಗ್ರಹ

ನನ್ನ ಹೆಸರಿನ ಸ್ಟ್ರಿಂಗ್ ಆಪರೇಷನ್ ವಿಡಿಯೋ ತಡೆಗೆ ಅರ್ಜಿ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ.ಈ ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಹೆಸರಿನ ಉಲ್ಲೇಖ ಇರುವ ಈ ಸ್ಟ್ರಿಂಗ್ ಆಪರೇಷನ್ ವಿಡಿಯೋ ಅನ್ನು ಯಾವುದೇ ಪತ್ರಿಕೆ, ಚಾನೆಲ್ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆನೀಡಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಯಾವ ಭಯವೂ ನನಗಿಲ್ಲ

ಈ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ನನ್ನ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎನ್ನುವ ವಿಶ್ವಾಸ ನನಗಿದೆ. ಆದರೆ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನಾನು ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆಯೇ ಹೊರತು ಉಳಿದಂತೆ ಯಾವ ಭಯವೂ ನನಗಿಲ್ಲ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವ ವಿಶ್ವಾಸವೂ ನನಗಿದೆ ಎಂದಿದ್ದಾರೆ.

ಕೋರ್ಟ್​​​ಗೆ ಹೋಗಿರುವ ಹಿಂದಿನ ಕಾರಣ ತಿಳಿಸಿದ ಸಿದ್ದರಾಮಯ್ಯ

ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು. ಇಲ್ಲಿಯ ವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ. ಈ ಬಗ್ಗೆ ನನಗೆ ವಿಷಾದವಿದೆ.

ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ. ಅಲ್ಲಿಯ ವರೆಗೆ ಮಾಧ್ಯಮಗಳು ಮಾತ್ರವಲ್ಲ ಸಾರ್ವಜನಿಕರು ಕೂಡಾ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕೆಂದು ಕೋರುತ್ತೇನೆ.

ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರವಾಗಿ ಆರೋಪ-ಪ್ರತ್ಯಾರೋಪದ ವಿಚಾರವಾಗಿ ಉಳಿದಿಲ್ಲ. ಇದರ ಹಿಂದೆ ಯಾರಿದ್ದಾರೆ? ಯಾರನ್ನು ಗುರಿಯಾಗಿಸಲಾಗಿದೆ? ರಾಜಕೀಯ ನಾಯಕರನ್ನು ಬ್ಲ್ಯಾಕ್‌ಮೇಲ್ ಮಾಡುವ ಪ್ರಯತ್ನ ನಡೆದಿದೆಯೇ? ಅಥವಾ ಆರೋಪಗಳ ಹಿಂದೆ ಬೇರೆ ರಾಜಕೀಯ ಲೆಕ್ಕಾಚಾರ ಇದೆಯೇ? ಎಂಬ ಪ್ರಶ್ನೆಗಳು ಎದ್ದಿವೆ. ಈ ಎಲ್ಲಾ ಅನುಮಾನಗಳಿಗೆ ಉತ್ತರ ಸಿಗಬೇಕಾದರೆ ಆರೋಪಗಳಷ್ಟೇ ಸಾಲದು. ನಿಷ್ಪಕ್ಷಪಾತ ತನಿಖೆ ಮತ್ತು ಪರಿಶೀಲಿಸಬಹುದಾದ ಸಾಕ್ಷ್ಯಗಳು ಹೊರಬರಬೇಕಿದೆ. ಅಲ್ಲಿಯವರೆಗೆ ಸ್ಟಿಂಗ್ ಆಪರೇಷನ್ ಸುತ್ತಲಿನ ರಾಜಕೀಯ ಸಂಘರ್ಷ ಮುಂದುವರಿಯುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ