AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಆಸನ ವ್ಯವಸ್ಥೆ: 5ನೇ ಸಾಲಿನ ಬಗ್ಗೆ ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ನವದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಯ ಸಾಲಿನಲ್ಲಿ ಕುಳಿತಿರುವುದು ಚರ್ಚೆಗೆ ಗ್ರಾಸವಾಗಿದ್ದು, ವಿಪಕ್ಷಗಳು, ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿಕೊಂಡ ರೀತಿಗೆ ಬೇಸರ ಹೊರಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್​​​ ನಡೆ ಬಗ್ಗೆ ಟೀಕಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಸಿದ್ದರಾಮಯ್ಯ 5ನೇ ಸಾಲಲ್ಲಿ ಕುಳಿತ ಬಗ್ಗೆ ಕಾರಣ ಬಿಚ್ಚಿಟ್ಟು ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಸೋನಿಯಾ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಆಸನ ವ್ಯವಸ್ಥೆ: 5ನೇ ಸಾಲಿನ ಬಗ್ಗೆ ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ
Sidddaramaiah
ರಮೇಶ್ ಬಿ. ಜವಳಗೇರಾ
|

Updated on:Nov 19, 2026 | 6:46 PM

Share

ಬೆಂಗಳೂರು, (ನವೆಂಬರ್ 19):  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿನ ಕೆಲವು ನಾಯಕರಿಗೆ ವ್ಯವಸ್ಥೆ ಮಾಡಲಾಗಿದ್ದ ಸೀಟಿಂಗ್ ಅರೇಂಜ್ಮೆಂಟ್ ಬಗ್ಗೆ ಕರ್ನಾಟಕದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಸಿದ್ದರಾಮಯ್ಯನವರ ಆಸನದ ಕುರಿತು ಚರ್ಚೆ, ಟೀಕೆ, ಟ್ರೋಲ್ ಮಾಡಲಾಗುತ್ತಿದೆ. ಇದಕ್ಕೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಯನ್ನು ನೀಡಿದ್ದಾರೆ. ಹಾಲೀ ಮತ್ತು ಮಾಜಿ ಸಿಎಂಗಳಿಗೆ ಮೊದಲ ಸಾಲಿನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇರಲಿಲ್ಲ. ತಡವಾಗಿ ಹೋಗಿದ್ದಕ್ಕೆ ಹಿಂದಿನ ಸಾಲಿನಲ್ಲಿ ಕೂರಬೇಕಾಯ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ

ಈ ಬಗ್ಗೆ ಸಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಅಂತೆ ಕಂತೆ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ. ಕಾಂಗ್ರೆಸ್ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನಾನು 5ನೇ ಸಾಲಿನಲ್ಲಿ ಕೂತ ಕಾರಣಕ್ಕಾಗಿ ಕಾಂಗ್ರೆಸ್‌ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿದೆಯೇ? ಎಂಬ ವಿಷಯದ ಬಗ್ಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮಾಧ್ಯಮಗಳು ಹಾಗೂ ಜಾಲತಾಣಗಳಲ್ಲಿ ನನ್ನ ಹಿತೈಷಿಗಳು, ಅಭಿಮಾನಿಗಳು ಹೀಗೆ ಎಲ್ಲರೂ ಮಾತನಾಡಿದ್ದನ್ನು ಗಮನಿಸಿದ್ದೇನೆ. ಈ ವಿಷಯದ ಕುರಿತಾದ ಚರ್ಚೆಯನ್ನು ಇಲ್ಲಿಗೆ ಕೊನೆಗಾಣಿಸುವ ಉದ್ದೇಶದಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ.

ನಾನು ಸಮಾರಂಭಕ್ಕೆ ತಡವಾಗಿ ತೆರಳಿದ್ದೆ, ಹಾಗಾಗಿ ಮುಂದಿನ ಸಾಲಿನಲ್ಲಿದ್ದ ಖುರ್ಚಿಗಳೆಲ್ಲವೂ ಭರ್ತಿಯಾಗಿದ್ದವು. ಹಿಂದಿನ‌ ಸಾಲಿನಲ್ಲಿ ಕುರ್ಚಿ ಖಾಲಿಯಿದ್ದ ಕಾರಣಕ್ಕೆ ಅಲ್ಲಿಯೇ ಕುಳಿತೆ. ಅದು ನನಗಾಗಿ‌ ನಿಗದಿ ಮಾಡಿದ್ದ ಆಸನವಲ್ಲ, ಮೊದಲು ಬಂದವರು ಮುಂದೆ ಕೂತಿದ್ದರು ಅಷ್ಟೆ ಎಂದು ಬರೆದುಕೊಳ್ಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಕುಳಿತ ಬಿಜೆಪಿಯ ಅಮರಿಂದರ್ ಸಿಂಗ್

ಕಾರ್ಯಕ್ರಮದ ಆಸನ ಚರ್ಚೆಗೆ ಗ್ರಾಸ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ‘Belonging: A Journey of Love’ ಪುಸ್ತಕ ನವದೆಹಲಿಯಲ್ಲಿ ಬಿಡುಗಡೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ಇಂಡಿ ಒಕ್ಕೂಟದ ಪ್ರಮುಖ ನಾಯಕರ ಹಾಜರಾಗಿದ್ದರು. ಇನ್ನು ಕರ್ನಾಟಕದಿಂದ ಹಾಲಿ ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಆದ್ರೆ,  ಮೊದಲ ಸಾಲಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಸ್ಥಾನ ನೀಡಿರಲಿಲ್ಲ. ಇನ್ನು, ಸಿದ್ದರಾಮಯ್ಯನವರಿಗೆ ಐದನೇ ಸಾಲಿನಲ್ಲಿ ಕೂರಿಸಲಾಗಿತ್ತು. ಕರ್ನಾಟಕ ಸಿಎಂ ಮತ್ತು ತೆಲಂಗಾಣದ ಸಿಎಂ ರೇವಂತ್ ರೆಡ್ಡಿಗೆ ಎರಡನೇ ಸ್ಥಾನದಲ್ಲಿ ಆಸನದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಇನ್ನು ಕಾಂಗ್ರೆಸ್ಸಿನ ನಾಲ್ಕು ಮುಖ್ಯಮಂತ್ರಿಗಳು, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಹಾಗೂ ಕರ್ನಾಟಕ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಸನ ವ್ಯವಸ್ಥೆಯ ಫೋಟೋಗಳು ವೈರಲ್ ಆಗಿದ್ದವು. ವಿಜಯ್ ಅವರು ರಾಹುಲ್ ಗಾಂಧಿ ಪಕ್ಕದಲ್ಲಿ ಕೂತಿದ್ದರೆ, ಇತರರಿಗೆ ಮೊದಲ ಸಾಲಿನಲ್ಲಿ ವ್ಯವಸ್ಥೆ ಇರಲಿಲ್ಲ. ಇದು, ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿತ್ತು.

ಸಿದ್ದರಾಮಯ್ಯನವರನ್ನು ಕಡೆಗಣಿಸಲಾಗುತ್ತಿದೆ. ಅಧಿಕಾರ ಇರುವ ತನಕ ಅಷ್ಟೇ ವರ್ಚಸ್ಸು, ಇಲ್ಲ ಅಂದ್ರೆ ಊಟದಲ್ಲಿನ ಕರಿಬೇವು. ಹಿಂದೂಳಿದ ವರ್ಗದ ನಾಯಕನನ್ನು ಕಾಂಗ್ರೆಸ್ ಹೈಕಮಾಂಡ್ ಅವಮಾನಿಸಿದೆ ಅಂತೆಲ್ಲಾ ವಿಪಕ್ಷಗಳ ನಾಯಕರು ಟೀಕಿಸಿದ್ದರು.

ಇದಕ್ಕೆ ಇದೀಗ ಸ್ವತಃ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದೆ. ಆ ವೇಳೆಗೆ ಮುಂದಿನ ಸಾಲಿನಲ್ಲಿನ ಆಸನಗಳೆಲ್ಲಾ ಭರ್ತಿಯಾಗಿದ್ದವು. ಹೀಗಾಗಿ, ಹಿಂದಿನ ಸಾಲಿನಲ್ಲಿ ಕೂರಬೇಕಾಯ್ತು ಎಂದು ಸ್ಪಷ್ಟನೆಯೊಂದಿಗೆ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Thu, 19 November 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು