ಅನುದಾನಕ್ಕಾಗಿ ಸದನದಲ್ಲಿ ಧ್ವನಿ ಎತ್ತಿ: ನೂತನ ರಾಜ್ಯಸಭಾ ಸದಸ್ಯರಿಗೆ ಶುಭ ಹಾರೈಸಿದ ಸಿದ್ದರಾಮಯ್ಯ

| Updated By: Rakesh Nayak Manchi

Updated on: Feb 27, 2024 | 9:42 PM

ಬಾರೀ ಕುತೂಹಲ ಸೃಷ್ಟಿಸಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಒಂದು ಸ್ಥಾನ ಗೆದ್ದರೆ, ಉಳಿದ ಮೂರು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಗೆದ್ದ ಕಾಂಗ್ರೆಸ್​ನ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸೈಯದ್ ನಾಸಿರ್ ಹುಸೇನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದರು.

ಅನುದಾನಕ್ಕಾಗಿ ಸದನದಲ್ಲಿ ಧ್ವನಿ ಎತ್ತಿ: ನೂತನ ರಾಜ್ಯಸಭಾ ಸದಸ್ಯರಿಗೆ ಶುಭ ಹಾರೈಸಿದ ಸಿದ್ದರಾಮಯ್ಯ
ಅನುದಾನಕ್ಕಾಗಿ ಸದನದಲ್ಲಿ ಧ್ವನಿ ಎತ್ತಿ: ನೂತನ ರಾಜ್ಯಸಭಾ ಸದಸ್ಯರಿಗೆ ಶುಭ ಹಾರೈಸಿದ ಸಿದ್ದರಾಮಯ್ಯ
Follow us on

ಬೆಂಗಳೂರು, ಫೆ.27: ಬಾರೀ ಕುತೂಹಲ ಸೃಷ್ಟಿಸಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Rajya Sabha Elections) ಬಿಜೆಪಿ ಒಂದು ಸ್ಥಾನ ಗೆದ್ದರೆ, ಉಳಿದ ಮೂರು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಗೆದ್ದ ಕಾಂಗ್ರೆಸ್​ನ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸೈಯದ್ ನಾಸಿರ್ ಹುಸೇನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಶುಭ ಹಾರೈಸಿದರು.

ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ ಸಿದ್ದರಾಮಯ್ಯ, ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು.

ಸಿದ್ದರಾಮಯ್ಯ ಟ್ವೀಟ್

ತೆರಿಗೆ ಪಾಲು ಕಡಿತ, ವಿಶೇಷ ಅನುದಾನ ನಿರಾಕರಣೆ, ಅಭಿವೃದ್ಧಿ ಯೋಜನೆಗಳಿಗೆ ದೊರಕದ ಅನುದಾನ ಸೇರಿದಂತೆ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿಯೆತ್ತಿ, ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಲು ಶ್ರಮಿಸುತ್ತೀರೆಂದು ಭಾವಿಸಿದ್ದೇನೆ. ತಮ್ಮೆಲ್ಲರ ಗೆಲುವು ನಾಡಿನ ನ್ಯಾಯದ ಕೂಗಿಗೆ ಬಲ ತಂದಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ರಾಜ್ಯಸಭಾ ಗೆಲುವಿನ ಸಂಭ್ರಮದ ವೇಳೆ ಮೊಳಗಿದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

ರಾಜ್ಯಸಭೆಗೆ ಆಯ್ಕೆಯಾದ ಅಜಯ್‌ ಮಾಕನ್‌, ಸಯ್ಯದ್‌ ನಾಸಿರ್‌ ಹುಸೇನ್‌ ಹಾಗೂ ಜಿಸಿ ಚಂದ್ರಶೇಖರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಕಾಂಗ್ರೆಸ್‌ ಪಕ್ಷದ ಒಗ್ಗಟ್ಟು ಇಂದು ಮತ್ತೊಂದು ಗೆಲುವನ್ನು ತಂದಿದೆ. ಆತ್ಮಸಾಕ್ಷಿಯ ಮತ ಹಾಕಿದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಮಾಣ ಪತ್ರ ಸ್ವೀಕರಿಸಿದ ನೂತನ ರಾಜ್ಯಸಭಾ ಸದಸ್ಯರು

ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಅಜಯ್ ಮಾಕೇನ್, ಸೈಯದ್ ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಆಯ್ಕೆಯಾದ ಪ್ರಮಾಣ ಪತ್ರ ಸ್ವೀಕರಿಸಿದರು. ಚುನಾವಣಾಧಿಕಾರಿ ಕೆ.ಎ. ವಿಶಾಲಾಕ್ಷಿ ಅವರಿಂದ ಪ್ರಮಾಣ ಪತ್ರ ಸ್ವೀಕಾರ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Tue, 27 February 24