ರಾಯಚೂರು: ಸಿಎಂ ಬಿ.ಎಸ್.ಯಡಿಯೂರಪ್ಪ ತಂತಿ ಮೇಲೆ ನಡೆದು ಸರ್ಕಾರ ನಡೆಸುವುದು ಬೇಡ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಬಿಎಸ್ವೈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತೆ. ಬಳಿಕ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ರಾಯಚೂರಿನಲ್ಲಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ 15 ಕ್ಷೇತ್ರಗಳ ಪೈಕಿ 8ರಲ್ಲಿ ಬಿಜೆಪಿ ಗೆಲ್ಲಬೇಕಿದೆ. ಆದ್ರೆ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲಲು ವಿಫಲವಾದರೆ ಸರ್ಕಾರ ಪತನವಾಗುತ್ತೆ. ಅಲ್ಲದೆ ಕಾಂಗ್ರೆಸ್ ಪಕ್ಷ 15ಕ್ಕೆ 15 ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆನಂದ್ಸಿಂಗ್ಗಾಗಿ ಬಳ್ಳಾರಿ ವಿಭಜನೆ:
ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡುವ ವಿಚಾರ ಸಂಬಂಧ ಮಾತನಾಡಿದ ಸಿದ್ದರಾಮಯ್ಯ, ಆನಂದ್ ಸಿಂಗ್ಗೆ ನೆರವಾಗುವುದಕ್ಕೆ ಹೀಗೆ ಮಾಡ್ತಿದ್ದಾರೆ. 18 ತಾಲೂಕುಗಳಿದ್ರೂ ಬೆಳಗಾವಿ ಜಿಲ್ಲೆ ವಿಭಜನೆ ಆಗಿಲ್ಲ. ಆದ್ರೆ, ಬಳ್ಳಾರಿ ಜಿಲ್ಲೆಯಲ್ಲಿ ಕೇವಲ 9 ತಾಲೂಕುಗಳು ಮಾತ್ರ ಇವೆ. ಹೀಗಿರುವಾಗ ಬಳ್ಳಾರಿ ಜಿಲ್ಲೆ ವಿಭಜನೆ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
Published On - 1:04 pm, Mon, 30 September 19