ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ; ಕೊವಿಡ್ ವರದಿಯೂ ನೆಗೆಟಿವ್

ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ.

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ; ಕೊವಿಡ್ ವರದಿಯೂ ನೆಗೆಟಿವ್
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ganapathi bhat

Updated on:Jun 05, 2021 | 3:50 PM

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೆಲವು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೂ ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಮೊದಲು ಸಿದ್ದರಾಮಯ್ಯ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಬಂದಿತ್ತು. ಆದರೂ ವೈರಲ್ ಫೀವರ್​ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿಸಲಾಗಿತ್ತು. ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್​ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದರು.

ಸಿದ್ದರಾಮಯ್ಯ ಮಾರ್ಚ್​ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್​ ಸರ್​ ವ್ಯಾಕ್ಸಿನ್​ ಹಾಕಿ ಆಯ್ತು ಎಂದು ಹೇಳಿದ್ದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ?  ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದ್ದರು.

ಇದನ್ನೂ ಓದಿ: ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಲು ಒತ್ತಾಯ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ

Published On - 3:34 pm, Sat, 5 June 21

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ