ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೆಲವು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೂ ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ನೀಡಲಾಗುತ್ತಿದೆ.
ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಮೊದಲು ಸಿದ್ದರಾಮಯ್ಯ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಬಂದಿತ್ತು. ಆದರೂ ವೈರಲ್ ಫೀವರ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿಸಲಾಗಿತ್ತು. ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.
ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು.
ಸಿದ್ದರಾಮಯ್ಯ ಮಾರ್ಚ್ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್ ಸರ್ ವ್ಯಾಕ್ಸಿನ್ ಹಾಕಿ ಆಯ್ತು ಎಂದು ಹೇಳಿದ್ದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ? ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದ್ದರು.
ಇದನ್ನೂ ಓದಿ: ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಲು ಒತ್ತಾಯ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ
Published On - 3:34 pm, Sat, 5 June 21