RCEPಯಿಂದ ಮೋದಿಯದ್ದೇ ಮೇಕ್ ಇನ್ ಇಂಡಿಯಾ ಮೂಲೆ ಗುಂಪು: ಸಿದ್ದು ವ್ಯಂಗ್ಯ

ಬೆಂಗಳೂರು: ಇತ್ತೀಚೆಗಷ್ಟೇ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಯೋಜನೆಯಡಿ ಮುಕ್ತ ವ್ಯಾಪಾರ ಮಾರುಕಟ್ಟೆ ಒಪ್ಪಂದ ವ್ಯಾಪ್ತಿಗೆ ಹೈನೋದ್ಯಮ ಸೇರಿಸುತ್ತಿರುವುದಕ್ಕೆ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದರು. ರಾಜ್ಯದ ವಿವಿಧೆಡೆ ಹಾಲು ಉತ್ಪಾದಕರು ಆರ್​ಸಿಇಪಿ ವಿರುದ್ಧ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು RCEP ಒಪ್ಪಂದಕ್ಕೆ ಅಂಕಿತ ಹಾಕುವುದನ್ನ ವಿರೋಧಿಸಿ ಸುದ್ದಿಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪ್ರಧಾನಿ ಮೋದಿಯ ಮೇಕ್ ಇನ್ ಇಂಡಿಯಾ ಮೂಲೆ ಗುಂಪು? […]

RCEPಯಿಂದ ಮೋದಿಯದ್ದೇ ಮೇಕ್ ಇನ್ ಇಂಡಿಯಾ ಮೂಲೆ ಗುಂಪು: ಸಿದ್ದು ವ್ಯಂಗ್ಯ
Follow us
ಸಾಧು ಶ್ರೀನಾಥ್​
|

Updated on:Oct 25, 2019 | 3:22 PM

ಬೆಂಗಳೂರು: ಇತ್ತೀಚೆಗಷ್ಟೇ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಯೋಜನೆಯಡಿ ಮುಕ್ತ ವ್ಯಾಪಾರ ಮಾರುಕಟ್ಟೆ ಒಪ್ಪಂದ ವ್ಯಾಪ್ತಿಗೆ ಹೈನೋದ್ಯಮ ಸೇರಿಸುತ್ತಿರುವುದಕ್ಕೆ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದರು. ರಾಜ್ಯದ ವಿವಿಧೆಡೆ ಹಾಲು ಉತ್ಪಾದಕರು ಆರ್​ಸಿಇಪಿ ವಿರುದ್ಧ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು RCEP ಒಪ್ಪಂದಕ್ಕೆ ಅಂಕಿತ ಹಾಕುವುದನ್ನ ವಿರೋಧಿಸಿ ಸುದ್ದಿಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿಯ ಮೇಕ್ ಇನ್ ಇಂಡಿಯಾ ಮೂಲೆ ಗುಂಪು? ಮುಕ್ತ ಮಾರಾಟ ಒಪ್ಪಂದ ಮತ್ತು ಆರ್​ಸಿಇಪಿ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ) ಒಪ್ಪಂದದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಸಂಬಂಧ ಇಲ್ಲಿಯವರೆಗೂ 27 ಸಭೆಗಳು ನಡೆದಿದ್ದು, ನವೆಂಬರ್ 4ಕ್ಕೆ ಈ ಒಪ್ಪಂದಕ್ಕೆ ಅಂತಿಮ‌ ಅಂಕಿತ ಬೀಳಲಿದೆ. ಆರ್​ಸಿಇಪಿಗೆ ಭಾರತ ಸಹಿ ಹಾಕಿದ್ರೆ ಶೇ.95ರಷ್ಟು ಉತ್ಪನ್ನಗಳಿಗೆ ಆಮದು ಸುಂಕ ರದ್ದಾಗುತ್ತದೆ. ಇದರಿಂದ ನಮ್ಮ ಮಾರುಕಟ್ಟೆಯಲ್ಲಿ ಇತರೆ ದೇಶದ ಉತ್ಪನ್ನಗಳು ವಿಕ್ರಮ‌ ಸಾಧಿಸಿ, ನಮ್ಮ ಉತ್ಪನ್ನಗಳಿಗೆ ಬೇಡಿಕೆ ಕುಸಿಯುತ್ತದೆ. ವಿದೇಶಿ ಉತ್ಪನ್ನಗಳ ಜತೆ ನಾವು ಸ್ಪರ್ಧೆ ಮಾಡುವುದು ಕಷ್ಟ ಆಗುತ್ತದೆ.

ದೇಶದಲ್ಲಿ ಹಾಲು ಉತ್ಪಾದನೆಯಲ್ಲಿ ಗುಜರಾತ್ ಬಿಟ್ಟರೆ ಕರ್ನಾಟಕ 2ನೇ ಸ್ಥಾನದಲ್ಲಿದೆ. ಹಾಲು ಉಪ ಉತ್ಪನ್ನಗಳಲ್ಲೂ ನಮ್ಮ ರಾಜ್ಯ ಮುಂದೆ ಇದೆ. ಈಗ ಆರ್​ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕಿದ್ರೆ, ದೇಶದ ಹಾಲು ಉತ್ಪಾದನಾ ವಲಯಕ್ಕೆ ದೊಡ್ಡ ಹೊಡೆತ ಬೀಳಲಿದೆ. ಹೈನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿರುವ ರೈತರಿಗೂ ನಷ್ಟ ಉಂಟಾಗಲಿದೆ ಎಂದರು.

ಇದನ್ನೂ ಓದಿ: ನಮ್ಮ ಹಾಲು ನಮ್ಮ ಹಕ್ಕು: ವಿದೇಶಿ ಹಾಲು ಬೇಡ ಎಂದಿದ್ದೇಕೆ ಕೋಲಾರದ ರೈತರು?

RCEP ಅಡಿ ಏಷ್ಯಾದ 10 ರಾಷ್ಟ್ರಗಳು ಇದ್ದರೆ, ಮುಕ್ತ ಮಾರುಕಟ್ಟೆ ಒಪ್ಪಂದದಲ್ಲಿ ಆರು ರಾಷ್ಟ್ರಗಳಿವೆ. ಆರ್​ಸಿಇಪಿಯಿಂದ ಕೃಷಿ ಸೇವಾ ವಲಯದ ಮೇಲೆ ದುಷ್ಪರಿಣಾಮ ಬೀರಲಿದೆ. ಭಾರತ ಈ ಕ್ಷೇತ್ರದಲ್ಲಿ ದೊಡ್ಡ ಮಾರುಕಟ್ಟೆ ಹೊಂದಿದೆ. ಬೇರೆ ದೇಶದ ಕೃಷಿ ಉತ್ಪನ್ನಗಳು ನಮ್ಮ ಮಾರುಕಟ್ಟೆಗೆ ಬರಲಿದೆ. ಇದರಿಂದಾಗಿ ನಮ್ಮ ಉತ್ಪನ್ನಗಳ‌ ಬೇಡಿಕೆ ಇಳಿಮುಖ ಆಗಿ ನಿರುದ್ಯೋಗ ಇನ್ನಷ್ಟು ಹೆಚ್ಚಾಗುತ್ತದೆ.‌ ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಮೂಲೆ ಗುಂಪು ಆಗುತ್ತದೆ.

ಒಪ್ಪಂದಕ್ಕೆ ಕೇಂದ್ರ ಸಹಿ‌ ಹಾಕಬಾರದು ಹೀಗಾಗಿ ಕೇಂದ್ರ ಈ ಒಪ್ಪಂದಕ್ಕೆ ಸಹಿ‌ ಹಾಕಬಾರದು. ಈ ಒಪ್ಪಂದದಿಂದ ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಏರುಪೇರು ಆಗುತ್ತದೆ. ಚರ್ಚೆ ನಡೆಸದೆ ಸಹಿ ಹಾಕಿದರೆ ಜನರಿಗೆ ದ್ರೋಹ ಬಗೆದಂತೆ ಆಗುತ್ತದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಸಹಿ ಹಾಕದಂತೆ ಎಲ್ಲೆಡೆ ಪ್ರತಿಭಟನೆ: ಕೇಂದ್ರ ಸರ್ಕಾರ ಆರ್​ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಎಲ್ಲೆಡೆ ಪ್ರತಿಭಟನೆಗಳು ಜೋರಾಗಿವೆ. ಮೈಸೂರಿನ ರಿಂಗ್ ರಸ್ತೆಯಲ್ಲಿ ರಾಷ್ಟ್ರೀಯ ಕಿಸಾನ್ ಸಂಘ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ರೈತರ ಪ್ರತಿಭಟನೆಯಿಂದ ರಿಂಗ್ ರಸ್ತೆಯ ಬಂಡೀಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ರೈತರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ಪಟ್ಟು ಸಡಿಲಿಸದ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಯಾಗಿದೆ. ಬಳಿಕ ಅನುಮತಿ ಇಲ್ಲದೇ ಪ್ರತಿಭಟನೆ ಮಾಡಿದ ಆರೋಪದಡಿ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 12:58 pm, Fri, 25 October 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ