AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸೇರಿದಂತೆ 36 ಕಾಂಗ್ರೆಸ್​ ನಾಯಕರಿಗೆ ಕೋರ್ಟ್ ಸಮನ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸೇರಿದಂತೆ 36 ಕಾಂಗ್ರೆಸ್​ ನಾಯಕರಿಗೆ ಕೋರ್ಟ್ ಸಮನ್ಸ್
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:Jun 13, 2023 | 5:44 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah )ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ‌ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಸೂಚನೆ ನೀಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 13) ಜನಪ್ರತಿನಿಧಿಗಳ ಸಮನ್ಸ್ ನೀಡಿದೆ.

ಇದನ್ನೂ ಓದಿ: ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಕ್ಷನ್ 341,143 ಐಪಿಸಿ ಮತ್ತು 103 ಕೆಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪತ್ರಿನಿಧಿಗಳ ಕೋರ್ಟ್, ಜುಲೈ 28ರಂದು ಖುದ್ದು ಹಾಜರಾಗುವಂತೆ 36 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ನೀಡಿದೆ.

Published On - 5:04 pm, Tue, 13 June 23

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ