ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah )ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಸೂಚನೆ ನೀಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 13) ಜನಪ್ರತಿನಿಧಿಗಳ ಸಮನ್ಸ್ ನೀಡಿದೆ.
ಇದನ್ನೂ ಓದಿ: ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಕ್ಷನ್ 341,143 ಐಪಿಸಿ ಮತ್ತು 103 ಕೆಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪತ್ರಿನಿಧಿಗಳ ಕೋರ್ಟ್, ಜುಲೈ 28ರಂದು ಖುದ್ದು ಹಾಜರಾಗುವಂತೆ 36 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ನೀಡಿದೆ.
Published On - 5:04 pm, Tue, 13 June 23