AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುತೂಹಲದ ನಡೆ: ಇಂದು ಸಂಜೆ ಹೈಕಮಾಂಡ್ ಭೇಟಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲು ಸಮಯ ನಿಗದಿ ಆಗಿದೆ. ಇಂದು ಸಂಜೆ ಉಭಯ ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಈ ಮಧ್ಯೆ, ಕೆಲ ಶಾಸಕರು ನಾಯಕತ್ವ ಬದಲಾವಣೆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಸುರ್ಜೇವಾಲ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುತೂಹಲದ ನಡೆ: ಇಂದು ಸಂಜೆ ಹೈಕಮಾಂಡ್ ಭೇಟಿ
ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Jul 10, 2025 | 6:53 AM

Share

ಬೆಂಗಳೂರು/ನವದೆಹಲಿ, ಜುಲೈ 10: ಕರ್ನಾಟಕ ಕಾಂಗ್ರೆಸ್ (Congress) ಪಾಳಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಹೊರಬೀಳುತ್ತಿವೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತು ಸಿಎಂ ಸಿದ್ದರಾಮಯ್ಯ (Siddaramaiah) ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಮೈಸೂರು ದಸರಾದಲ್ಲಿ ಈ ಬಾರಿ ಏರ್​ ಶೋ ಆಯೋಜನೆ ಮಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದೆ. ಇದಲ್ಲದೇ ರಾಜ್ಯದ ಎತ್ತಿನಹೊಳೆ, ಕೃಷ್ಣ, ಮಹದಾಯಿ ಕಳಸ ಬಂಡೂರಿ, ಅಪ್ಪರ್ ಭದ್ರ, ಮೇಕೆದಾಟು ಯೋಜನೆಗಳ ತೊಡಕು ನಿವಾರಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ತಣ್ಣಗಾಗದ ಅಧಿಕಾರ ಹಂಚಿಕೆ ಕದನ

ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುವ ಮುನ್ನವೇ, ಡಿಸಿಎಂ ಡಿಕೆಶಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರೊಂದಿಗೂ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಇಂದು ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲರನ್ನು ಸಿಎಂ ಮತ್ತು ಡಿಸಿಎಂ ಇಬ್ಬರೂ ಭೇಟಿ ಮಾಡಲಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಸಂಜೆ 6 ಗಂಟೆಗೆ ಹೈಕಮಾಂಡ್ ಭೇಟಿಗೆ ಸಮಯ ನಿಗದಿ

ರಣದೀಪ್ ಸಿಂಗ್ ಸುರ್ಜೇವಾಲರ ಜೊತೆ ಇಂದು ಸಂಜೆ 6 ಗಂಟೆಗೆ ಸಿಎಂ, ಡಿಸಿಎಂ ಚರ್ಚೆ ನಡೆಸಲಿದ್ದಾರೆ. ಇದರ ನಡುವೆ ರಾಹುಲ್ ಗಾಂಧಿ ಭೇಟಿಗೆ ಸಿಎಂ ಮತ್ತು ಡಿಸಿಎಂ ಮುಂದಾಗಿರುವುದು ಕುತೂಹಲ ಮೂಡಿಸಿದೆ. ಆದರೆ, ಸಿದ್ದರಾಮಯ್ಯ ಮಾತ್ರ, ರಾಹುಲ್ ಗಾಂಧಿ ಭೇಟಿಗೆ ಇನ್ನೂ ಅವಕಾಶ ದೊರೆತಿಲ್ಲ ಎಂದಿದ್ದರೆ, ಸತೀಶ್ ಜಾರಕಿಹೊಳಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆಯಾಗಬಹುದು ಎಂದಿದ್ದಾರೆ.

ಇದನ್ನೂ ಓದಿ
Image
ಭೇಟಿ ಸಕ್ಸಸ್: ಸಿದ್ದರಾಮಯ್ಯ ಬೇಡಿಕೆಗಳಿಗೆ ಸ್ಪಂದಿಸಿದ ರಕ್ಷಣಾ ಸಚಿವ!
Image
ಸಂಪುಟ ವಿಸ್ತರಣೆಗಾಗಿ ದೆಹಲಿಗೆ ಬಂದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
Image
ಪಿಎಸ್​ಐ, ಕಾನ್​ಸ್ಟೇಬಲ್ ಆಕಾಂಕ್ಷಿಗಳಿಗೆ ಗೃಹ ಸಚಿವರಿಂದ ಗುಡ್ ನ್ಯೂಸ್
Image
ಜಯದೇವ ಆಸ್ಪತ್ರೆಯತ್ತ ಜನರ ದೌಡು, ಒಪಿಡಿ ಫುಲ್! ಹೃದ್ರೋಗಿಗಳಿಗೆ ಸಮಸ್ಯೆ

ಕುತೂಹಲಕ್ಕೆ ಕಾರಣವಾದ ಸುರ್ಜೇವಾಲ ಹೇಳಿಕೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಶಾಸಕರೊಂದಿಗೆ ಒನ್ ಟು ಒನ್ ಸಭೆ ನಡೆಸುತ್ತಿದ್ದು, ಇದೇ ವೇಳೆ ಸಚಿವರ ಸಹಕಾರದ ಕೊರತೆಯ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಕೆಲವರು ನಾಯಕತ್ವ ಬದಲಾವಣೆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುರ್ಜೆವಾಲ, ನಾಯಕತ್ವ ಬದಲಾವಣೆ ಬಗ್ಗೆ ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರ ರೀತಿ ನಮ್ಮ ಪಕ್ಷದಲ್ಲಿ ಯಾರನ್ನೂ ಮೂಲೆಗುಂಪು ಮಾಡುವುದಿಲ್ಲ ಎಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಹಲವು ವ್ಯಕ್ತಿಗಳು ವಿಭಿನ್ನ ಅಪೇಕ್ಷೆಗಳನ್ನು ಹೊಂದಿರುತ್ತಾರೆ. ಅನೇಕ ಶಾಸಕರು ಸಚಿವರಾಗುವ ಆಸೆ ಹೊಂದಿದ್ದಾರೆ. ಅವರು ಯಾಕೆ ಆಗಬಾರದು? ಅವರೆಲ್ಲರಿಗೂ ಸಾಮರ್ಥ್ಯವಿದೆ. ಕಾಂಗ್ರೆಸ್ ಕಾರ್ಯಕರ್ತರು ಎಂಎಲ್‌ಸಿ ಆಗಬೇಕೆಂದು ಆಸೆಪಟ್ಟಿದ್ದು, ಯಾಕೆ ಆಗಬಾರದು? ಅವರೆಲ್ಲರಿಗೂ ಸಾಮರ್ಥ್ಯವಿದೆ. ಅವರ ಬೇರೆ ಬೇರೆ ಅಭಿಪ್ರಾಯಗಳನ್ನು ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ಪರಿಗಣಿಸುತ್ತೇವೆ. ಇದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ನಾವು ಒಂದು ಪಕ್ಷವಾಗಿ ಎಲ್ಲ ರೀತಿಯ ಅಭಿಪ್ರಾಯಗಳನ್ನು ಆಲಿಸಿ, ಒಮ್ಮತದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಸಿಎಂಗೆ ಬೋರ್ಡಿಂಗ್ ಪಾಸ್ ರೆಡಿಯಿದೆ ಎಂದ ಅಶೋಕ್

ಕಾಂಗ್ರೆಸ್ ನಾಯಕರ ದೆಹಲಿ ಪ್ರಯಾಣಕ್ಕೆ ಬಿಜೆಪಿ ನಾಯಕರು ರಾಜಕೀಯ ರೂಪ ಕೊಟ್ಟಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಬೋರ್ಡಿಂಗ್ ಪಾಸ್ ರೆಡಿಯಿದೆ ಎಂದಿದ್ದರೆ, ಡಿಕೆ ಶಿವಕುಮಾರ್ ಸಿಎಂ ಆಗಲ್ಲ ಎಂದು ಶ್ರೀರಾಮು ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ಚರ್ಚೆಗಾಗಿ ದೆಹಲಿಗೆ ಬಂದಿಲ್ಲ! ಮತ್ಯಾಕೆ? ವಿವರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಒಟ್ಟಿನಲ್ಲಿ ರಾಜ್ಯಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗುತ್ತಿದ್ದು, ನಿಜಕ್ಕೂ ಸೆಪ್ಟೆಂಬರ್ ಕ್ರಾಂತಿ ನಡೆಯುತ್ತದೆಯಾ ಎಂಬ ಪ್ರಶ್ನೆ ಮೂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ