ಸತ್ಯಮೇವ ಜಯತೆ: ಹೈಕೋರ್ಟ್​ ಆದೇಶದ ಬಳಿಕ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಇಲ್ಲಿದೆ

ನಾನು ಯಾವುದೇ ತಪ್ಪು ಮಾಡಿಲ್ಲ. 40 ವರ್ಷದ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ. ಈ ಕಾನೂನು ಹೋರಾಟ ನನಗೇನು ಹೊಸದಲ್ಲ.. ಅದೇ ಛಲ.. ಅದೇ ಹೋರಾಟ.. ಪ್ರಾಸಿಕ್ಯೂಷನ್ ಕೊಟ್ಟಿರೋದೇ ಕಾನೂನು ಬಾಹಿರ ಎಂದು ವಾದಿಸುತ್ತಲೇ ಬಂದಿದ್ದ ಸಿಎಂ ಸಿದ್ದರಾಮಯ್ಯ, ಇಂದು ಪ್ರಾಸಿಕ್ಯೂಷನ್ ಪ್ರಶ್ನಿಸಿ ರಿಟ್ ಅರ್ಜಿ ಹಾಕಿದ್ದು, ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಇನ್ನು ಕೋರ್ಟ್​​ ಆದೇಶದ ಬಗ್ಗೆ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸತ್ಯಮೇವ ಜಯತೆ: ಹೈಕೋರ್ಟ್​ ಆದೇಶದ ಬಳಿಕ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಇಲ್ಲಿದೆ
ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on:Aug 19, 2024 | 8:57 PM

ಬೆಂಗಳೂರು, (ಆಗಸ್ಟ್ 19): ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು(ಸೋಮವಾರ) ಹೈಕೋರ್ಟ್‌ನಲ್ಲಿ ನಡೆದಿದ್ದು, ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು. ಇದರೊಂದಿಗೆ ಮುಂದಿನ 10 ದಿನ ಸಿಎಂ ವಿರುದ್ಧ ಯಾವುದೇ ತನಿಖೆ, ಯಾವುದೇ ವಿಚಾರಣೆ ನಡೆಸುವಂತಿಲ್ಲ. ಯಾವುದೇ ಎಫ್ಐಆರ್ ದಾಖಲಾದ್ರೂ ಆಗಸ್ಟ್ 29ರವರೆಗೂ ಸಿಎಂರನ್ನ ಟಚ್ ಮಾಡಂಗಿಲ್ಲ. ಹೀಗಾಗಿಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸಿದ್ದರಾಮಯ್ಯ, ಕೋರ್ಟ್​ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ್ದ, ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದಿದ್ದಾರೆ.

ಇದನ್ನೂ ಓದಿ: Muda Case: ಪ್ರಾಸಿಕ್ಯೂಷನ್​: ಬೀಸುವ ದೊಣ್ಣೆಯಿಂದ ಸಿದ್ದರಾಮಯ್ಯ ಪಾರು!

ಸಿಎಂ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಎರಡು ಅರ್ಜಿ ಸಲ್ಲಿಕೆ ಆಗಿತ್ತು. ನಾಳೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಒಂದ್ವೇಳೆ ವಿಚಾರಣೆ ನಡೆದಿದ್ರೆ ಸಿಎಂಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇತ್ತು. ಆದ್ರೆ ವಿಶೇಷ ಕೋರ್ಟ್‌ನ ವಿಚಾರಣೆ ಮುಂದೂಡುವಂತೆ ಹೈಕೋರ್ಟ್‌ ಸೂಚಿಸಿದ್ದು, ಆಗಸ್ಟ್‌ 29 ರವರೆಗೂ ಸಿಎಂಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಇದರೊಂದಿಗೆ ಮುಂದಿನ 10 ದಿನ ಸಿಎಂ ವಿರುದ್ಧ ಯಾವುದೇ ತನಿಖೆ, ಯಾವುದೇ ವಿಚಾರಣೆ ನಡೆಸುವಂತಿಲ್ಲ. ಯಾವುದೇ ಎಫ್ಐಆರ್ ದಾಖಲಾದ್ರೂ ಆಗಸ್ಟ್ 29ರವರೆಗೂ ಸಿಎಂರನ್ನ ಟಚ್ ಮಾಡಂಗಿಲ್ಲ.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:51 pm, Mon, 19 August 24

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್