ಮಹತ್ವದ ನಿರ್ಣಯ ಕೈಗೊಂಡ ಸಚಿವ ಸಂಪುಟ ಸಭೆ: ಬಿಜೆಪಿ, ಜೆಡಿಎಸ್​ ನಾಯಕರಿಗೆ ಸಂಕಷ್ಟ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಿಎಂ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರೆ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಸರ್ಕಾರ, ರಾಜ್ಯಪಾಲರಿಗೆ ನೆರವು ಮತ್ತು ಸಲಹೆ ನೀಡುವ ನಿರ್ಣಯ ಕೈಗೊಂಡಿದೆ. ಈ ಮೂಲಕ ಬಿಜೆಪಿ ಮತ್ತು ಜೆಡಿಎಸ್​​ ನಾಯಕರಿಗೆ ಸಂಕಷ್ಟು ಎದುರಾಗುವ ಸಾಧ್ಯತೆಗಳಿವೆ.

ಮಹತ್ವದ ನಿರ್ಣಯ ಕೈಗೊಂಡ ಸಚಿವ ಸಂಪುಟ ಸಭೆ: ಬಿಜೆಪಿ, ಜೆಡಿಎಸ್​ ನಾಯಕರಿಗೆ ಸಂಕಷ್ಟ
ಗೆಹ್ಲೋಟ್, ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Aug 22, 2024 | 4:52 PM

ಬೆಂಗಳೂರು, (ಆಗಸ್ಟ್ 22): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಗುರುವಾರ) ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಇಂದಿನ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಮುಂದೆ ಬಾಕಿ ಇರುವ ಪ್ರಾಸಿಕ್ಯೂಷನ್​ ಮನವಿ ಬಗ್ಗೆ ಮಹತ್ವದ ಚರ್ಚೆ ನಡೆದಿದೆ.ಬಾಕಿ ಇರುವ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಬಗ್ಗೆ  ಕ್ರಮಕೈಗೊಳ್ಳಿ ಎಂದು ಸಲಹೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೌದು…ಬಾಕಿ ಇರುವ ಅಂದರೆ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಸರ್ಕಾರ ಇಂದಿನ ಸಚಿವ ಸಂಪುಟದಲ್ಲಿ ನೆರವು ಮತ್ತು ಸಲಹೆ ನೀಡುವ ನಿರ್ಣಯ ಕೈಗೊಂಡಿದೆ. ಈ ಮೂಲಕ ರಾಜ್ಯ ಸರ್ಕಾರ,  ಬಿಜೆಪಿ, ಜೆಡಿಎಸ್​​ ನಾಯಕರ ವಿರುದ್ಧದ ಪ್ರಕರಣ ಬಗ್ಗೆ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರಿಗೆ​ ಸಲಹೆ ನೀಡಲು ಮುಂದಾಗಿದೆ.

ಇನ್ನು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​ಕೆ ಪಾಟೀಲ್, ಸಿಎಂ ನೇತೃತ್ವದ ಸಭೆಯಲ್ಲಿ 35 ವಿಷಯಗಳ ಕುರಿತು ಚರ್ಚಿಸಿದ್ದೇವೆ. ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​​ಗೆ ಇರುವ ಹಲವು ಪ್ರಕರಣಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನು ಕೆಲವು ಪ್ರಕರಣ ಲೋಕಾಯುಕ್ತದಿಂದ ರಾಜ್ಯಪಾಲರಿಗೆ ಹೋಗಿದೆ. ಕೆಲವು ತನಿಖಾ ಸಂಸ್ಥೆಗಳ ವರದಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಅನೇಕ ಅನುಮೋದನೆ ಅರ್ಜಿಗಳು ರಾಜ್ಯಪಾಲರ ಸಮಕ್ಷಮದಲ್ಲಿ ಬಾಕಿ ಇವೆ. ಈ ಅರ್ಜಿಗಳಲ್ಲಿ ಕೆಲವು ಚಾರ್ಜ್​ಶೀಟ್ ಸಲ್ಲಿಕೆಗೆ ಒಪ್ಪಿಗೆ ಬಾಕಿ ಇವೆ. ಭ್ರಷ್ಟಾಚಾರ ತಡೆಕಾಯ್ದೆ ಸೆಕ್ಷನ್ 19ರಡಿ ಅನುಮೋದನೆಗೆ ಬಾಕಿ ಇದೆ. 17ಎ ಅಡಿಯಲ್ಲೂ ರಾಜ್ಯಪಾಲರ ಪೂರ್ವಾನುಮತಿಗೆ ಬಾಕಿ ಇದೆ. ಆ ಎಲ್ಲಾ ಪ್ರಕರಣಗಳ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ 163ರ ಅನ್ವಯ ರಾಜ್ಯಪಾಲರಿಗೆ ಸಲಹೆ ನೀಡಲು ಸಂಪುಟ ನಿರ್ಣಯಿಸಿದ ಎಂದು ತಿಳಿಸಿದರು.

ಅಗಸ್ಟ್ 1 ರಂದು ಕ್ಯಾಬಿನೆಟ್ ಸಭೆ ನಡದಿತ್ತು. ಸಿಎಂ ಅವತ್ತು ಡಿಸಿಎಂಗೆ ಸಭೆ ನಡೆಸಲು ಸೂಚಿಸಿದ್ದರು. ಆರ್ಟಿಕಲ್ 163ರ ಅನ್ವಯ ಏಡ್ ಆ್ಯಂಡ್ ಅಡ್ವೈಸ್ ರಾಜ್ಯಪಾಲರಿಗೆ ನೀಡಿದ್ದೆವು. ಆ ಸಭೆ ಆದಮೇಲೆ ಕ್ಯಾಬಿನೆಟ್ ನಿರ್ಣಯವನ್ನು ದೃಢೀಕರಿಸಲು ಇಂದು ಸಭೆ ನಡೆಯಿತು. ದೃಢೀಕರಣ ಸಂದರ್ಭದಲ್ಲಿ ಸಿಎಂ ತಾವಿರುವುದು ಸೂಕ್ತ ಅಲ್ಲ ಎಂದು ಸಭೆಯಿಂದ ಹೊರಗೆ ಇದ್ದರು ಡಿಸಿಎಂ ನೇತೃತ್ವದಲ್ಲಿ ಮೀಟಿಂಗ್ ಆಗಿ ಆಗಸ್ಟ್ 1ರ ನಿರ್ಣಯವನ್ನು ಇಂದು ದೃಢೀಕರಿಸಿಸದ್ದೇವೆ ಎಂದು ಸ್ಪಷ್ಟಪಡಿಸಿದರು.

2021ರ ಡಿ.9ರಂದು ಜೊಲ್ಲೆ ವಿರುದ್ಧ ರಾಜ್ಯಪಾಲರಿಗೆ ಅರ್ಜಿ ಸಲ್ಲಿಕೆಯಾಗಿದೆ. 2024ರ ಫೆಬ್ರವರಿ 26ರಂದು ನಿರಾಣಿ ವಿರುದ್ಧ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿದೆ. 2023ರ ನವೆಂಬರ್ 21ರಂದು ಹೆಚ್​ಡಿ ಕುಮಾರಸ್ವಾಮಿ ವಿರುದ್ಧವೂ ಸಹ ಅರ್ಜಿ ಸಲ್ಲಿಕೆಯಾಗಿದೆ. ಅಲ್ಲದೇ ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್​ಶೀಟ್ ಸಲ್ಲಿಕೆಗೆ ಲೋಕಾಯುಕ್ತ ಎಸ್ಐಟಿ ಅನುಮತಿ ಕೇಳಿತ್ತು. ಇದಕ್ಕೆ 2024ರ ಜುಲೈ 29ರಂದು ರಾಜ್ಯಪಾಲರು ಹೆಚ್ಚಿನ ವಿವರ ಕೇಳಿದ್ದರು. ಅದರಂತೆ ಇದೀಗ ರಾಜ್ಯಪಾಲರಿಗೆ ಲೋಕಾಯುಕ್ತ ಎಸ್​ಐಟಿ ಹೆಚ್ಚಿನ ವಿವರಣೆ ಕಳುಹಿಸಿದೆ. ರೆಡ್ಡಿ ಪ್ರಕರಣದಲ್ಲಿ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಈ ಪ್ರಕರಣಗಳ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲು 163ರ ಅನ್ವಯ ರಾಜ್ಯಪಾಲರಿಗೆ ಸಲಹೆ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.

ಇಂದಿನ ಕ್ಯಾಬಿನೆಟ್ ನಲ್ಲಿ ಈ ನಾಲ್ಕು ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಕಳುಹಿಸುತ್ತೇವೆ. ಶೀಘ್ರವಾಗಿ ಇದನ್ನು ಮಾಡಿ ಎಂದು ರಾಜ್ಯಪಾಲರಿಗೆ ಹೇಳುತ್ತೇವೆ ಎಂದು ಹೇಳಿದರು. ಈ ಮೂಲಕ ರಾಜ ಭವನ ವರ್ಸಸ್​ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಕಾನೂನು ಸಮರ ನಡೆಯುವುದು ನಿಶ್ಚಿತವಾಗಿದೆ.

ಬಿಜೆಪಿ, ಜೆಡಿಎಸ್​ ನಾಯಕರಿಗೆ ಸಂಕಷ್ಟ

ಹೌದು…ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಯಾವಾಗ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟರೋ ಇತ್ತ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್​​ ನಾಯಕರ ಮೇಲಿರುವ ಹಳೇ ಪ್ರಕರಣಗಳಿಗೆ ಮರುಜೀವ ನೀಡಿದೆ. ಶಾಸಕ  ಜನಾರ್ಧನ ರೆಡ್ಡಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಪ್ರಕರಣಗಳನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ಅದರಲ್ಲೂ ಪ್ರಮುಖವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಗಣಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಿದ್ದರಾಮಯ್ಯ ಪ್ರಕರಣದಲ್ಲಿ ಹೇಗೆ ರಾಜ್ಯಪಾಲರು ಒಂದೇ ದಿನದಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದರೋ ಹಾಗೇ ಎಚ್​ಡಿಕೆ ಕೇಸ್​ನಲ್ಲೂ ಪ್ರಾಸಿಕ್ಯೂಷನ್​ಗೆ ನೀಡಬೇಕೆಂದು ಒತ್ತಾಯಿಸುತ್ತಿದೆ.

ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿವಂತೆ  ಈಗಾಗಲೇ ಲೋಕಾಯಕ್ತ ಎಸ್​ಐಟಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಇದೀಗ ಸಚಿವ ಸಂಪುಟ ಸಹ ಬಾಕಿ ಇರುವ ಪ್ರಕರಣಗಳನ್ನು ಶೀರ್ಘದಲ್ಲೇ ತೀರ್ಮಾನ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಸಲಹೆ ನೀಡಿದೆ.

ಒಟ್ಟಿನಲ್ಲಿ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಹಿಂದೆ ಬಿದ್ದಿರುವ ಬಿಜೆಪಿ ಹಾಗೂ ಜೆಡಿಎಸ್​​ ನಾಯಕರಿಗೂ ರಾಜ್ಯ ಸರ್ಕಾರ ಶಾಕ್ ಕೊಡಲು ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ