ಮೊದಲ ಬಾರಿ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ: ಆರಂಭವಾಗಿದ್ದು ಯಾವಾಗ? ವಿಶೇಷತೆ ಏನು? ಇಲ್ಲಿದೆ ಓದಿ

ಬೆಂಗಳೂರಿಗೆ ಸೀಮಿತವಾಗಿದ್ದ ಜನತಾ ದರ್ಶನ ಪ್ರಥಮ ಬಾರಿಗೆ ಸೋಮವಾರದಿಂದ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಿಗೂ ವಿಸ್ತರಣೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಯಲಿದ್ದು, ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಮೊದಲ ಬಾರಿ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ: ಆರಂಭವಾಗಿದ್ದು ಯಾವಾಗ? ವಿಶೇಷತೆ ಏನು? ಇಲ್ಲಿದೆ ಓದಿ
ಸಿಎಂ ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on: Sep 25, 2023 | 9:38 AM

ಮೈಸೂರು ಸೆ.25: ಸೋಮವಾರ ರಾಜ್ಯಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ (Janata Darshan) ನಡೆಯಲಿದೆ. ಅದರಂತೆ ಮೈಸೂರಿನ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಜನತಾ ದರ್ಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ (HC Mahadevappa) ನೇತೃತ್ವದಲ್ಲಿ ಜನತಾ ದರ್ಶನ ನಡೆಯಲಿದ್ದು, ಈಗಾಗಲೇ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿರುವ ಜಿಲ್ಲಾಡಳಿತ, ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುತ್ತದೆ. ಈ ಮೂಲಕ ರಾಜ್ಯ ಸರ್ಕಾರ ಆಡಳಿತದಲ್ಲಿ ಚುರುಕು ಮುಟ್ಟಿಸಲು ಮುಂದಾಗಿದೆ.

ಏನಿದು ಜನತಾ ದರ್ಶನ

ಬೆಂಗಳೂರಿಗೆ ಸೀಮಿತವಾಗಿದ್ದ ಜನತಾ ದರ್ಶನ ಪ್ರಥಮ ಬಾರಿಗೆ ಸೋಮವಾರದಿಂದ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಿಗೂ ವಿಸ್ತರಣೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಯಲಿದ್ದು, ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಜನರ ಕುಂದುಕೊರತೆಗಳನ್ನು ಪರಿಹರಿಸಲು ಇಲಾಖೆಗಳ ನಡುವೆ ಸಮನ್ವಯವನ್ನು ಸ್ಥಾಪಿಸಲು ಜನತಾ ದರ್ಶನ ನಡೆಸಲಾಗುತ್ತದೆ.

ಸೆ.16 ರಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಟಿಪ್ಪಣಿ ಕಳುಹಿಸಿ, ಜಿಲ್ಲಾಮಟ್ಟದ ಮೊದಲ ಜನರು ದರ್ಶನವನ್ನು ಫೆ.21ರಂದು ಏಕಕಾಲದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಮಾಡಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬಳಿಕ ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಜನತಾದರ್ಶನ ನಡೆಸಬೇಕು. ಜಿಲ್ಲಾಡಳಿತ ಜನರಿಗೆ ಜನತಾದರ್ಶನ ನಡೆಯುವ ಸ್ಥಳ, ಇತ್ಯಾದಿಗಳನ್ನು ಮೊದಲೇ ತಿಳಿಸಬೇಕು. ಹೆಚ್ಚಿನ ಸಾರ್ವಜನಿಕರು ಆಗಮಿಸುವಂತೆ ನೋಡಿಕೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಈ ಜನತಾ ದರ್ಶನದ ಮೂಲಕ ಜನರ ಕುಂದುಕೊರತೆಗಳನ್ನು ಸಮಗ್ರ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಲ್ಲಿ (ಐಪಿಆ‌ಎಸ್) ದಾಖಲಿಸಲಾಗುವುದು. ಮತ್ತು ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸದಿದ್ದಲ್ಲಿ ಕಾಲಮಿತಿಯಲ್ಲಿ ಪರಿಹರಿಸಲಾಗುತ್ತದೆ. ಕಾರ್ಯಕ್ರಮದ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಗುರಿ ಹೊಂದಲಾಗಿದೆ.

ಇದನ್ನೂ ಓದಿ: ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಯೋಗಿ ಆದಿತ್ಯನಾಥ್; ಯಾರಿಗೂ ಅನ್ಯಾಯವಾಗಬಾರದು, ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ

ಜಾತಿ ಪ್ರಮಾಣ ಪತ್ರ, ಖಾತಾ ವರ್ಗಾವಣೆ, ಟ್ರಾನ್ಸ್‌ಫಾರ್ಮರ್‌ ದುರಸ್ತಿ, ಅಳವಡಿಕೆಯಂತಹ ಸಣ್ಣಪುಟ್ಟ ವಿಷಯಗಳಿಗೆ ಜನರು ತಮ್ಮ ಬಳಿಗೆ ಬರುತ್ತಿರುವ ಹಿನ್ನೆಲೆಯಲ್ಲಿ 10 ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಜನತಾದರ್ಶನಕ್ಕೆ ಸೂಚನೆ ನೀಡಿದ್ದಾರೆ. ಜನರು ತಮ್ಮ ಬಳಿಗೆ ಬರುತ್ತಿದ್ದರೆ ಜಿಲ್ಲೆಗಳಲ್ಲಿ ನೀವು ಇದ್ದೂ ಏನು ಪ್ರಯೋಜನ ಎಂದು ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಸೋಮವಾರ ಬೆಂಗಳೂರಿನ ಆನೇಕಲ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್, ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಬಳ್ಳಾರಿಯಲ್ಲಿ ಬಿ. ನಾಗೇಂದ್ರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನತಾ ದರ್ಶನ ನಡೆಯಲಿದೆ.

ಜನತಾ ದರ್ಶನದ ಇತಿಹಾಸ

ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಜನತಾದರ್ಶನ ಆರಂಭವಾಗಿತ್ತು. ರಾಮಕೃಷ್ಣ ಹೆಗಡೆ ಅವರ ಸರ್ಕಾರಕ್ಕಿಂತ ಮೊದಲು ಇದ್ದ ಸರ್ಕಾರಗಳು ವಿಧಾನಸೌಧಕ್ಕೆ ಸಾರ್ವಜನಿಕರನ್ನು ನಿಷೇಧಿಸಿದ್ದವು. ಜಿಲ್ಲೆಯಲ್ಲೂ ಸಾರ್ವಜನಿಕರು ಅಧಿಕಾರಿಗಳನ್ನು ಕೈಗೆ ಸಿಗುತ್ತಿರಲಿಲ್ಲ. ಇದನ್ನು ಮನಗಂಡ ರಾಮಕೃಷ್ಣ ಹೆಗಡೆಯವರು ಜನತಾ ದರ್ಶನ ಆರಂಭಿಸಿದರು. ಹೆಗಡೆ ಅವರು ದೂರದರ್ಶನ ಮತ್ತು ಆಕಾಶವಾಣಿ ಮೂಲಕ ಜನರು ಕುಂದುಕೊರತೆಗಳನ್ನು ಕೇಳುತ್ತಿದ್ದರು.

ಇದು ಇವರ ನಂತರವೂ ಮುಂದುವರೆದುಕೊಂಡು ಬಂದಿದ್ದು, ಸಾಕಷ್ಟು ಜನಪ್ರೀಯವಾಯಿತು. ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಕಾರ್ಯಕ್ರಮ ಬಹು ಜನಪ್ರಿಯವಾಗಿತ್ತು. ಸರ್ಕಾರಿ ಕೆಲಸ ಆಗದಿದ್ದಾಗ ಸಿಎಂ ಭೇಟಿಗೆಂದು ಜನ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಜಿಲ್ಲೆ ಮಟ್ಟ ದಲ್ಲೇ ಜನರ ಅಹವಾಲು ಆಲಿಸಲು ಸರ್ಕಾರ ನಿರ್ಧರಿಸಿದೆ.

ಇಂದು ಏಕಕಾಲಕ್ಕೆ ರಾಜ್ಯಾದ್ಯಂತ ಉಸ್ತುವಾರಿ ಸಚಿವರಿಂದ ಜಿಲ್ಲೆಗಳ ಮಟ್ಟದಲ್ಲಿ ಜನತಾ ದರ್ಶನ ನಡೆಯಲಿದೆ. ತಿಂಗಳಿಗೊಮ್ಮೆ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಸಲು ಉಸ್ತುವಾರಿ ಸಚಿವರಿಗೆ ಸೂಚಿಸಲಾಗಿದೆ. ಪ್ರತಿ 15 ದಿನಕ್ಕೊಮ್ಮೆ ತಾಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಜನರ ಅಹವಾಲು ಆಲಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?