ಬೆಂಗಳೂರು, (ಜುಲೈ 05): ಸಿದ್ದರಾಮಯ್ಯ ಸರ್ಕಾರ ಮಹತ್ವದ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಬೇರೆ ಯೋಜನೆಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಈ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂರಕವೆಂಬಂತೆ ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್ಸಿಪಿ, ಟಿಎಸ್‌ಪಿ ಹಣ ಬಳಕೆ ಮಾಡಿಕೊಂಡಿರುವುದು ಕಂಡುಬಂದಿದೆ. ಹೌದು… 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂಪಾಯಿ ಅನುದಾನದಲ್ಲಿ 14,282 ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ.
ಇನ್ನು ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP, TSP ಅನುದಾನವನ್ನು ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಬಳಕೆ ಮಾಡಲಾಗಿದೆ ಎನ್ನುವುದನ್ನು ನೋಡುವುದಾದರೆ.
ಎಸ್ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಎಸ್ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ವಿರೋಧಿಸಿ 2023 ಆಗಸ್ಟ್ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಮಾಡಿತ್ತು.
ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದಿಯಾಗಿ ಮಂತ್ರಿ, ಕಾಂಗ್ರೆಸ್ ಶಾಸಕರು ಬಿಜೆಪಿಯ ಆರೋಪವನ್ನು ಅಲ್ಲಗಳೆದಿದ್ದರು. ಆದ್ರೆ, ಇದೀಗ ಸಿದ್ದರಾಮಯ್ಯ ಸರ್ಕಾರ, ಎಸ್ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಿದೆ. ಈ ಸಂಬಂಧ ಬಿಜೆಪಿ ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೀದಿಗಳಿದು ಪ್ರತಿಭಟನೆ ಮಾಡುವ ಎಲ್ಲಾ ಸಾಧ್ಯತೆಗಳುದ್ದು, ಇದು ಯಾವ ಹಂತಕ್ಕೆ ಹೋಗಿ ಮುಟ್ಟಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:58 pm, Fri, 5 July 24