AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​ಸಿ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಿ ಆದೇಶ ಹೊರಡಿಸಿದೆ. ಎಡಗೈ, ಬಲಗೈ ಮತ್ತು ಇತರೆ ಸಮುದಾಯಗಳಿಗೆ ಮೀಸಲಾತಿ ನೀಡಲಾಗಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಆಯೋಗ ಒಳ ಮೀಸಲಾತಿ ಶಿಫಾರಸ್ಸು ವರದಿಯನ್ನು ಸಲ್ಲಿಸಿತ್ತು. ಶಿಕ್ಷಣ ಮತ್ತು ಉದ್ಯೋಗಗಳಿಗೆ ಈ ಮೀಸಲಾತಿ ಅನ್ವಯವಾಗುತ್ತದೆ.

ಎಸ್​​ಸಿ ಜಾತಿಯ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಆದೇಶ
ಸಿದ್ದರಾಮಯ್ಯ ಸರ್ಕಾರ
ವಿವೇಕ ಬಿರಾದಾರ
|

Updated on:Aug 26, 2025 | 7:50 AM

Share

ಬೆಂಗಳೂರು, ಆಗಸ್ಟ್​ 26: ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ (SC internal reservation) ಭಾಗ್ಯ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಒಳಮೀಸಲಾತಿ ಹಂಚಿಕೆ ಮಾಡಿ ಸೋಮವಾರ ಸರ್ಕಾರ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾರಿಗೆ ಲಭ್ಯ ಇರುವ ಶೇಕಡ 17 ರಷ್ಟು ಮೀಸಲಾತಿಯ ಪೈಕಿ 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ ಶೇ. 6 ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ ಶೇ. 6 ರಷ್ಟು ಮೀಸಲಾತಿ ಮತ್ತು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇ 5 ರಷ್ಟು ಒಳ ಮೀಸಲಾತಿ ಹಂಚಿಕೆ ಮಾಡಿದ್ದು, ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಆದೇಶ ನೀಡಿದೆ.

ಒಳ ಮೀಸಲಾತಿ ಕಲ್ಪಿಸಲು ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್​.ಎನ್​ ನಾಗಮೋಹನದಾಸ್​ ನೇತೃತ್ವದ ಆಯೋಗವು ಸರ್ಕಾರಕ್ಕೆ ಶಿಫಾರಸು ವರದಿ ಸಲ್ಲಿಸಿತ್ತು. ಎಡಗೈಗೆ ಶೇ 6, ಬಲಗೈಗೆ ಶೇ 5, ಲಂಬಾಣಿ ಭೋವಿ ಸಮುದಾಯಕ್ಕೆ ಶೇ 4, ಅಲೆಮಾರಿಗಳಿಗೆ ಶೇ 1, ಆದಿ ಕರ್ನಾಟಕ, ಆದಿ ದ್ರಾವಿಡ ಸಮುದಾಯಗಳಿಗೆ ಶೇ 1 ರಷ್ಟು ಮೀಸಲಾತಿಗೆ ನಾಗಮೋಹನ್​ ದಾಸ್​ ಆಯೋಗ ಶಿಫಾರಸ್ಸು ಮಾಡಿತ್ತು. ನಾಗಮೋಹನದಾಸ್​ ಆಯೋಗವು ಪರಿಶಿಷ್ಟ ಜಾತಿಗಳನ್ನು ಎ,ಬಿ,ಸಿ,ಡಿ,ಇ ಎಂದು ಐದು ಪ್ರವರ್ಗಗಳಾಗಿ ವಿಂಗಡಿಸಿ, ಮೀಸಲಾತಿ ಹಂಚಿಕೆ ಮಾಡಿ ಶಿಫಾರಸು ಮಾಡಿತ್ತು.

ಇದನ್ನೂ ಓದಿ: ದಲಿತ ಸಮುದಾಯಕ್ಕೆ ಗುಡ್​ ನ್ಯೂಸ್: ಒಳ‌ ಮೀಸಲಾತಿ ಫೈನಲ್​, 3 ದಶಕಗಳ ಬೇಡಿಕೆ ಈಡೇರಿಕೆ

ಆದರೆ, ಆಗಸ್ಟ್​ 19 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎಡಗೈಗೆ ಶೇ 6, ಬಲಗೈಗೆ ಶೇ 6, ಲಂಬಾಣಿ ಭೋವಿ ಕೊರಚ ಕೊರಮ, ಅಲೆಮಾರಿ ಸೇರಿದಂತೆ ಇತರೆ ಪಂಗಡಗಳಿಗೆ ಶೇ 5 ರಷ್ಟು ಮೀಸಲಾತಿ ಕಲ್ಪಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು.

ದಲಿತ ಎಡಗೈ ಜಾತಿಗಳು

ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್

ದಲಿತ ಬಲಗೈ ಜಾತಿಗಳು

ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.

ಇತರೆ ಮೀಸಲಾತಿ ಒಳಪಡುವ ಜಾತಿಗಳು

ಬಕುಡ, ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ, ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ, ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್, ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ, ತಿರ್ಗರ್, ತಿರ್ಬಂದ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 am, Tue, 26 August 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್