
ಬೆಂಗಳೂರು, ಆಗಸ್ಟ್ 26: ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ (SC internal reservation) ಭಾಗ್ಯ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಒಳಮೀಸಲಾತಿ ಹಂಚಿಕೆ ಮಾಡಿ ಸೋಮವಾರ ಸರ್ಕಾರ ಆದೇಶ ಹೊರಡಿಸಿದೆ.
ಪರಿಶಿಷ್ಟ ಜಾರಿಗೆ ಲಭ್ಯ ಇರುವ ಶೇಕಡ 17 ರಷ್ಟು ಮೀಸಲಾತಿಯ ಪೈಕಿ 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ ಶೇ. 6 ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ ಶೇ. 6 ರಷ್ಟು ಮೀಸಲಾತಿ ಮತ್ತು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇ 5 ರಷ್ಟು ಒಳ ಮೀಸಲಾತಿ ಹಂಚಿಕೆ ಮಾಡಿದ್ದು, ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಆದೇಶ ನೀಡಿದೆ.
ಒಳ ಮೀಸಲಾತಿ ಕಲ್ಪಿಸಲು ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ನೇತೃತ್ವದ ಆಯೋಗವು ಸರ್ಕಾರಕ್ಕೆ ಶಿಫಾರಸು ವರದಿ ಸಲ್ಲಿಸಿತ್ತು. ಎಡಗೈಗೆ ಶೇ 6, ಬಲಗೈಗೆ ಶೇ 5, ಲಂಬಾಣಿ ಭೋವಿ ಸಮುದಾಯಕ್ಕೆ ಶೇ 4, ಅಲೆಮಾರಿಗಳಿಗೆ ಶೇ 1, ಆದಿ ಕರ್ನಾಟಕ, ಆದಿ ದ್ರಾವಿಡ ಸಮುದಾಯಗಳಿಗೆ ಶೇ 1 ರಷ್ಟು ಮೀಸಲಾತಿಗೆ ನಾಗಮೋಹನ್ ದಾಸ್ ಆಯೋಗ ಶಿಫಾರಸ್ಸು ಮಾಡಿತ್ತು. ನಾಗಮೋಹನದಾಸ್ ಆಯೋಗವು ಪರಿಶಿಷ್ಟ ಜಾತಿಗಳನ್ನು ಎ,ಬಿ,ಸಿ,ಡಿ,ಇ ಎಂದು ಐದು ಪ್ರವರ್ಗಗಳಾಗಿ ವಿಂಗಡಿಸಿ, ಮೀಸಲಾತಿ ಹಂಚಿಕೆ ಮಾಡಿ ಶಿಫಾರಸು ಮಾಡಿತ್ತು.
ಆದರೆ, ಆಗಸ್ಟ್ 19 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎಡಗೈಗೆ ಶೇ 6, ಬಲಗೈಗೆ ಶೇ 6, ಲಂಬಾಣಿ ಭೋವಿ ಕೊರಚ ಕೊರಮ, ಅಲೆಮಾರಿ ಸೇರಿದಂತೆ ಇತರೆ ಪಂಗಡಗಳಿಗೆ ಶೇ 5 ರಷ್ಟು ಮೀಸಲಾತಿ ಕಲ್ಪಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು.
ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್
ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.
ಬಕುಡ, ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ, ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ, ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್, ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ, ತಿರ್ಗರ್, ತಿರ್ಬಂದ.
Published On - 7:44 am, Tue, 26 August 25