AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ವರದಿ ಸಲ್ಲಿಕೆಗೆ ಕ್ಷಣಗಣನೆ: ವಿರೋಧದ ನಡುವೆಯೂ ವರ್ಷಗಳ ಹಿಂದಿನ ವರದಿ ಸ್ವೀಕರಿಸಲು ಮುಂದಾದ ಸರ್ಕಾರ

Karnataka Caste Census Report: ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರ ತೀವ್ರ ವಿರೋಧದ ನಡುವೆಯೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ವರ್ಷಗಳಷ್ಟು ಹಳೆಯದಾದ ಜಾತಿಗಣತಿ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನದ ಜ್ವಾಲೆ ಸ್ಫೋಟಗೊಳ್ಳುವ ನೀರಿಕ್ಷೆ ಇದೆ.

ಜಾತಿ ಗಣತಿ ವರದಿ ಸಲ್ಲಿಕೆಗೆ ಕ್ಷಣಗಣನೆ: ವಿರೋಧದ ನಡುವೆಯೂ ವರ್ಷಗಳ ಹಿಂದಿನ ವರದಿ ಸ್ವೀಕರಿಸಲು ಮುಂದಾದ ಸರ್ಕಾರ
ಜಾತಿ ಗಣತಿ ವರದಿ ಸಲ್ಲಿಕೆಗೆ ಕ್ಷಣಗಣನೆ
Anil Kalkere
| Updated By: Ganapathi Sharma|

Updated on: Feb 29, 2024 | 11:10 AM

Share

ಬೆಂಗಳೂರು, ಫೆಬ್ರವರಿ 29: ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷದಲ್ಲೇ ಒಳ ಬೇಗುದಿ ಸೃಷ್ಟಿಸಿರುವ ಜಾತಿ ಗಣತಿ (Caste Census) ಜ್ವಾಲೆ ಸ್ಫೋಟವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಅದಕ್ಕೆ ಕಾರಣ, ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಇಂದು ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ ಆಗಲಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಿಎಂ ಸಿದ್ದರಾಮಯ್ಯಗೆ (Siddaramaiah) ವರದಿ ಸಲ್ಲಿಸಲಿದ್ದಾರೆ. ಸುಮಾರು ಹತ್ತು ವರ್ಷಗಳ ಹಿಂದೆ ಆರಂಭಿಸಿದ್ದ ಸಮೀಕ್ಷಾ ವರದಿಯನ್ನು ಈಗ ಸರ್ಕಾರ ಪರಿಗಣಿಸಲಿದೆಯಾ? ವಿರೋಧದ ನಡುವೆಯೂ ವರದಿಯನ್ನು ಸರ್ಕಾರ ಅಂಗೀಕರಿಸುತ್ತಾ ಎಂಬ ಕುತೂಹಲ ಇದೀಗ ಮೂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರವೂ ಒಂದಾಗಿದೆ. ಇದೀಗ ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಕ್ಷಣಗಣನೆ ಶುರುವಾಗಿದೆ. ಹಿಂದುಗಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಇಂದು ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿಯನ್ನ ಸಲ್ಲಿಸಲಿದ್ದಾರೆ. ಈ ಬಗ್ಗೆ ಅವರು ಖುದ್ದು ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಹತ್ತು ವರ್ಷಗಳ ಹಿಂದೆ ಆರಂಭವಾಗಿದ್ದ ಜಾತಿ ಗಣತಿ ಸಮೀಕ್ಷೆ

ಅಂದಹಾಗೆ 2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ, ಅರ್ಥಾತ್ ಜಾತಿ ಗಣತಿಯನ್ನು ಮಾಡಿಸಲಾಗಿತ್ತು. ಆದರೆ, ಕಾರಣಂತರಗಳಿಂದ ಸರ್ಕಾರ ವರದಿ ಸ್ವೀಕರಿಸಿರಲಿಲ್ಲ. ಈ ಮಧ್ಯೆ ವರದಿ ಸೋರಿಕೆಯಾಗಿದ್ದು ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದಮೇಲೆ ಜಾತಿ ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಲೇ ಬಂದಿದ್ದರು.

ಡಿಸಿಎಂ ಡಿಕೆ ಶಿವಕುಮಾರ್​ ಅವರಿಂದಲೇ ವಿರೋಧ!

ಆದರೆ, ಜಾತಿ ಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೊಂದು ಅವೈಜ್ಞಾನಿಕ ವರದಿ ಎಂದು ಒಕ್ಕಲಿಗ, ವೀರಶೈವಲಿಂಗಾತ ಸಮುದಾಯ ವಿರೋಧ ಮಾಡಿವೆ. ಜಾತಿ ಗಣತಿ ವರದಿ ಪರಿಷ್ಕರಣೆ ಮಾಡಬೇಕೆನ್ನುವ ಒಕ್ಕಲಿಗ ಸಮುದಾಯದ ಮನವಿ ಪತ್ರಕ್ಕೆ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸಹ ಸಹಿ ಮಾಡಿದ್ರು. ಇಷ್ಟೆಲ್ಲದರ ನಡುವೆಯೇ ಇದೀಗ ಸರ್ಕಾರಕ್ಕೆ ವರದಿ ಸಲ್ಲಿಸಲು ಮುಹೂರ್ತ ಫಿಕ್ಸ್​ ಆಗಿಯೇ ಬಿಟ್ಟಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರ ಜಾತಿ ಗಣತಿ ಅಂಗೀಕರಿಸುವ ಹಠಕ್ಕೆ ಬೀಳಬಾರದು; ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

350ಕ್ಕೂ ಹೆಚ್ಚು ಪುಟಗಳ ವರದಿ

ಸುಮಾರು 350ಕ್ಕೂ ಹೆಚ್ಚು ಪುಟಗಳನ್ನ ಈ‌ ವರದಿ ಒಳಗೊಂಡಿದೆ ಅಂತ ಆಯೋಗದ ಮೂಲಗಳು ತಿಳಿಸಿವೆ. 2014ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಇತರೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತಿಳಿಯಲು ಕಾಂತರಾಜ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿದ್ದರು. ರಾಜ್ಯದಾದ್ಯಂತ 1ಲಕ್ಷ 60 ಸಾವಿರ ಸರ್ಕಾರಿ ನೌಕರರು 1 ಕೋಟಿ 30 ಲಕ್ಷ ಕುಟುಂಬಗಳನ್ನ ಭೇಟಿ ಮಾಡಿ, ದತ್ತಾಂಶವನ್ನು ಸಂಗ್ರಹಿಸಿದ್ದಾರೆ. ಇದಕ್ಕೆ ಸುಮಾರು 169 ಕೋಟಿ ಖರ್ಚಾಗಿದೆ. ಆದ್ರೆ ಇದು ಮನೆಯಲ್ಲೇ ಕೂತು ಮಾಡಿದ ವರದಿ ಅಂತಾ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಪಿಸಿದ್ದರು. ಇದೀಗ ಪರ ವಿರೋಧದ ನಡುವೆ ಇಂದು ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ