Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸುಪ್ರೀಂ ತಿಳಿವಳಿಕೆ ಇಲ್ಲದೆ ಹೋಯ್ತೇ ಸಿದ್ದರಾಮಯ್ಯ ಸರ್ಕಾರಕ್ಕೆ?

ಡಿಸಿಎಂ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣಲ್ಲಿ ಸಿಬಿಐ ತನಿಖೆಯನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿದೆ. ಇದೇ ಕಾರಣಕ್ಕೆ ವಿಪಕ್ಷ ಬಿಜೆಪಿ, ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕುತ್ತಿವೆ. ಆದರೆ, ವಕೀಲರಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ತಿಳಿಯದೇ ಹೋಯ್ತಾ ಎನ್ನುವ ಪ್ರಶ್ನೆ ಎದ್ದಿದೆ.

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸುಪ್ರೀಂ ತಿಳಿವಳಿಕೆ ಇಲ್ಲದೆ ಹೋಯ್ತೇ ಸಿದ್ದರಾಮಯ್ಯ ಸರ್ಕಾರಕ್ಕೆ?
ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್ ಪಡೆದ ಸಿದ್ದರಾಮಯ್ಯ ಸರ್ಕಾರಕ್ಕೆ ಸುಪ್ರೀಂ ತಿಳಿವಳಿಕೆ ಇಲ್ಲದೆ ಹೋಯ್ತೇ ಎನ್ನುವ ಪ್ರಶ್ನೆ ಎದ್ದಿದೆImage Credit source: PTI
Follow us
Ramesha M
| Updated By: Rakesh Nayak Manchi

Updated on: Nov 24, 2023 | 3:17 PM

ಬೆಂಗಳೂರು, ನ.24: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ. ಆದರೆ, ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ನೀಡಿದ ತೀರ್ಪಿನ ಬಗ್ಗೆ ಸ್ವತಃ ವಕೀಲರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಈ ಪ್ರಾಥಮಿಕ ತಿಳಿವಳಿಕೆ ಇಲ್ಲದೇ ಹೋಯ್ತೇ? ಹಾಗೆಯೇ, ಅಡ್ವೊಕೇಟ್ ಜನರಲ್ ಆಗಿರುವ ಶಶಿಕಿರಣ್ ಶೆಟ್ಟಿ ಅವರಿಗೂ ಮಾಹಿತಿಯ ಕೊರತೆ ಇದೆಯೇ ಎಂಬ ಪ್ರಶ್ನೆ ಎದ್ದಿದೆ.

ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ವಾಪಸ್ ಪಡೆದಿರುವುದು ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಸಾಧ್ಯತೆ ಹೆಚ್ಚಿದೆ. ಸಲ್ಲದೆ, ಸರ್ಕಾರದ ಮುಂದೆ ದೊಡ್ಡ ಸವಾಲು ಕೂಡ ಇದೆ. ಹಾಗಾದರೆ ಇಂಥದ್ದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹೇಳಿರುವುದೇನು? ಟಿವಿ9 ಬಳಿ ಸುಪ್ರೀಂಕೋರ್ಟ್ ತೀರ್ಪಿನ ಸಂಪೂರ್ಣ ವಿವರ ಇದೆ.

ಅಷ್ಟಕ್ಕೂ, ಒಂದೊಮ್ಮೆ ಸರ್ಕಾರ ತನಿಖೆಗೆ ಅನುಮತಿ ನೀಡಿದರೆ ಪೂರ್ವಾನ್ವಯವಾಗಿ ಹಿಂಪಡೆಯಲು ಸಾಧ್ಯವಿಲ್ಲ ಎಂದು 1994 ರಲ್ಲೇ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. 1979 ರಿಂದ 1984 ರವರೆಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿದ್ದ ನರ್ ಬಹದೂರ್ ಭಂಡಾರಿ ವಿರುದ್ಧ 1984 ರಲ್ಲಿ ಸಿಬಿಐ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ದಾಖಲಿಸಲಾಗಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಸರ್ಕಾರದ ಪೂರ್ವಾನುಮತಿ ಮೇರೆಗೆ ಮಾಜಿ ಸಿಎಂ ಕಾಜಿ ಲೆಂಡಪ್ ದೊರ್ಜಿ ಅವರು ಪ್ರಕರಣ ದಾಖಲಿಸಿದ್ದರು. 1985 ರಲ್ಲಿ ಮತ್ತೆ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿ ಆಗಿದ್ದ ನರ್ ಬಹದೂರ್ ಭಂಡಾರಿ ಅವರು ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು 1987 ರಲ್ಲಿ ವಾಪಸ್ ಪಡೆದಿದ್ದರು.

ಇದನ್ನು ಪ್ರಶ್ನಿಸಿ ಕಾಜಿ ಲೆಂಡಪ್ ದೊರ್ಜಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಒಮ್ಮೆ ಕೊಟ್ಟ ಅನುಮತಿ ಹಿಂಪಡೆಯಲು ಕಾಯ್ದೆಯಲ್ಲಿ ಅವಕಾಶವಿಲ್ಲವೆಂದು ವಾದ ಮಂಡಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್, ಒಮ್ಮೆ ನೀಡಿದ ಅನುಮತಿಯನ್ನು ಪೂರ್ವಾನ್ವಯವಾಗಿ ಹಿಂಪಡೆಯಲು ಸಾಧ್ಯವಿಲ್ಲ ಎಂದು 1994 ರಲ್ಲಿ ಮಹತ್ವದ ತೀರ್ಪು ನೀಡಿತ್ತು.

ಸಿಬಿಐ ಎಫ್ಐಆರ್ ದಾಖಲಿಸುವಾಗ ಅನುಮತಿ ಪಡೆದಿದೆ. ಹೀಗಾಗಿ ಸಿಬಿಐ ತನ್ನ ತನಿಖೆ ಮುಂದುವರಿಸಬಹುದೆಂದು ತೀರ್ಪಿನಲ್ಲಿ ತಿಳಿಸಿತ್ತು. ಈ ತೀರ್ಪು ಸದ್ಯ ಕೆ ಶಿವಕುಮಾರ್ ಪ್ರಕರಣಕ್ಕೂ ಅನ್ವಯವಾಗುವ ಸಾಧ್ಯತೆ ಹೆಚ್ಚಿದೆ. ಇದೇ ತೀರ್ಪು ಆಧರಿಸಿ ಸಿಬಿಐ ಡಿಕೆ ಶಿವಕುಮಾರ್ ವಿರುದ್ಧ ಹೋರಾಡಲಿದೆ. ಹೀಗಾಗಿ ಸರ್ಕಾರ ಹಾಗೂ ಡಿಸಿಎಂಗೆ ಹಿನ್ನಡೆಯಾದರೂ ಅಚ್ಚರಿಯಿಲ್ಲ.

ಪ್ರಕರಣದ ಹಿನ್ನೋಟ

2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಅಗತ್ಯವಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅಂದಿನ ಸರ್ಕಾರದ ಸಮ್ಮತಿ ಪಡೆದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ CBI ಕೇಸ್​ ವಾಪಸ್; ಆರ್​ ಆಶೋಕ ಹೇಳಿದ್ದಿಷ್ಟು

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಕೇಸ್ ದಾಖಲಿಸಿದ್ದ ಸಿಬಿಐ, 2013 ರಿಂದ 2018ರ ಅವಧಿಯಲ್ಲಿ ಗಳಿಸಿದ ಆದಾಯ, ಹಾಗೂ ವೆಚ್ಚದ ಮಾಹಿತಿ ಆಧರಿಸಿ 74.93 ಕೋಟಿ ರೂ. ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ.

ಈ ಹಂತದಲ್ಲಿ ಸರ್ಕಾರದ ಸಮ್ಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿತ್ತು. ನಂತರ ಡಿಕೆ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ನೀಡಿದ ಕ್ರಮಕ್ಕೆ ತಡೆ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ನ.29 ಕ್ಕೆ ನಿಗದಿ ಮಾಡಿದೆ.

ಈ ಮಧ್ಯೆ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ‌ ನೀಡಿದ ಸಮ್ಮತಿಯನ್ನು ಹಿಂಪಡೆಯಲು ಸಚಿವ ಸಂಪುಟ ಇಂದು ತೀರ್ಮಾನ ಕೈಗೊಂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾನೂನು ಅಭಿಪ್ರಾಯ ಆಧರಿಸಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ. ಆದರೆ ಸರ್ಕಾರದ ಈ ಕ್ರಮ ಇದೀಗ ವಿವಾದಕ್ಕೆ ಒಳಗಾಗುವ ಸಾಧ್ಯತೆಗಳಿವೆ.

ಡಿಕೆಶಿ, ಸರ್ಕಾರದ ಮುಂದಿದೆ ಸವಾಲು

ಸಿಬಿಐ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿಯನ್ನು ಡಿಕೆ ಶಿವಕುಮಾರ್ ಈಗಾಗಲೇ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದಾರೆ. ಹೈಕೋರ್ಟ್ ಸರ್ಕಾರದ ಸಮ್ಮತಿಯ ಕಾನೂನುಬದ್ಧತೆಯನ್ನು ಪರಿಶೀಲಿಸುತ್ತಿದೆ. ಹೀಗಾಗಿ ಹೈಕೋರ್ಟ್ ಗಮನಕ್ಕೆ ತರದೇ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡರೆ ಮುಜುಗರ ಎದುರಿಸಬೇಕಾಗಬಹುದು. ಏಕೆಂದರೆ ಈ ವಿಷಯವೀಗ ಹೈಕೋರ್ಟ್ ಪರಿಶೀಲನೆಯಲ್ಲಿದೆ, ಸಬ್ ಜುಡಿಸ್ ಆಗಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ​ ಸಿಬಿಐ ಕೇಸ್ ವಾಪಸ್: ಕೋರ್ಟ್​ಗೆ ಹೋಗುತ್ತೇನೆಂದ ಯತ್ನಾಳ್​

ಹೈಕೋರ್ಟ್ ಪರಿಶೀಲಿಸುತ್ತಿರುವ ವಿಚಾರದ ಬಗ್ಗೆ ಹೈಕೋರ್ಟ್ ಅನುಮತಿಯಿಲ್ಲದೇ ನಿರ್ಧಾರ ಕೈಗೊಳ್ಳುವುದು ಪ್ರಶ್ನಾರ್ಹವಾಗಲಿದೆ. ಸರ್ಕಾರ ಸಿಬಿಐ ತನಿಖೆಗೆ ‌ನೀಡಿದ ಅನುಮತಿ ಹಿಂಪಡೆದರೆ ಸರ್ಕಾರದ ಕ್ರಮ ದುರುದ್ದೇಶಪೂರಿತವೆಂದು ಸಿಬಿಐ ಹೈಕೋರ್ಟ್​ನಲ್ಲಿ ಪ್ರಶ್ನಿಸಬಹುದು.

ಸಿಬಿಐ ಈಗಾಗಲೇ ಬಹುತೇಕ ತನಿಖೆ ಪೂರ್ಣಗೊಳಿಸಿದೆ. ಈ ಹಂತದಲ್ಲಿ ಸರ್ಕಾರದ ಕ್ರಮದಿಂದ ಭ್ರಷ್ಟಾಚಾರ ತಡೆ ಕಾಯ್ದೆಯ ಉದ್ದೇಶಕ್ಕೆ ಧಕ್ಕೆಯಾಗಲಿದೆ ಎಂದು ಸಿಬಿಐ ವಾದಿಸಬಹುದು. ಹೈಕೋರ್ಟ್ ಸರ್ಕಾರದ ಕ್ರಮಕ್ಕೆ ತಡೆ ನೀಡಿದರೆ ಸರ್ಕಾರ ಹಾಗೂ ಡಿಕೆ ಶಿವಕುಮಾರ್ ಮುಖಭಂಗ ಎದುರಿಸಬೇಕಾಗಬಹುದು. ಹೀಗಾಗಿ ಸರ್ಕಾರ ಕೈಗೊಳ್ಳುವ ಕ್ರಮ ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ನಾಂದಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!