ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ

ವಿಧಾನಸೌಧದಲ್ಲಿ ಕಾನೂನು ಸಚಿವ ಹೆಚ್​​.ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಕೇಂದ್ರ ಸರ್ಕಾರ ಇಂದು ಹೊಸ ಕ್ರಿಮಿನಲ್ ಕಾನೂನುಗಳನ್ನ ಪಾಸ್ ಮಾಡಿತ್ತು. ಈ ಕಾನೂನುಗಳಿಗೆ ಸಂಬಂಧಿಸಿದ ರಾಜ್ಯದ ವ್ಯಾಪ್ತಿಯಲ್ಲಿ ಭಾರತೀಯ ಸಂವಿಧಾನದ ಅನುಚ್ಛೇದ 7ರ 3ನೇ ಪಟ್ಟಿಯಲ್ಲಿ ಪ್ರದತ್ತವಾಗಿರುವ ಅಧಿಕಾರ ಚಲಾಯಿಸಿ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. 

ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ
ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ
Follow us
|

Updated on:Jul 01, 2024 | 6:36 PM

ಬೆಂಗಳೂರು, ಜುಲೈ 01: ಕೇಂದ್ರ ಸರ್ಕಾರ ಜಾರಿಗೆ ತಂದ ಹೊಸ 3 ಕಾನೂನುಗಳನ್ನು (Criminal Laws) ರಾಜ್ಯ ಸರ್ಕಾರ ವಿರೋಧ ಮಾಡಿದೆ. ಇಂದು ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್​.ಕೆ ಪಾಟೀಲ್ (HK Patil), ಕೇಂದ್ರ ಸರ್ಕಾರ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ ಬದಲಾವಣೆ ಮಾಡಲಾಗಿದೆ. ಮೂರು ಕಾನೂನು‌ ಬದಲಾವಣೆ ಮಾಡಿ ಹೊಸ ಕಾನೂನು ಜಾರಿಗೆ ತರಲಾಗಿದೆ. ಯಾವ ಸರ್ಕಾರ ಕಾನೂನು ಮಾಡುತ್ತದೆ, ಅದನ್ನು ಅವರ ಅವಧಿಯಲ್ಲಿ ಜಾರಿ ಮಾಡುವ ನೈತಿಕ ಹಕ್ಕಿದೆ. ಆದರೆ, ಸರ್ಕಾರದ ಅವಧಿ ಮುಗಿದ ಮೇಲೆ ಜಾರಿ ಮಾಡುವುದು ಅನೈತಿಕ ಹಾಗೂ ರಾಜಕೀಯ ಅಸಂಬದ್ಧ ಕ್ರಮವಾಗಿದೆ.

ಈ ಮೂರು ತಾಯಿ ಕಾನೂನುಗಳು, ಸಂವಿಧಾನದ ತಿದ್ದುಪಡಿ ಮಹತ್ವ ಇದಕ್ಕೆ ಕೊಡಲಾಗುತ್ತದೆ. ಈ ಕಾನೂನು ಜಾರಿಯ ಸಂದರ್ಭದಲ್ಲಿ ಎಲ್ಲಾ ಎಚ್ಚರಿಕೆ ಕೈಗೊಳ್ಳಬೇಕು. ಹಿಂದಿನ ಸರ್ಕಾರದ ಕ್ಯಾಬಿನೆಟ್​ನಲ್ಲಿ ಆದ ನಿರ್ಧಾರ ಇದೀಗ ಜಾರಿಗೊಳಿಸಿದ್ದು ಸರಿಯಲ್ಲ. ಅದನ್ನ ಆಗಲೇ ಜಾರಿ ಮಾಡುವ ಹಕ್ಕು ಅವರಿಗೆ ಇತ್ತು. ಈಗ ಹೊಸ ಸರ್ಕಾರ ಬಂದ ನಂತರ ಜಾರಿ ಮಾಡಿರುವುದು ಅಸಂಬದ್ಧ ಎಂದರು.

ಇದನ್ನೂ ಓದಿ: ಐಪಿಸಿ, ಸಿಆರ್​ಪಿಸಿ ಇನ್ನು ಗತ ಇತಿಹಾಸ; ಇಂದಿನಿಂದ ಹೊಸ ಕ್ರಿಮಿನಲ್ ಕಾನೂನುಗಳು ಅಸ್ತಿತ್ವಕ್ಕೆ

ಇನ್ನು 2023 ರಲ್ಲಿ ಅಮಿತ್ ಶಾ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಕಾನೂನುಗಳ ಕುರಿತು ಪರಿಶೀಲನೆ, ಸಲಹೆ ಸೂಚನೆ ಕೇಳಿದ್ದರು. ಆಗ ಸಿಎ ಸಿದ್ದರಾಮಯ್ಯ ನಮಗೊಂದು ಪತ್ರ ಬರದು ಈ ಕಾನೂನುಗಳ ಕುರಿತು ತಜ್ಞರ ಸಮಿತಿ ರಚನೆ ಮಾಡಿ ವರದಿ ನೀಡಲು ಸೂಚಿಸಿದ್ದರು. ಹೀಗಾಗಿ ನಾವು ತಜ್ಞರ ಸಮಿತಿ ವರದಿ ಹಾಗೂ ನನ್ನ ಅಭಿಪ್ರಾಯ ತಿಳಿಸಿ ಸಿಎಂಗೆ ಪತ್ರ ಕಳಿಸಿದ್ದೆ.‌ ಇದನ್ನು ಉಲ್ಲೇಖಿಸಿ ಅಮಿತ್ ಶಾಗೆ ಸಿದ್ದರಾಮಯ್ಯ ಪತ್ರ ಬರೆದು, ವರದಿಯನ್ನು ನೀಡಿದ್ದರು. ನಾವು ಆ ಸುಧೀರ್ಘ ಪತ್ರದಲ್ಲಿ ಒಟ್ಟು 23 ಸಲಹೆಗಳನ್ನು ನೀಡಿದ್ದೆವು. ಆದರೆ ಕೇಂದ್ರ ಸರ್ಕಾರ ನಮ್ಮ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮ ಯಾವುದೇ ಅಭಿಪ್ರಾಯವನ್ನ ಅದರಲ್ಲಿ ಸೇರಿಸಿಲ್ಲ. ಈಗ ಮಂಡನೆ ಮಾಡಿದ ಮಸೂದೆಯನ್ನ ಯಥಾವತ್ತಾಗಿ ಜಾರಿ ಮಾಡಿದ್ದಾರೆ.

ಹೊಸ ಕಾನೂನಿನಲ್ಲಿ ಅನುಕೂಲಗಳಿಗಿಂತ ಅನಾನುಕೂಲಗಳೇ ಹೆಚ್ಚು

ಈ ಹೊಸ ಕಾನೂನಿನಲ್ಲಿ ಅನುಕೂಲಗಳಿಗಿಂತ ಅನಾನುಕೂಲಗಳೇ ಹೆಚ್ಚು ಇವೆ. ಜೊತೆಗೆ ಗೊಂದಲ ಮೂಡಿಸುವ ತಿದ್ದುಪಡಿಗಳು ಇವಾಗಿವೆ. ಜನಾಭಿಪ್ರಾಯ ನಿರ್ಲಕ್ಷ್ಯ ಮಾಡಿ, ವಕೀಲರ ಅಭಿಪ್ರಾಯ ನಿರ್ಲಕ್ಷ್ಯ ಮಾಡಿ ಕಾನೂನು ಮಾಡಿದ್ದಾರೆ. ಹೀಗಾಗಿ ಈ ಮೂರು ಕಾನೂನುಗಳನ್ನು ರಾಜ್ಯ ಸರ್ಕಾರ ವಿರೋಧ ಮಾಡುತ್ತದೆ. ಇದರ ಜೊತೆಗೆ ಈ ಕಾನೂನುಗಳನ್ನು ತಿದ್ದುಪಡಿ ಮಾಡಬೇಕಾಗಿದೆ.

ಕಾನೂನುಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇದೆ. ಸಂವಿಧಾನ ಅನುಚ್ಛೇದ 7, 3 ನೇ ಪಟ್ಟಿಯ ಅಧಿಕಾರ ಬಳಸಿ ತಿದ್ದುಪಡಿ ಮಾಡಲು ಅವಕಾಶ ಇದೆ. ಸರ್ಕಾರದ ಕ್ರಮಗಳನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ಮಾಡುವುದು ಈ ಕಾನೂನಿನ ಅಪರಾಧವಾಗಿದೆ. ಆದರೆ ಆತ್ಮಹತ್ಯೆ ಮಾಡುವುದು ಅಪರಾಧ ಅಲ್ಲ ಈ ಕಾನೂನಿನಲ್ಲಿ. ಇದು ದುರ್ದೈವದ ಸಂಗತಿಯಾಗಿದೆ. ಇದು ಸ್ವಾತಂತ್ರ್ಯ ಹೋರಾಟಕ್ಕೆ, ಹೋರಾಟಗಾರರನ್ನು ತಿರಸ್ಕಾರ ಮಾಡಲಾಗಿದೆ. ಈ ನಿಟ್ಟಿನಲ್ಲಿ ಉಪವಾಸ ಸತ್ಯಾಗ್ರಹ ಅಪಾರಾಧ ಎಂಬುವುದಕ್ಕೆ ತಿದ್ದುಪಡಿ ಮಾಡುತ್ತೇವೆ.

ರಾಷ್ಟ್ರ ಪಿತ, ರಾಷ್ಟ್ರೀಯ ಲಾಂಚನ, ಬಾವುಟಕ್ಕೆ ಅಗೌರವ ತೋರಿಸಿದವದ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಾಡಲು ಸೂಚಿಸಿದ್ದೆವು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿಲ್ಲ. ಈ ನಿಟ್ಟಿನಲ್ಲಿ ತಿದ್ದುಪಡಿಗೆ ಸರ್ಕಾರ ಚಿಂತನೆ ನಡೆಸಿದೆ. ಸಂಘಟಿತ ಅಪರಾಧ ಎಂದು ಆರೋಪಿಸಿ, ವ್ಯಕ್ತಿಗಳ ಮೇಲೆ ಮೊಕದ್ದಮೆ ಹೂಡಲು ತನಿಖಾ ಸಂಸ್ಥೆಗಳಿಗೆ ಏಕಪಕ್ಷೀಯ ಮತ್ತು ವಿವೇಚನಾಧಿಕಾರಗಳು ಹೊಸ ಕಾನೂನಿನಲ್ಲಿ ಅವಕಾಶ ಇದೆ. ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವ ಅಪರಾಧಗಳಿಗೆ 3 ವರ್ಷ ಜೈಲು ಹಾಗೂ ದಂಡಕ್ಕೆ ಅವಕಾಶವಿದೆ ಎಂದಿದ್ದಾರೆ.

ಇದನ್ನೂ ಓದಿ: ಗೌರವ ಇಲ್ಲದ ಕಡೆ ನಾವು ಏಕೆ ಇರಬೇಕು: ಪರೋಕ್ಷವಾಗಿ ರಾಜೀನಾಮೆ ಎಂದ್ರಾ ವಿನಯ್ ಕುಲಕರ್ಣಿ?

ಸೈಬರ್ ಅಪರಾಧ, ಹ್ಯಾಕಿಂಗ್, ಆರ್ಥಿಕ ಅಪರಾಧ, ಅಣ್ವಸ್ತ್ರ ಗೌಪ್ಯತೆ ಹಾಗೂ ತಂತ್ರಜ್ಞಾನ ಮೂಲಕ ವಿಧ್ವಂಸಕ ಕೃತ್ಯ ಎಸಗುವ ಅಪರಾಧಗಳಿಗೆ ಪ್ರತ್ಯೇಕ ಅಧ್ಯಾಯದ ಮೂಲಕ ಕ್ರಮಕ್ಕೆ ತಿದ್ದುಪಡಿ ಮಾಡಲಾಗುತ್ತದೆ. ಮೃತ ದೇಹದ ಮೇಲೆ ಅತ್ಯಾಚಾರ ಎಸಗುವುದು ಅಕ್ಷ್ಮಮ್ಯ ಅಪರಾಧ ಇದರ ಅಪರಾಧಿಕರಣಗೊಳಿಸುವ ನಿಟ್ಟಿನಲ್ಲಿ ತಿದ್ದುಪಡಿ ಮಾಡುತ್ತೇವೆ.

ಹೊಸ ಕಾಯ್ದೆ ಅಡಿಯಲ್ಲಿ ಪೊಲೀಸ್ ಕಸ್ಟಡಿ ಅವಧಿಯಲ್ಲಿ 90 ದಿನಗಳವರೆಗೆ ಅವಕಾಶ ಇದೆ. ಇದು ಧೀರ್ಘಕಾಲದ ಅವದಿಯಾಗುತ್ತದೆ. ಮೊದಲು 15 ದಿನ ಇತ್ತು. ಆದರೆ ಈಗ ಅದನ್ನು ಹೆಚ್ಚು ದಿನಗಳ ವರೆಗೆ ಮಾಡಿದ್ದಾರೆ ಇದನ್ನು ಕಡತಗೊಳಿಸಲು ತಿದ್ದುಪಡಿ ಮಾಡಬೇಕು. ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿ ಪಾಸ್ತಿ ಜಪ್ತಿ ಮಾಡಲು ಮೊದಲು ಕೋರ್ಟ್ ಅನುಮತಿ ಬೇಕಾಗಿತ್ತು. ಆದರೆ ಹೊಸ ಕಾನೂನಿನಲ್ಲಿ ಪೊಲೀಸರಿಗೆ ಅನುಮತಿ ನೀಡಲಾಗಿದೆ. ಇದನ್ನು ತಿದ್ದುಪಡಿ ಮಾಡಲಾಗುತ್ತದೆ ಎಂದರು.

ಪೊಲೀಸ್ ಕಮಿಷನರ್ ಅವರು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ್ದ, ಅವರು ಜಾರಿ ಮಾಡ್ತೀವಿ ಅಂತ ಹೇಳಿದ್ದಾರೆ. ನಾನು ಲಾ ಮಿನಿಸ್ಟರ್ ಆಗಿ ತಿದ್ದುಪಡಿ ಮಾಡುವ ಅವಕಾಶ ಇದೆ ಮಾಡ್ತೀವಿ. ಸದ್ಯ ಈಗ ಹೊಸ ಕಾನೂನಿನ ಪ್ರಕಾರ ಎಫ್ ಐ ಆರ್ ಆಗುತ್ತಿವೆ. ತಿದ್ದುಪಡಿ ಆದ ಬಳಿಕ ಅದರಂತೆ ಪಾಲಿಸಬೇಕಾಗುತ್ತದೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:07 pm, Mon, 1 July 24

ತಾಜಾ ಸುದ್ದಿ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ