ಬೆಂಗಳೂರು, (ಜನವರಿ, 18): ಮುಂದಿನ ತಿಂಗಳು ಅಂದರೆ ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್(Karnataka budget) ಮಂಡನೆಯಾಗಲಿದೆ. ಇನ್ನು ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ(ಫೆ.12) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಈ ಸಂಬಂಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗಿದೆ.
ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.
ಇದನ್ನೂ ಓದಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು
ಮುಂದೆ ಲೋಕಸಭೆ ಚುನಾವಣೆ ಇದೆ. ಹೀಗಾಗಿ ಇದನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯನವರು ಏನೆಲ್ಲಾ ಹೊಸ-ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಾರೆ ಎನ್ನುವುದು ಒಂದೆಡೆ ಕುತೂಹಲ ಇದೆ. ಆದ್ರೆ, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಲು ಸರ್ಕಾರದಲ್ಲಿ ಅನುದಾನದ ಕೊರೆತ ಎದುರಾಗಿದೆ. ಇದ್ದ ಅನುದಾನ ಐದು ಗ್ಯಾರಂಟಿ ಯೋಜನೆಗಳಿಗೆ ಸಾಲುತ್ತಿಲ್ಲ. ಹೀಗಾಗಿ ಹೊಸ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆಗಳು ಕಡಿಮೆ. ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಂದಿದ್ದ ಕೆಲ ಯೋಜನೆಗಳಿಗೆ ಮತ್ತೆ ಜೀವ ತುಂಬಲಿದ್ದಾರೆ. ಹಾಗೇ ಸದ್ಯದ ಕಾರ್ಯಕ್ರಮಗಳನ್ನೇ ಮುಂದುವರಿಸುವ ಸಾಧ್ಯತೆಗಳಿ.
ಒಟ್ಟಿನಲ್ಲಿ ಮುಂದೆ ಚುನಾವಣೆ ಇರುವುದರಿಂದ ಈ ಬಾರಿ ಸಿದ್ದರಾಮಯ್ಯನವರ ಬಜೆಟ್ ತೀವ್ರ ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:01 pm, Thu, 18 January 24