ನಾನು ಹುಟ್ಟು ಕಾಂಗ್ರೆಸ್ಸಿಗ: ಸಿದ್ದುಗೆ ಜೆಡಿಎಸ್​ ಹೆಜ್ಜೆ ಗುರುತಿಸಿದ್ರಾ ಡಿಕೆಶಿ?

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ನಡುವೆ ಹಲವು ದಿನಗಳಿಂದ ಇದ್ದ ಶೀತಲಸಮರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.ಅದ್ಧೂರಿ ಮೆರವಣಿಗೆ ವೇಳೆ ಜೆಡಿಎಸ್​ ಕಾರ್ಯಕರ್ತರು ನೀಡಿದ ಬಾವುಟವನ್ನು ಡಿ.ಕೆ.ಶಿವಕುಮಾರ್ ಹಿಡಿದುಕೊಂಡಿದ್ದರು. ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ ಡಿಕೆಶಿ ನಡೆಗೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಹಾಗೆ ಮಾತನಾಡಲು ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ನನ್ನ ಮೇಲೆ […]

ನಾನು ಹುಟ್ಟು ಕಾಂಗ್ರೆಸ್ಸಿಗ: ಸಿದ್ದುಗೆ ಜೆಡಿಎಸ್​ ಹೆಜ್ಜೆ ಗುರುತಿಸಿದ್ರಾ ಡಿಕೆಶಿ?
Follow us
ಸಾಧು ಶ್ರೀನಾಥ್​
|

Updated on:Oct 28, 2019 | 3:52 PM

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ನಡುವೆ ಹಲವು ದಿನಗಳಿಂದ ಇದ್ದ ಶೀತಲಸಮರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.ಅದ್ಧೂರಿ ಮೆರವಣಿಗೆ ವೇಳೆ ಜೆಡಿಎಸ್​ ಕಾರ್ಯಕರ್ತರು ನೀಡಿದ ಬಾವುಟವನ್ನು ಡಿ.ಕೆ.ಶಿವಕುಮಾರ್ ಹಿಡಿದುಕೊಂಡಿದ್ದರು. ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ ಡಿಕೆಶಿ ನಡೆಗೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಹಾಗೆ ಮಾತನಾಡಲು ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ನನ್ನ ಮೇಲೆ ಪ್ರೀತಿ ಇದೆ. ಆದರೆ ಯಾರೋ ಸಿದ್ದರಾಮಯ್ಯನವರ ದಾರಿ ತಪ್ಪಿಸಿದ್ದಾರೆ ಎಂದರು. ಸ್ವಾಗತದ ವೇಳೆ ನನಗೆ ಎಲ್ಲಾ ತರಹದ ಬಾವುಟ ಕೊಟ್ಟಿದ್ದರು, ಹೀಗಾಗಿ ನಾನು ಬಾವುಟ ಹಿಡಿದುಕೊಂಡಿದ್ದೆ. ಸಿದ್ದರಾಮಯ್ಯನವರು ಹಿರಿಯರು, ನನಗೆ ಸಲಹೆ ನೀಡ್ತಾರೆ. ಆದ್ರೆ ನಾನು ಹುಟ್ಟು ಕಾಂಗ್ರೆಸ್ಸಿಗ ಎಂದು ಡಿ.ಕೆ.ಶಿವಕುಮಾರ್ ತೀಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸ್ವಾಗತದ ವೇಳೆ ಡಿಕೆಶಿ ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಡಿ.ಕೆ.ಶಿವಕುಮಾರ್ ಆಪ್ತರು ಗರಂ ಆಗಿದ್ದರು. ಕಾಂಗ್ರೆಸ್​ ಹೈಕಮಾಂಡ್ ಜೊತೆ ಡಿಕೆಶಿ ಸಂಬಂಧ ಚೆನ್ನಾಗಿದೆ. ಅಲ್ಲದೆ, ಡಿಕೆಶಿಗೆ ಸಿಕ್ಕ ಅದ್ಧೂರಿ ಸ್ವಾಗತದಿಂದ ಸಿದ್ದರಾಮಯ್ಯ ಉದ್ದೇಶಪೂರ್ವಕವಾಗಿ ಮಾತನಾಡಿದ್ದಾರೆ ಎಂದು ಬೆಂಬಲಿಗರು ಡಿಕೆಶಿ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯಕ್ಕೆ ಏನೂ ಮಾತನಾಡಬೇಡಿ ಸುಮ್ಮನಿರಿ, ಪರ ವಿರೋಧವಾಗಿ ಈಗ ಮಾತಾಡಬೇಡಿ ಎಂದು ಆಪ್ತರಿಗೆ ಡಿಕೆಶಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Published On - 2:15 pm, Mon, 28 October 19

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!