ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ: ಸಿದ್ದರಾಮಯ್ಯ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಶಾಂತ್​ ಸಂಬರ್ಗಿ ಅವರು, ಈ ದಂಧೆಯಲ್ಲಿ ಜಮೀರ್ ಅಹಮದ್ ಖಾನ್ ಹೆಸರನ್ನು ಪರೋಕ್ಷವಾಗಿ ಉಲ್ಲೇಖ ಮಾಡಿರುವ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ, ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಜರುಗಿಸಲಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಬಿಜೆಪಿಯವರು ನಟಿ ರಾಗಿಣಿಗೂ ನಮ್ಮ ಪಕ್ಷಕ್ಕೂ ಯಾವುದೆ ಸಂಬಂಧವಿಲ್ಲ ಅಂತಾರೆ. ಆದರೆ ರಾಗಿಣಿ ಅವರು ಬೈಎಲೆಕ್ಷನ್‌ನಲ್ಲಿ […]

ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ:  ಸಿದ್ದರಾಮಯ್ಯ

Updated on: Sep 07, 2020 | 2:28 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಶಾಂತ್​ ಸಂಬರ್ಗಿ ಅವರು, ಈ ದಂಧೆಯಲ್ಲಿ ಜಮೀರ್ ಅಹಮದ್ ಖಾನ್ ಹೆಸರನ್ನು ಪರೋಕ್ಷವಾಗಿ ಉಲ್ಲೇಖ ಮಾಡಿರುವ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ, ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಜರುಗಿಸಲಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಬಿಜೆಪಿಯವರು ನಟಿ ರಾಗಿಣಿಗೂ ನಮ್ಮ ಪಕ್ಷಕ್ಕೂ ಯಾವುದೆ ಸಂಬಂಧವಿಲ್ಲ ಅಂತಾರೆ. ಆದರೆ ರಾಗಿಣಿ ಅವರು ಬೈಎಲೆಕ್ಷನ್‌ನಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ.

ಅವರು ಪ್ರಚಾರ ಮಾಡಿದ್ದಾರೆಂಬುದಕ್ಕೆ ಫೋಟೋಗಳಿವೆ. ಹೀಗಾಗಿ ಡ್ರಗ್ಸ್ ದಂಧೆಯಲ್ಲಿ ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ರಂಗದವರು ಯಾರೇ ಇದ್ದರೂ ಕ್ರಮಕೈಗೊಳ್ಳಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.