ಬೆಂಗಳೂರು: ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ನಿವಾರಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು. ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕೊರೊನಾ ಕಾರಣದಿಂದ ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥಹ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ, ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ ಎಂದು ಪತ್ರದಲ್ಲಿ ವಿಪಕ್ಷ ನಾಯಯ ಉಲ್ಲೇಖಿಸಿದ್ದಾರೆ.
ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮಥ್ರ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ? ಎಂದು ಪ್ರಶ್ನಿಸಿದ ಅವರು, ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ
ಯಡಿಯೂರಪ್ಪರನ್ನು ಕೆಳಗಿಳಿಸಬಾರದು: ಮಠಾಧೀಶರಿಂದ ಬಿಜೆಪಿ ಹೈಕಮಾಂಡ್ಗೆ ಒಕ್ಕೊರಲ ಒತ್ತಾಯದ ಸಂದೇಶ ರವಾನೆ
(Siddaramaiah has written to government to alleviate the school fees conflict)