ಸಿಎಂ ಪಟ್ಟದ ಬಗ್ಗೆ ತಿರುಕನ ಕನಸು ಕಾಣುತ್ತಿರುವ ಸಿದ್ದರಾಮಯ್ಯ: ಪ್ರಹ್ಲಾದ್ ಜೋಶಿ ವ್ಯಂಗ್ಯ

ಮುಂದಿನ ಮುಖ್ಯಮಂತ್ರಿಯಾಗುವ ಬಗ್ಗೆ ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ಮೊಟ್ಟೆ ಎಸೆಯುವುದು, ಕಪ್ಪು ಬಾವುಟ ಪ್ರದರ್ಶಿಸುವುದು ಸರಿಯಲ್ಲ, ಆದೇ ರೀತಿ ಸಿದ್ದರಾಮಯ್ಯ ಅವರು ಸಾವರ್ಕರ್ ಬಗ್ಗೆ ನೀಡಿದ ಹೇಳಿಕೆಯೂ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸಿಎಂ ಪಟ್ಟದ ಬಗ್ಗೆ ತಿರುಕನ ಕನಸು ಕಾಣುತ್ತಿರುವ ಸಿದ್ದರಾಮಯ್ಯ: ಪ್ರಹ್ಲಾದ್ ಜೋಶಿ ವ್ಯಂಗ್ಯ
ಪ್ರಹ್ಲಾದ್ ಜೋಶಿ ಮತ್ತು ಸಿದ್ದರಾಮಯ್ಯ
Follow us
TV9 Web
| Updated By: Rakesh Nayak Manchi

Updated on: Aug 19, 2022 | 1:42 PM

ಧಾರವಾಡ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಕನಸು ಕಾಣಲು ಅಧಿಕಾರವಿದೆ. ತಿರುಕನೋರ್ವ ಮನೆ ಮುಂದೆ ಕನಸು ಕಂಡ ಎಂಬ ಹಾಡಿದೆ, ಇದು ಕೂಡ ಹಾಗೆಯೇ ಆಗಿದೆ. ಹಾಗಂತ ನಾನು ಅವರನ್ನು ತಿರುಕರು ಅಂತಾ ಹೇಳುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಲ್ಲ, ಆ ಪಕ್ಷ ಭೂತಕಾಲದ ಪಕ್ಷವಾಗುತ್ತಿದೆ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದ್ದಾರೆ. ಕನಸು ಕಾಣಲು ತಿರುಕನಿಗೂ ಅಧಿಕಾರವಿದೆ. ಸಿದ್ದರಾಮಯ್ಯ ಬಹಳ ದೊಡ್ಡವರು. ಈ ಹಿಂದೆ ಅವರು ಮುಖ್ಯಮಂತ್ರಿಯಾಗಿದ್ದವರು. ಹೀಗಾಗಿ ಮುಂದೆ ಸರ್ಕಾರ ಬರುತ್ತದೆ ಅಂತಾ ಕನಸು ಕಾಣಲು ಅವರಿಗೆ ಅಧಿಕಾರವಿದೆ. ಅದನ್ನು ನನಸು ಮಾಡುವವರು ಮಾತ್ರ ಜನರು. ಆದರೆ ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಲ್ಲ, ಆ ಪಕ್ಷವು ಭೂತಕಾಲದ ಪಕ್ಷ ಆಗುತ್ತಿದೆ ಎಂದರು.

ಸಾವರ್ಕರ್ ಬಗ್ಗೆ ಅಪಮಾನ ಮಾಡಿದ್ದು ಸರಿಯಲ್ಲ

ಕೊಡಗಿನಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ‌ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಆಗಲಿ ಬೇರೆಯವರಿಗೆ ಆಗಲಿ ಮೊಟ್ಟೆ ಎಸೆಯುವುದು ತಪ್ಪು. ಮೊಟ್ಟೆ ಎಸೆದಿದ್ದು ಸರಿಯಲ್ಲ. ಕಪ್ಪು ಧ್ವಜ ಪ್ರದರ್ಶನ ಮಾಡುವವರ ಪರ ನಾನು ಇಲ್ಲ. ಅದು ಯಾವ ರೀತಿಯಲ್ಲಿಯೂ ಸಮರ್ಥನೀಯವಲ್ಲ. ಆದರೆ ಸಿದ್ದರಾಮಯ್ಯ ಅವರು ಸಾವರ್ಕರ್ ಬಗ್ಗೆ ಹೇಳಿದ್ದನ್ನು ಇಲ್ಲಿ ಗಮನಿಸಬೇಕು. ಸಾವರ್ಕರ್ ಬಗ್ಗೆ ನಿಮ್ಮ ಅಭಿಪ್ರಾಯ ಬೇರೆ ಇರಬಹುದು. ಆದರೆ ಸಾವರ್ಕರ್ ಬಗ್ಗೆ ವಿಶ್ವಾಸ, ಶ್ರದ್ಧೆ ಇದ್ದವರಿಗೆ ಅವರು ಅಪಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಇದು ಸರಿಯಲ್ಲ ಎಂದರು.

ಸ್ವತಃ ಇಂದಿರಾ ಗಾಂಧಿ ಅವರೇ ವೀರ ಸಾವರ್ಕರ್ ಬಗ್ಗೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ಅವರು ಸಾವರ್ಕರ್ ಅವರನ್ನು ಭಾರತದ ಸುಪುತ್ರ ಅಂತಾ ಹೊಗಳಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಪಾತ್ರ ದೊಡ್ಡದಿದೆ ಅಂದಿದ್ದರು. ಮಹಾತ್ಮ ಗಾಂಧಿಯವರು ಕೂಡ ಸಾವರ್ಕರ್ ಹೋರಾಟ ನೆನಪಿಸಿದ್ದರು. ಬ್ರಿಟಿಷರಿಗೆ ಸಾವರ್ಕರ್ ಅವರನ್ನು ಜೈಲಿನಿಂದ ಬಿಡುವಂತೆ ಕೇಳಿದ್ದರು. ಅವರೆಲ್ಲ ಆಗ ಇದ್ದವರು ಮೂಲ ಕಾಂಗ್ರೆಸ್ಸಿಗರು. ವಿಚಾರ ಬೇಧವಿದ್ದರೂ ಸಾವರ್ಕರ್ ಬಗ್ಗೆ ಗೌರವ ಹೊಂದಿದ್ದರು. ಆದರೆ ಪಕ್ಷದಲ್ಲಿ ಈಗ ಇರುವವರು ಡುಬ್ಲಿಕೇಟ್, ನಕಲಿ ಕಾಂಗ್ರೆಸ್ ಪಕ್ಷವಾಗಿದೆ. ಈ‌ ನಕಲಿ ಕಾಂಗ್ರೆಸ್‌ ಪಕ್ಷವನ್ನೇ ಸಿದ್ದರಾಮಯ್ಯ ವಿರೋಧಿಸುತ್ತಾ ಬಂದಿದ್ದರು. ಹಿಂದೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನು ಇವರೇ ಬೈದಿದ್ದರು. ಸ್ವಲ್ಪ ಸಿದ್ದರಾಮಯ್ಯನವರು ಹಳೆಯದನ್ನು ನೆನಪು ಮಾಡಿಕೊಳ್ಳಬೇಕಿದೆ. ಈಗ ಸಿದ್ದರಾಮಯ್ಯ ನಕಲಿ ಕಾಂಗ್ರೆಸ್‌ನ ನಕಲಿ ಗಾಂಧಿಗಳನ್ನು ಮಚ್ಚಿಸಲು ಹೊರಟಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷವು ಈಗ ಮೂಲ ಕಾಂಗ್ರೆಸ್ ಆಗಿ ಉಳಿದಿಲ್ಲ, ಹೊರಗಿನಿಂದ ಬಂದವರೇ ಈ ಪಕ್ಷದಲ್ಲಿ ಇದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರು. ಸಿದ್ದರಾಮಯ್ಯ ಆಕ್ರೋಶದಿಂದ ಮಾತನಾಡುವಾಗ ಕಾಂಗ್ರೆಸ್ ಕಿತ್ತೊಗೆಯಬೇಕು ಅಂತಾರೆ. ಬಳಿಕ ಅಲ್ಲಲ್ಲ ಬಿಜೆಪಿ ಅಂತಾ ಸಮಜಾಯಿಸಿ ನೀಡುತ್ತಾರೆ. ಹೀಗಾಗಿ ಅವರ ಮನಸ್ಸಿನಲ್ಲಿ ಇನ್ನೂ ಕಾಂಗ್ರೆಸ್ ಬಂದಿಲ್ಲ. ಮುಸ್ಲಿಂ ತುಷ್ಟೀಕರಣಕ್ಕೆ ಇಂತಹ ಹೇಳಿಕೆಯನ್ನು ಸಿದ್ದರಾಮಯ್ಯ ನೀಡುತ್ತಾರೆ. ಆದರೆ ಇಂದಿರಾಗಾಂಧಿವರೆಗೆ ಎಲ್ಲರೂ ಸಾವರ್ಕರ್ ಅವರನ್ನು ಗೌರವಿಸಿದ್ದಾರೆ. ಹೀಗಿದ್ದಾಗಲೂ ಬಾಯಿಗೆ ಬಂದಂತೆ ಅವರ ಬಗ್ಗೆ ಮಾತನಾಡುವುದು ಖಂಡನೀಯ ಎಂದರು.

ಹೈಟೆಕ್ ರಕ್ತ ಪರೀಕ್ಷಾ ಕೇಂದ್ರ ಹಾಗೂ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಧಾರವಾಡದ ವಿದ್ಯಾಗಿರಿಯಲ್ಲಿ ನಿರ್ಮಿಸಲಾದ ಹೈಟೆಕ್ ರಕ್ತ ಪರೀಕ್ಷಾ ಕೇಂದ್ರವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಉದ್ಘಾಟನೆ ಮಾಡಿದರು. ಐ ನೀಲ್ ಡಯಾಗ್ನಾಸ್ಟಿಕ್​ ಪ್ರೈವೇಟ್ ಲಿಮಿಟೆಡ್ ಉದ್ಘಾಟನಾ ಕಾರ್ಯಕ್ರಮವನ್ನು ರಿಬ್ಬನ್ ಕತ್ತಿರಿಸುವ ಮೂಲಕ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ನಗರದ ಖ್ಯಾತ ವೈದ್ಯರು ಭಾಗಿಯಾಗಿದ್ದರು. ನಂತರ ಹುಬ್ಬಳ್ಳಿy ರಾಜನಗರದಲ್ಲಿ ಇರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಕೂಡ ಉದ್ಘಾಟಿಸಿದ್ದಾರೆ.  ಈ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ