AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗಲ್ಲ: ಸಿದ್ದರಾಮಯ್ಯ

ಮಂತ್ರಿ ಮಂಡಲಕ್ಕೆ 7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗುವುದಿಲ್ಲ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಂತ್ರಿ ಮಂಡಲ ಪೂರ್ತಿಯಾದ ತಕ್ಷಣ ಈ ಸರ್ಕಾರ ಪರಿಪೂರ್ಣ ಆಗುವುದಿಲ್ಲ. ಸರ್ಕಾರ ಈಗಾಗಲೇ ಅದೋಗತಿಗೆ ಹೋಗಿದೆ.

7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗಲ್ಲ: ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 13, 2021 | 1:29 PM

Share

ಮೈಸೂರು: ರಾಜ್ಯ ಬಿಜೆಪಿ ಸರ್ಕಾರದಿಂದ ಇಂದು ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸಚಿವ ಸ್ಥಾನ ಸಿಗದ ಆಕಾಂಕ್ಷಿಗಳು ಅಸಮಾಧಾನ ಹೊರಹಾಕುತ್ತಿದ್ದರೆ ಇತ್ತ ವಿಸ್ತರಣೆಯಾಗಿರುವ ಸಚಿವ ಸಂಪುಟದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಮಂತ್ರಿ ಮಂಡಲಕ್ಕೆ 7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗುವುದಿಲ್ಲ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಂತ್ರಿ ಮಂಡಲ ಪೂರ್ತಿಯಾದ ತಕ್ಷಣ ಈ ಸರ್ಕಾರ ಪರಿಪೂರ್ಣ ಆಗುವುದಿಲ್ಲ. ಸರ್ಕಾರ ಈಗಾಗಲೇ ಅದೋಗತಿಗೆ ಹೋಗಿದೆ. ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಮತ್ತಷ್ಟು ಅಧೋಗತಿಗೆ ಹೋಗಲಿದೆ ಎಂದರು.

ಯಾರು ಯಾರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೋ ಅಂತ ನಾನು ನೋಡೋಕೆ ಹೋಗಿಲ್ಲ. ಅಥವಾ ಯಾರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾನು ವಿಚಾರಿಸಲು ಹೋಗಿಲ್ಲ. ನನಗೇನು ಗೊತ್ತು ಯಾರು ಯಾರು ಏನೇನು ಮಾತನಾಡಿಕೊಂಡಿದ್ದರೂ ಅಂತ. ಅದರ ಬಗ್ಗೆ ನಾನು ಮಾತನಾಡಲು ಹೋಗೋಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಬಿಜೆಪಿಯವರು ಹಿಂದುತ್ವ ಅಂತಾರೆ, ನಾವು ಹಿಂದೂಗಳಲ್ವಾ ಎಂದು ಬಿಜೆಪಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More