ಮೈಸೂರು ವಿಚಾರದಲ್ಲಿ ಅನಗತ್ಯವಾಗಿ ಏಕೆ ಮೂಗು ತೂರಿಸಬೇಕು; ಸಭೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ

ಮೈಸೂರು ಮೇಯರ್ ಚುನಾವಣೆ ದೋಸ್ತಿ ಕಿರಿಕ್ ವಿಚಾರಕ್ಕೆ ಸಂಬಂಧಿಸಿದ ಸಭೆಯಲ್ಲಿ ಡಿ.ಕೆ.ಶಿವಕುಮಾರ್​ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿಚಾರದಲ್ಲಿ ಅನಗತ್ಯವಾಗಿ ಏಕೆ ಮೂಗು ತೂರಿಸಬೇಕು; ಸಭೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
shruti hegde

| Edited By: Ghanashyam D M | ಡಿ.ಎಂ.ಘನಶ್ಯಾಮ

Mar 02, 2021 | 5:42 PM

ಮೈಸೂರು: ಮೈಸೂರು ಮೇಯರ್ ಚುನಾವಣೆ ದೋಸ್ತಿ ಕಿರಿಕ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್​ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇದೇ ಮೊದಲಲ್ಲ. ಡಿ.ಕೆ.ಶಿವಕುಮಾರ್ ಪದೇ ಪದೇ ಇದೇ ರೀತಿ ವರ್ತಿಸುತ್ತಿದ್ದಾರೆ. ಏಕೆ ಮೈಸೂರು ವಿಚಾರವಾಗಿ ಅನಗತ್ಯವಾಗಿ ಮೂಗು ತೂರಿಸಬೇಕು. ನಾನು ರಾಮನಗರ ವಿಚಾರದಲ್ಲಿ ಮೂಗು ತೂರಿಸಿದ್ದೀನಾ? ಹಾಗಿದ್ದಲ್ಲಿ, ಇವರೇಕೆ ಮೈಸೂರು ವಿಚಾರದಲ್ಲಿ ಮೂಗು ತೂರಿಸಬೇಕು? ಎಂದು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಒಡ್ಡಿದ್ದಾರೆ.

ಮೈಸೂರಿನಲ್ಲಿ ಏನಾಗಿತ್ತು? ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಕಾಂಗ್ರೆಸ್​ ಸದಸ್ಯರು ಜೆಡಿಎಸ್​ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮಹಾನಗರ ಪಾಲಿಕೆ ಮೇಯರ್ ಗಿರಿ ಒಲಿದಿತ್ತು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಸದಸ್ಯರು ಜೆಡಿಎಸ್​ಗೆ ಬೆಂಬಲ ನೀಡಿದ್ದರು.

ಮೈಸೂರಿನ 23ನೇ ಮೇಯರ್​ಆಗಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದರು. ತಮಗೆ ಲಾಭ ಇಲ್ಲದಿದ್ದರೂ ಬಿಜೆಪಿಗೆ ಮೇಯರ್​ ಗಿರಿ ಧಕ್ಕದಂತೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿತ್ತು. ಜೆಡಿಎಸ್​ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ 43 ಮತಗಳು ಲಭಿಸಿತ್ತು. ಮೈಸೂರಿನ 23ನೇ ಉಪಮೇಯರ್​ಆಗಿ ಕಾಂಗ್ರೆಸ್‌ನ ಅನ್ವರ್ ಬೇಗ್ ಆಯ್ಕೆಯಾಗಿದ್ದರು. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಗೆ 26 ಮತ ಲಭಿಸಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಶಾಂತಕುಮಾರಿಗೆ ಯಾವುದೇ ಮತ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಮೈಸೂರು ಪಾಲಿಕೆ ಮೇಯರ್ ಫೈಟ್ ಮೆಗಾ ಟ್ವಿಸ್ಟ್; ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಗಿರಿ ದಯಪಾಲಿಸಿದ ಕಾಂಗ್ರೆಸ್!

ಇದನ್ನೂ ಓದಿ: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಟ್ವಿಸ್ಟ್.. ಕೊನೆಯ ಕ್ಷಣದಲ್ಲಿ ಮೈತ್ರಿ ಮುರಿದ JDS

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada