ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ? ಇಂದು ಸಿಎಂ ಜತೆಗಿನ ಸಭೆಯಲ್ಲಿ ಫೈನಲ್

ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸ್ತಿರೋ ಜನರಿಗೆ ಶಾಕ್. ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆಯ ಬಿಸಿ?

ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ  ದರ ಏರಿಕೆ ಬಿಸಿ? ಇಂದು ಸಿಎಂ ಜತೆಗಿನ ಸಭೆಯಲ್ಲಿ ಫೈನಲ್
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:Jul 14, 2023 | 7:59 AM

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ(nandini milk )ಏರಿಕೆ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಗೆ ಎಲ್ಲಾ ಹಾಲು ಮಾರಾಟ ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಜೊತೆ ಚರ್ಚಿಸಲು ಕೆಎಂಎಪ್​ ಮುಂದಾಗಿದೆ. ಹೌದು..ಇಂದು (ಜುಲೈ 14) KMF ನಿರ್ದೇಶಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್

ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಹಾಲಿದ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ 15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ. ಸದ್ಯ ಹಾಲು ಮಾರಾಟ ಪ್ರತಿ ಲೀಟರ್ 39 ರೂಪಾಯಿ ಇದೆ ( ಲೀ ಟೋನ್ಡ್ ಹಾಲು ). ಇದರಲ್ಲಿ ಹಾಲು ಉತ್ಪಾದಕರ ಸಂಘಕ್ಕೆ 35.50 ಪೈಸೆ ಹೋಗುತ್ತಿದೆ. ಮಾರಾಟಗಾರರಿಗೆ ಪ್ರತಿ ಲೀಟರ್ ಗೆ 2 ರೂ ಕಮೀಷನ್. ಉಳಿದ 1.50 ಪೈಸೆ ಲಾಭದಿಂದ ವ್ಯವಹಾರ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ಒಕ್ಕೂಟಗಳ ಮಾತು.

ಪ್ರತಿದಿನ ಬೆಂಗಳೂರಿಗೆ 13 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ಇದರಿಂದ ಪ್ರತಿದಿನ 15 ರಿಂದ 16 ಲಕ್ಷ ಪ್ರತಿನಿತ್ಯ ನಷ್ಟವಾಗುತ್ತೆ. ಪ್ರತಿ ಲೀ ಗೆ ಮಾರಾಟ ದರದ ಮೇಲೆ 5 ರುಪಾಯಿ ಹೆಚ್ಚಳ ಮಾಡಲು ಅವಕಾಶ ಕೊಡಬೇಕು. ಹೆಚ್ಚಳ ಮಾಡದಿದ್ದರೆ ಒಕ್ಕೂಟಗಳು ಸಾಲದ ಸುಳಿಯಲ್ಲಿ ಸಿಲುಕುತ್ತವೆ. ಹೀಗಾಗಿ ಈ ಬಾರಿ ಹಾಲಿನ ದರ ಪರಿಷ್ಕರಣೆ ಮಾಡುವಂತೆ ಒಕ್ಕೂಟಗಳು ಸರ್ಕಾರಕ್ಕೆ ಒತ್ತಾಯ ಮಾಡಿವೆ.

ಪ್ರತೀ ಲೀಟರ್ ಗೆ ಕನಿಷ್ಠ 5 ರೂ ಏರಿಕೆಗೆ ಪ್ರಸ್ತಾವನೆ ಇಟ್ಟಿರುವ ಬಗ್ಗೆ ಕೆಎಂಎಫ್​ ಅಧ್ಯಕ್ಷ ಭೀಮಾ ನಾಯಕ್ ಹಾಗೂ ಎಲ್ಲ ಮಹಾಮಂಡಳದ ನಿರ್ದೇಶಕರ ಜೊತೆ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಸಿಎಂ ಸಭೆ ಬಳಿಕ ಹಾಲಿನ ದರ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:58 am, Fri, 14 July 23

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ