ಭೂತಾನ್​ನ ಅಡಿಕೆ ಆಮದಿಗೆ ಅನುಮತಿ ನೀಡಿರುವ ಬಿಜೆಪಿ ಸರ್ಕಾರದಿಂದ ವಿಶ್ವಾಸ ದ್ರೋಹ; ಸಿದ್ದರಾಮಯ್ಯ ಆಕ್ರೋಶ

ಭೂತಾನ್‌ನಿಂದ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಅಡಿಕೆ ಬೆಳೆಗಾರರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂತಾನ್​ನ ಅಡಿಕೆ ಆಮದಿಗೆ ಅನುಮತಿ ನೀಡಿರುವ ಬಿಜೆಪಿ ಸರ್ಕಾರದಿಂದ ವಿಶ್ವಾಸ ದ್ರೋಹ; ಸಿದ್ದರಾಮಯ್ಯ ಆಕ್ರೋಶ
ಅಡಿಕೆImage Credit source: daijiworld
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 06, 2022 | 1:56 PM

ಬೆಂಗಳೂರು: ಕೇಂದ್ರ ಸರ್ಕಾರದ ದುಷ್ಟ ನೀತಿಯಿಂದಾಗಿ ಈಗ ಅಡಿಕೆ (Areca Nut) ಬೆಳೆಗಾರರ ಬದುಕೂ ನೆಲಕಚ್ಚುವಂತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ. ಈಗಾಗಲೇ ಕೊಳೆ ರೋಗ ಮತ್ತು ಎಲೆ ಚುಕ್ಕಿ ರೋಗ ಕರ್ನಾಟಕದಾದ್ಯಂತ ವಿಪರೀತ ಹರಡಿದ್ದು, ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಈ ಸಮಯದಲ್ಲೇ ಕೇಂದ್ರ ಸರ್ಕಾರದ ವಿಶ್ವಾಸ ದ್ರೋಹದ ಸಾಂಕ್ರಾಮಿಕ ರೋಗ ಈಗ ಅಡಿಕೆ ಬೆಳೆ ಮತ್ತು ಬೆಳೆಗಾರರನ್ನು ಆವರಿಸಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಭೂತಾನ್‌ನಿಂದ ಪ್ರತಿ ವರ್ಷ 17 ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಬೇಷರತ್ ಅನುಮತಿ ನೀಡಿ ಕಳೆದ ಬುಧವಾರ ಅಧಿಸೂಚನೆ ಹೊರಡಿಸಿದೆ. ಇದು ಅಡಿಕೆ ಬೆಳೆ ಮತ್ತು ಅಡಿಕೆ ಬೆಳೆಗಾರರ ಬದುಕಿಗೆ ಬರೆ ಎಳೆದಂತಾಗಿದೆ. ಅಡಿಕೆ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎನ್ನುವ ಬೇಡಿಕೆಗಳನ್ನು ಇಟ್ಟುಕೊಂಡು ನಾಡಿನ ಅಡಿಕೆ ಬೆಳೆಗಾರರು ಪ್ರತಿಭಟನೆಯ ಹಾದಿ ಹಿಡಿದಿರುವ ಹೊತ್ತಲ್ಲೇ ಭೂತಾನ್ ಅಡಿಕೆ ಆಮದಿಗೆ ಒಪ್ಪಿಗೆ ನೀಡುವ ಮೂಲಕ ಕೇಂದ್ರ ಸರ್ಕಾರ ತನ್ನ ಅಹಂಕಾರ ಮೆರೆದಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ರೈತರು, ಬೆಳೆಗಾರರ ವಿಚಾರದಲ್ಲಿ ಆರಂಭದಿಂದಲೂ ಅಹಂಕಾರವನ್ನೇ ಪ್ರದರ್ಶಿಸುತ್ತಿರುವ ಕೇಂದ್ರ ಸರ್ಕಾರ ಕನಿಷ್ಠ ಆಮದು ಬೆಲೆಯ ಷರತ್ತು (ಎಂಐಸಿ) ಕೂಡ ವಿಧಿಸದೆ ಸದ್ಯ ಭೂತಾನ್ ಅಡಿಕೆ ಆಮದಿಗೆ ಅನುಮತಿ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ದೇಶಗಳಿಂದ ಅಡಿಕೆ ಆಮದಾಗುವ ಅಪಾಯದ ಹೆಬ್ಬಾಗಿಲನ್ನು ಕೇಂದ್ರ ಸರ್ಕಾರ ತೆರೆದಿಟ್ಟಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಭೂತಾನ್​ನಿಂದ ಅಡಿಕೆ ಆಮದು: ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥನೆ, ಬೆಳೆಗಾರರ ವಿರೋಧ

ವಿದೇಶಿ ಅಡಿಕೆಯ ಆಮದಿನ ಮೇಲಿನ ಅಬಕಾರಿ ಸುಂಕವನ್ನು ಶೇ. 110ರಷ್ಟು ಕಡಿಮೆ ಮಾಡಿ, ನಮ್ಮ ರೈತರು ಬೆಳೆಯುವ ಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾದಾಗಲೂ ನಾನು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಮಾತ್ರವಲ್ಲದೆ ರಾಜ್ಯ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಬೆಳೆಗಾರರ ಸಂಕಷ್ಟವನ್ನು ಕೇಂದ್ರಕ್ಕೆ ಮನವರಿಕೆ ಮಾಡಿಸುವಂತೆ ಆಗ್ರಹಿಸಿದ್ದೆ. ಆದರೆ ಪ್ರೊಬೆಷನರಿ ಮುಖ್ಯಮಂತ್ರಿ ಮತ್ತು ಸಂಪುಟಕ್ಕೆ ರಾಜ್ಯದ ರೈತರ ಸಂಕಷ್ಟವನ್ನು ಕೇಂದ್ರಕ್ಕೆ ತಲುಪಿಸುವ ಶಕ್ತಿ ಇಲ್ಲವಾಗಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಲೆನಾಡು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದಾಗ ಮಲೆನಾಡಿನ ರೈತರು ಮತ್ತು ಅಡಿಕೆ ಬೆಳೆಗಾರರು ನನ್ನನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಹೇಳಿಕೊಂಡಿದ್ದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡರೂ ಯಾವುದೇ ಪ್ರಯೋಜನವಾಗುವ ಬದಲಿಗೆ ಸಮಸ್ಯೆ ಬಿಗಡಾಯಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಆ ಆತಂಕ ನಿಜವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈಗಾಗಲೇ ಅಡಿಕೆ ಬೆಳೆಗೆ ಕೊಳೆ ರೋಗ, ಹಳದಿ ಎಲೆ, ಚುಕ್ಕೆ ರೋಗವೂ ಕಾಡುತ್ತಿದೆ. ಸಾಲದ್ದಕ್ಕೆ ವಿಪರೀತ ಮಳೆ ಹಾಗೂ ಮಂಗಗಳ ಹಾವಳಿಯಿಂದ ಅಡಿಕೆ ಗೊನೆಗಳು ನೆಲೆಕಚ್ಚುತ್ತಲೇ ಇವೆ. ಇವೆಲ್ಲದರಿಂದ ಸಣ್ಣ ಪುಟ್ಟ ಅಡಿಕೆ ಬೆಳೆಗಾರರು ಬೀದಿಗೆ ಬೀಳುವಂತಾಗಿ, ಮಧ್ಯಮ ಮಟ್ಟದ ಬೆಳೆಗಾರರ ಆದಾಯ ಅಷ್ಟಕಷ್ಟೆ ಎನ್ನುವಂತಾಗಿದೆ. ಇಷ್ಟೆಲ್ಲಾ ಸಂಕಟಗಳ ನಡುವೆ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರ ಸರ್ಕಾರ ನಮ್ಮ ಅಡಕೆಯ ಮೇಲೆ ಜಿಎಸ್‌ಟಿ ಹೆಚ್ಚಿಸುತ್ತಾ, ವಿದೇಶದಿಂದ ಬರುವ ಆಮದು ಅಡಕೆ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿ ದೇಶಕ್ಕೆ ಮಾರಿ ನೆರೆ ದೇಶಕ್ಕೆ ಉಪಕಾರಿಯಾದಂತಾಗಿದೆ. ಈಗ ಭೂತಾನ್‌ನಿಂದ ಪ್ರತಿ ವರ್ಷ 17 ಸಾವಿರ ಮೆಟ್ರಿಕ್ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಮುಂದಾಗಿರುವುದು ಜನದ್ರೋಹದ ಪರಮಾವಧಿಯಾಗಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಅಡಕೆ ಬೆಳೆಗೆ ನಿಗದಿ ಪಡಿಸಿದ ಅಂದಾಜು ವೆಚ್ಚ ಹೆಚ್ಚಳಕ್ಕೆ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ದೆಹಲಿಗೆ ನಿಯೋಗ: ಆರಗ ಜ್ಞಾನೇಂದ್ರ

ರಾಜ್ಯ ಗೃಹ ಸಚಿವರೂ ಆಗಿರುವ ಆರಗ ಜ್ಷಾನೇಂದ್ರ ಅವರೇ ಅಡಕೆ ಸಮಸ್ಯೆ ಬಗೆಹರಿಸುವ ಸಲುವಾಗಿ ರಚಿಸಲಾಗಿರುವ ಟಾಸ್ಕ್ ಫೋರ್ಸ್​​ನ ಅಧ್ಯಕ್ಷರೂ ಅಗಿದ್ದಾರೆ. ಇವರು ಭೂತಾನ್ ಅಡಿಕೆ ಆಮದನ್ನು ವಿರೋಧಿಸಿ ಕೇಂದ್ರಕ್ಕೆ ಖಾರವಾಗಿ ಪ್ರತಿಕ್ರಿಯಿಸುವ ಬದಲಿಗೆ ಆಮದಿನಿಂದ ಏನೂ ನಷ್ಟ ಆಗುವುದಿಲ್ಲ. ಭೂತಾನ್ ದೇಶ ನಮ್ಮ ಸಾಂಪ್ರದಾಯಿಕ ಮಿತ್ರ ಎಂದು ಭಜನೆ ಮಾಡುತ್ತಿದ್ದಾರೆ. ಇಂತಹ ಭಜನೆಗಳು ನಾಡಿನ ರೈತರ ಸಂಕಷ್ಟವನ್ನು ಪರಿಹರಿಸುವುದಿಲ್ಲ ಎನ್ನುವ ಸಾಮಾನ್ಯ ಜ್ಞಾನವೂ ಇಲ್ಲದವರಂತೆ ಗೃಹ ಸಚಿವರು ಮತ್ತು ಸರ್ಕಾರ ವರ್ತಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಿಜೋರಾಂ, ಬರ್ಮಾ, ಮ್ಯಾನ್ಮಾರ್ ಮೂಲಕ ಭಾರತಕ್ಕೆ ಬರುವ ವಿದೇಶಗಳ ಆಮದು ಅಡಿಕೆಯ ಮೇಲೆ ಅಬಕಾರಿ ಸುಂಕ ಹೆಚ್ಚಿಸಬೇಕು ಎಂದು ಸ್ಥಳೀಯ ಅಡಕೆ ಬೆಳೆಗಾರರು ಹತ್ತಾರು ಬಾರಿ ಮನವಿ ಮಾಡಿದ್ದಾರೆ. ಬೆಳೆಗಾರರ ನಿಯೋಗ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಈ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದರೂ ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಮನವಿಯನ್ನು ತಿಪ್ಪೆಗೆಸೆದು ಈಗ ಭೂತಾನ್‌ನಿಂದಲೂ ಆಮದು ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟೀಯ ಸಂಘಟನಾ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳೂ ಅಡಿಕೆ ಬೆಳೆಯುವ ಪ್ರದೇಶದವರೇ ಆಗಿದ್ದಾರೆ. ಮಲೆನಾಡು, ಕರಾವಳಿ ಸೇರಿದಂತೆ ಅಡಿಕೆ ಬೆಳೆಯುವ ಜಿಲ್ಲೆಗಳ ಸಂಸದರು, ಸಚಿವರು, ಶಾಸಕರು ಕೂಡ ಬಾಯಿ ಬಿಡುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರೂ ಅಡಿಕೆ ಬೆಳೆಗಾರರಿಗೂ ತಮಗೂ ಸಂಬಂಧವೇ ಇಲ್ಲ ಎಂದು ಕೇಂದ್ರ ಸರ್ಕಾರದ ಜನದ್ರೋಹಕ್ಕೆ ಮೌನ ಸಮ್ಮತಿ ಸೂಚಿಸಿದ್ದಾರೆ. ಇವರೆಲ್ಲರೂ ಸೇರಿ ಅಡಿಕೆ ಬೆಳೆಗಾರರಿಗೆ ಮರಣ ಶಾಸನ ಬರೆಯುತ್ತಿರುವುದು ನಾಚಿಕೆಗೇಡು ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಹೀಗಾಗಿ, ಬೇಷರತ್ತಾಗಿ ಭೂತಾನ್ ಅಡಿಕೆ ಆಮದಿಗೆ ನೀಡಿರುವ ಅನುಮತಿಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅಡಿಕೆ ಮೇಲಿನ ಜಿಎಸ್‌ಟಿಯನ್ನು ರದ್ದುಗೊಳಿಸಿ ಆಮದು ಅಡಿಕೆ ಮೇಲೆ ಅಬಕಾರಿ ಸುಂಕ ಹೆಚ್ಚಿಸಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:56 pm, Thu, 6 October 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ