AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಿಗೆ ಬಿತ್ತು ಕಡಿವಾಣ: ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದನಲ್ಲಿ ಅನಧಿಕೃತ ಬಡಾವಣೆಗಳಿಗೆ ಮೂರು ತಿಂಗಳೊಳಗೆ ಅಂತ್ಯ ಹಾಡಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಕಂದಾಯ ನಷ್ಟ ಮತ್ತು ನಾಗರಿಕ ಸೌಲಭ್ಯಗಳ ಕೊರತೆಯನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಮಧ್ಯವರ್ತಿಗಳನ್ನು ತಡೆಯಲು ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಿಗೆ ಬಿತ್ತು ಕಡಿವಾಣ: ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Feb 19, 2025 | 10:34 AM

ಬೆಂಗಳೂರು, ಫೆಬ್ರವರಿ 18: ಅನಧಿಕೃತ ಬಡಾವಣೆಗಳು (Unauthorised Colonies) ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ಅಂತ್ಯ ಹಾಡಬೇಕು. ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಬರುವ ಆದಾಯವೂ ಬಂದ್ ಆಗಿದೆ. ಇವೆಲ್ಲ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ. ಇದೊಂದು ಸಲ ಅನಧಿಕೃತ ನಿವೇಶನಗಳಿಗೆ ಬಿ ಖಾತಾ ಕೊಟ್ಟು ಬಿಡಿ. ಮೂರು ತಿಂಗಳ ಒಳಗಾಗಿ ಎಲ್ಲರಿಗೂ ಬಿ ಖಾತಾ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಿ. ನಂತರ ಅಂತ್ಯ ಹಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ ಮಂಗಳವಾರ (ಫೆ.18) ವಿಡಿಯೊ ಸಂವಾದ ನಡೆಸಿದರು.

ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಬೇಕು. ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿ. ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ. ಇದೊಂದು ಸಲ ಅನಧಿಕೃತ ನಿವೇಶನಗಳಿಗೆ ಬಿ ಖಾತಾ ಕೊಟ್ಟು, ಮೂರು ತಿಂಗಳ ಒಳಗಾಗಿ ಎಲ್ಲರಿಗೂ ಬಿ ಖಾತಾ ನೀಡಿ, ನಂತರ ಅಂತ್ಯ ಹಾಡಬೇಕು. ನಿಮಗೆ (ಅಧಿಕಾರಿಗಳು) ಮೂರು ತಿಂಗಳು ಮಾತ್ರ ಸಮಯ ನೀಡುತ್ತೇನೆ, ಅಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ. ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ ಎಂದರು.

ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೇ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಾಗುತ್ತಾರೆ. ಆಗ, ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ. ಮಧ್ಯವರ್ತಿಗಳಿಗೆ, ಬ್ರೋಕರ್​ಗಳಿಗೆ ತಕ್ಷಣ ಗೇಟ್ ಪಾಸ್ ನೀಡಿ. ಇದನ್ನು ನೀವೆಲ್ಲರೂ ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಿ. ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು ಎಂದು ಎಚ್ಚರಿಕೆ ನೀಡಿದರು.

ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ನಿವೇಶನ, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು. ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು ಒಂದು ಬಾರಿ ಪರಿಹಾರ ಕೊಟ್ಟಿದ್ದೀವೆ. ಮೂರು ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ ಹಾಡಿ. ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರು ಸ್ಪಷ್ಟಪಡಿಸಿದ್ದೀವೆ. ಹೊಸ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರು ಮಾಡಿ ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಕರ್ನಾಟಕ ಬಜೆಟ್​ಗೆ ಮುಹೂರ್ತ ಫಿಕ್ಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:29 pm, Tue, 18 February 25

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?