ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಬಿಜೆಪಿ ಆಡಳಿತದಲ್ಲಿನ ಅಕ್ರಮಗಳ ಬಯಲಿಗೆಳೆಯಲು ಕಾಂಗ್ರೆಸ್ ಸರ್ಕಾರ ತನಿಖೆಗಿಳಿದಿದೆ.ಸಿದ್ದರಾಮಯ್ಯ ಅವರು ಮೊದಲಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿನ ಅಕ್ರಮದ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: May 30, 2023 | 12:07 PM

ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಾದ ಹಗರಣದ ಅಳಕ್ಕೂ ಸರ್ಕಾರ ಕೈಹಾಕಲು ಮುಂದಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆದ ಅಕ್ರಮಗಳ ಕೂಲಂಕಷ ತನಿಖೆಗೆ ಕಾಂಗ್ರೆಸ್(Congress0 ಸರ್ಕಾರ ಉತ್ಸುಕ ತೋರಿದ್ದು, ಎಲ್ಲಾ ರೀತಿಯಲ್ಲೂ ತನಿಖೆ ನಡೆಸಲು ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ( Kalyan Karnataka Development Board) ಅನುದಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎರಡ್ಮೂರು ವರ್ಷಗಳಿಂದ 3000 ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಇಲಾಖಾ ತನಿಖೆ ನಡೆಸಲು ಆದೇಶಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯ ಅವರು ಈ ಕೂಡಲೇ ಈ ವಿಷಯದ ಕುರಿತು ನಿರ್ದಾಕ್ಷಿಣ ಇಲಾಖಾ ತನಿಖೆ ನಡೆಸಲು ಆದೇಶ ಹೊರಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಲಾಗಿದೆ? ಯಾವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಕರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಇದನ್ನೂ ಓದಿ: ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ: ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಪತ್ರ ಮೂಲಕ ಸಿಎಂ ಗಮನಕ್ಕೆ ತಂದಿರುವ ಪ್ರಿಯಾಂಕ್ ಖರ್ಗೆ

ಇನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಸಂಘದಿಂದ ಅನುದಾನ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿದ್ದರಾಮಯ್ಯನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದರು. ಸಿಎಂ ವಿವೇಚನ ಕೋಟಾದಲ್ಲಿ ಅಭಿವೃದ್ಧಿ ಮಂಡಳಿ ಸಿದ್ಧಪಡಿಸಿದ ಕ್ರಿಯಾ ಯೋಜನೆಯಲ್ಲಿ ಅಕ್ರಮ ಆಗಿದೆ. ಅಭಿವೃದ್ಧಿ ಮಂಡಳಿಯ ಕಳಪೆ ಕಾಮಗಾರಿ ಬಗ್ಗೆ ಸಿಎಜಿ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ಮಾಡುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು.

ಅಧಿಕಾರ ವ್ಯಾಪ್ತಿ ಮೀರಿ 327 ಕೋಟಿ ರೂ. ದೇಶಿ ಹಸುಗಳ ಸಾಕಾಣಿಕೆಗೆ ಪ್ರೋತ್ಸಾಹ ಧನ ನೀಡಿರುವ ಮಾಹಿತಿ ಇದೆ. ಈಗಾಗಲೇ ಹಸು ಹೊಂದಿರುವವರಿಗೆ ಅನುದಾನ ನೀಡಿದಂತೆ ದಾಖಲೆ ಸೃಷ್ಟಿಸಲಾಗಿದೆ. ಅಧ್ಯಕ್ಷರು, ಕಾರ್ಯದರ್ಶಿಗಳ ವ್ಯಾಪ್ತಿಗೆ ಇಲ್ಲದಿದ್ದರೂ ಖಾಸಗಿ ಅನುದಾನಿತ ಶಾಲೆಗಳಿಗೆ 327 ಕೋಟಿ ಮಂಜೂರು ಮಾಡಲಾಗಿದೆ. ಅಧಿಕಾರ ವ್ಯಾಪ್ತಿ ಮೀರಿ ಹೊಲಿಗೆ ತರಬೇತಿಗೆ 2 ಕೋಟಿ ವೆಚ್ಚ ಮಾಡಲಾಗಿದೆ.ಸರ್ಕಾರದ ಅನುಮೋದನೆ ಇಲ್ಲದೆ ಕೊರೋನಾದಿಂದ ಮೃತ ಖಾಸಗಿ ಶಿಕ್ಷಕರಿಗೆ 50 ಸಾವಿರ ಪರಿಹಾರ ನೀಡಲಾಗಿದೆ. ಲೋಕೋಪಯೋಗಿ ಬಾಡಿಗೆ ಕಟ್ಟಡಗಳಿಗೆ ನಿಯಮ ಬಾಹಿರವಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಒಂದು ಜಿಲ್ಲೆಗೆ ಒದಗಿಸುವ ಅನುದಾನ ಸೇಡಂ ತಾಲೂಕು ಒಂದಕ್ಕೆ ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಬಳಸಲಾಗಿದೆ. ಮೇಲ್ಕಂಡ ವಿಚಾರಗಳಿಗೆ ಸೂಕ್ತ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದ್ದರು.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್