ಜನಾಕ್ರೋಶದಿಂದ ಎಚ್ಚೆತ್ತ ಸರ್ಕಾರ, ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಆದೇಶ

ಕರ್ನಾಟಕದಲ್ಲಿ ಬಿಪಿಎಲ್ ಪರಿಷ್ಕರಣೆ ವಿಚಾರ ವಿಪಕ್ಷ ಬಿಜೆಪಿಗೆ ಅಸ್ತ್ರವೇ ಸಿಕ್ಕಂತಾಗಿದೆ. ಬಡವರ ಕಾರ್ಡ್ ರದ್ದಾಗಿರೋ ಕೆಲ ಪ್ರಕರಣಗಳನ್ನ ಮುಂದಿಟ್ಟು ಕೇಸರಿ ಕಲಿಗಳು ವಾಗ್ಬಾಣ ಬಿಡ್ತಿದ್ದಾರೆ. ಮನೆಮನೆಗೆ ತೆರಳಿ ಸಮಸ್ಯೆಗಳನ್ನ ಆಲಿಸುತ್ತಿದ್ದು, ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರಿಂದ ಎಚ್ಚೆತ್ತ ಸರ್ಕಾರ, ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಜನಾಕ್ರೋಶದಿಂದ ಎಚ್ಚೆತ್ತ ಸರ್ಕಾರ, ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಆದೇಶ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 20, 2024 | 10:26 PM

ಬೆಂಗಳೂರು, (ನವೆಂಬರ್ 20): ರಾಜ್ಯ ರಾಜಕಾರಣದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಾ ವಿಚಾರ ಮಾತಿನ ಸಮರಕ್ಕೆ ವೇದಿಕೆ ಹಾಕಿಕೊಟ್ಟಿದೆ. ಒಂದರ್ಥದಲ್ಲಿ ಬಿಜೆಪಿ ನಾಯಕರಿಗೆ ಅಸ್ತ್ರವೇ ಸಿಕ್ಕಂತಾದ್ರೆ, ಸಚಿವರು ಇಲಾಖೆಯ ನಡೆಯನ್ನ ಸಮರ್ಥನೆ ಮಾಡಿಕೊಳ್ತಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರು ಸಹ ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟ ಇ ಗವರ್ನೆನ್ಸ್ ಇಲಾಖೆ!

ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ವರಿಕೆ ನೀಡಿದ್ದಾರೆ.

ಕಳೆದ ಆಗಸ್ಟ್​ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್​ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್​ ಕಾರ್ಡ್​​ಗಳನ್ನು ರದ್ದು ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ಸರ್ಕಾರಿ ನೌಕರರು ಅಲ್ಲದ ಹಾಗೂ ತೆರಿಗೆ ಕಟ್ಟುದವರ ಕುಟುಂಬಗಳ ಬಿಪಿಎಲ್​ ಕಾರ್ಡ್​ಗಳು ಸಹ ರಿಜೆಕ್ಟ್ ಆಗಿವೆ. ಇದರಿಂದ ನೊಂದ ಜನರು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಸರ್ಕಾರ ಆಪರೇಷನ್ ರೇಷನ್​ ಕಾರ್ಡ್​ಗೆ ಇಳಿದ ವಿಚಾರ ಬಿಜೆಪಿ ನಾಯಕರನ್ನ ಸಿಡಿದೇಳುವಂತೆ ಮಾಡಿದೆ. ಇವತ್ತು ಒಂದು ಹೆಜ್ಜೆ ಮುಂದಿಟ್ಟ ಕೇಸರಿ ಪಡೆ, ಬಿಪಿಎಲ್ ಕಾರ್ಡ್​ ರದ್ದಾದವರ ಮನೆ ಮನೆಗಳಿಗೆ ತೆರಳಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಕಾರ್ಡ್ ರದ್ದಾದವರ ಸಮಸ್ಯೆ ಆಲಿಸಿದ್ದಾರೆ. ಇದು ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಿಳಿದ ಸಿದ್ದರಾಮಯ್ಯ, ಕಾರ್ಡ್​ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಅಲ್ಲದೇ ವಿನಾಕಾರಣ ರದ್ದು ಮಾಡಿದರೆ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಇನ್ನು ಈಗಾಗೇ ರದ್ದಾಗಿರುವ ಬಿಪಿಎಲ್ ಕಾರ್ಡ್​ಗಳನ್ನು ಸಂಬಂಧಪಟ್ಟವರಿಗೆ ಸರಿ ಮಾಡಿ ವಾಪಸ್ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:00 pm, Wed, 20 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ