AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲೂ ಚುನಾವಣಾ ಅಕ್ರಮ: ರಾಹುಲ್ ಬೆಂಬಲಿಸಿ ಸಿದ್ದರಾಮಯ್ಯ ಖಡಕ್ ಮಾತು

ಬಿಹಾರದಲ್ಲಿ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ. ಆದ್ರೆ ಈಗಿನಿಂದ ಕಾವು ಜೋರಾಗಿದ್ದು, ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ವಿಪಕ್ಷಗಳ ರೋಷಾಗ್ನಿಗೆ ಕಾರಣವಾಗಿದೆ. ಇದೇ ವಿಚಾರದಲ್ಲಿ ಹೊತ್ತಿಕೊಂಡ ಜ್ವಾಲೆಯ ಕಿಡಿ ಕರ್ನಾಟಕದ ಮೇಲೂ ಬಿದ್ದಿದೆ. ಮಹಾರಾಷ್ಟ್ರ ಚುನಾವಣೆ ವೇಳೆ ಯಾವ ರೀತಿ ಅಕ್ರಮ ಮಾಡಿದ್ರೋ ಅದೇ ರೀತಿ ಕರ್ನಾಟಕದಲ್ಲೂ ಲೋಕಸಭೆ ಚುನಾವಣೆ ವೇಳೆ ಮತಗಳನ್ನತನವಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದು, ರಾಹುಲ್ ಗಾಂಧಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅನುಮೋದಿಸಿದ್ದಾರೆ.

ಕರ್ನಾಟಕದಲ್ಲೂ ಚುನಾವಣಾ ಅಕ್ರಮ: ರಾಹುಲ್ ಬೆಂಬಲಿಸಿ ಸಿದ್ದರಾಮಯ್ಯ ಖಡಕ್ ಮಾತು
Rahul Gandhi Siddaramaiah
ರಮೇಶ್ ಬಿ. ಜವಳಗೇರಾ
| Updated By: Ganapathi Sharma|

Updated on:Jul 25, 2025 | 9:51 AM

Share

ಬೆಂಗಳೂರು, (ಜುಲೈ 24): ಕರ್ನಾಟಕದಲ್ಲಿಲೋಕಸಭೆ ಚುನಾವಣೆ (Karnataka Loksabha Elections) ವೇಳೆ ಮತಗಳ್ಳತನವಾಗಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ನಡೆದ ಅಕ್ರಮವನ್ನ ಪತ್ತೆ ಹಚ್ಚಿದ್ದೇವೆ. 6 ತಿಂಗಳುಕಾಲ ಸಂಶೋಧನೆ ಮಾಡಿ, ಯಾರು ಹೇಗೆ ವೋಟ್ ಮಾಡುತ್ತಾರೆ. ಹೊಸ ಮತದಾರರನ್ನ ಹೇಗೆ ಸೇರಿಸ್ತಾರೆ ಎಲ್ಲವನ್ನೂ ಪತ್ತೆ ಹಚ್ಚಿದ್ದೇವೆ ಎಂದು ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿಯವರ ಈ ಆರೋಪವನ್ನು ಸಿಎಂ ಸಿದ್ದರಾಮಯ್ಯ (Siddaramaiah), ಅನುಮೋದಿಸಿದ್ದು, ಲೋಕಸಭಾ ಚುನಾವಣೆ ಫಲಿತಾಂಶ​​​ ಆಶ್ಚರ್ಯ ಉಂಟುಮಾಡಿದೆ. ಈ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚನೆ ನಡೆಸಿ ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲೂ ನಡೆದಿದೆ ಚುನಾವಣಾ ಅಕ್ರಮ, ಶೀಘ್ರ ಸಾಕ್ಷ್ಯ ಕೊಡ್ತೇನೆ ಎಂದ ರಾಹುಲ್ ಗಾಂಧಿ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಎಕ್ಸ್​ ಸಂದೇಶ

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ನಡೆದ ಮತ ವಂಚನೆಗೆ ಸಂಪೂರ್ಣ ಸಾಕ್ಷಿ ಇದೆ ಎಂದ ರಾಹುಲ್ ಗಾಂಧಿ; ಚುನಾವಣಾ ಆಯೋಗ ತಿರುಗೇಟು

ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ. ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:44 pm, Thu, 24 July 25

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ