AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah Resigns: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ: ಎರಡನೇ ಅವಧಿಗೆ ಕರ್ನಾಟಕ ಮುಖ್ಯಮಂತ್ರಯಾಗಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೈಕಮಾಂಡ್​​ ಸೂಚನೆಯಂತೆ ಅವರು ಹುದ್ದೆ ತೊರೆದಿದ್ದು, ರಾಜ್ಯಪಾಲರ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

Siddaramaiah Resigns: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಸಿದ್ದರಾಮಯ್ಯImage Credit source: PTI
ಪ್ರಸನ್ನ ಹೆಗಡೆ
|

Updated on:May 28, 2026 | 3:06 PM

Share

ಬೆಂಗಳೂರು, ಮೇ 28: ಹೈಕಮಾಂಡ್​ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ (Chief Minister) ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ.

ಮುಖ್ಯಾಂಶಗಳು

  • ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
  • ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ
  • ‘ಕೈ’ ಪಾಳಯದಲ್ಲಿನ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್​​ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಬಳಿಕ ಡಿ.ಕೆ. ಶಿವಕುಮಾರ್​​ ಅವರ ತೀವ್ರ ಪೈಪೋಟಿಯ ಹೊರತಾಗಿಯೂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಮೇ 20ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಸಿಎಂ ರೇಸ್​​ನಲ್ಲಿದ್ದ ಡಿಕೆಶಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲಾಗಿತ್ತು.

ಇದನ್ನೂ ಓದಿ: ಮುಂದಿನ ಸಿಎಂ ಡಿಕೆ ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಸಿದ್ದರಾಮಯ್ಯ ಕಣ್ಣೀರು

ಇಂದು ಬೆಳಿಗ್ಗೆ ಆಯೋಜಿಸಿದ್ದ ಉಪಹಾರಕೂಟದಲ್ಲಿ ಹೈಕಮಾಂಡ್​​ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಸಚಿವರಿಗೆ ಖುದ್ದಾಗಿ ಸಿದ್ದರಾಮಯ್ಯ ತಿಳಿಸಿದ್ದರು. ಈ ವೇಳೆ ಭಾವುಕರಾದ ಅವರು ಕಣ್ಣೀರು ಹಾಕಿದ ಪ್ರಸಂಗವೂ ನಡೆದಿತ್ತು. ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ. ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ. ಜನರಿಗೆ ಒಳ್ಳೆಯ ಯೋಜನೆಗಳನ್ನು ನೀಡಿ ಎಂದು ಸಿದ್ದರಾಮಯ್ಯ ಈ ವೇಳೆ ಸಲಹೆ ಕೂಡ ನೀಡಿದ್ದರು.

ಕಳೆದ ಒಂದು ವರ್ಷಗಳಿಂದಲೂ ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಪ್ರಹಸನ ನಡೆದುಕೊಂಡೇ ಬಂದಿತ್ತು. ಸಿದ್ದರಾಮಯ್ಯ ಮತ್ತು ಡಿಕೆಶಿ ಬಣಗಳ ನಾಯಕರು ಪರಸ್ಪರ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದರು. ಈ ನಡುವೆ ಪಂಚರಾಜ್ಯ ಚುನಾವಣೆ ಬೆನ್ನಲ್ಲೇ ಉಭಯ ನಾಯಕರನ್ನು ದೆಹಲಿಗೆ ಕರೆದಿದ್ದ ಹೈಕಮಾಂಡ್​​ ನಾಯಕರು ಸುದೀರ್ಘ ಸಭೆ ನಡೆಸಿದ್ದರು. ಅಳೆದು ತೂಗಿ ಅಂತಿಮ ನಿರ್ಧಾರಕ್ಕೆ ಬಂದಿದ್ದ ವರಿಷ್ಠರು ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ ಸಿದ್ದರಾಮಯ್ಯನವರೀಗ ಪದತ್ಯಾಗ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:52 pm, Thu, 28 May 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್