ಬಿಜೆಪಿ ಅವಧಿಯಲ್ಲಿನ 21 ಹಗರಣ ಪಟ್ಟಿ ಬಿಚ್ಚಿಟ್ಟ ಸಿದ್ದರಾಮಯ್ಯ: ಯಾವುವು? ಇಲ್ಲಿದೆ ನೋಡಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂ. ಹಗರಣ ಹಾಗೂ ಮೂಡಾ ಹಗರಣಗಳು ಮುಂಗಾರು ಅಧಿವೇಶನದಲ್ಲಿ ತೀವ್ರ ಮಾತಿನ ಸಮರಕ್ಕೆ ಕಾರಣವಾಗಿದೆ. ನಾಲ್ಕು ದಿನದ ಅಧಿವೇಶನದಲ್ಲಿ ಎರಡು ದಿನ ಹಗರಣಗಳ ಬಗ್ಗೆ ಚರ್ಚೆ ಮಾಡಿದ ವಿಪಕ್ಷಗಳು ಸದನಲ್ಲಿ ಕೋಲಾಹಲವೇ ಎಬ್ಬಿಸಿದ್ದಾರೆ. ಇಂದು ಸಿದ್ದರಾಮಯ್ಯ ಇದಕ್ಕೆಲ್ಲ ಉತ್ತರ ನೀಡಿದ್ದು ಬಿಜೆಪಿ ಅವಧಿಯಲ್ಲಿನ 21 ಹಗರಣ ಪಟ್ಟಿ ಬಿಚ್ಚಿಟ್ಟಿದ್ದಾರೆ.

ಬಿಜೆಪಿ ಅವಧಿಯಲ್ಲಿನ 21 ಹಗರಣ ಪಟ್ಟಿ ಬಿಚ್ಚಿಟ್ಟ ಸಿದ್ದರಾಮಯ್ಯ: ಯಾವುವು? ಇಲ್ಲಿದೆ ನೋಡಿ
ಬಿಜೆಪಿ ಅವಧಿಯಲ್ಲಿನ 21 ಹಗರಣ ಪಟ್ಟಿ ಬಿಚ್ಚಿಟ್ಟ ಸಿದ್ದರಾಮಯ್ಯ, ಯಾವುವು? ಇಲ್ಲಿದೆ ನೋಡಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2024 | 4:29 PM

ಬೆಂಗಳೂರು, ಜುಲೈ 19: ಮುಂಗಾರು ಅಧಿವೇಶನ ಆರಂಭವಾಗಿ ಇಂದಿಗೆ ನಾಲ್ಕು ದಿನವಾಗಿದೆ. ಈ ನಾಲ್ಕು ದಿನದಲ್ಲಿ ಎರಡು ದಿನ ವಾಲ್ಮೀಕಿ ಹಗರಣ ಮತ್ತು ಮೂಡಾ ಹಗರಣಗಳ ಬಗ್ಗೆಯೇ ವಿಪಕ್ಷ ನಾಯಕರು ಕೋಲಾಹಲವೇ ಎಬ್ಬಿಸಿದ್ದರು. ನಿನ್ನೆ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಈ ಬಗ್ಗೆ ಉತ್ತರ ನೀಡಬೇಕಿತ್ತು. ಆದರೆ ವಿಪಕ್ಷಗಳು ಅದಕ್ಕೆ ಅವಕಾಶ ನೀಡಿರಲಿಲ್ಲ. ಇಂದು ಕೂಡ ವಿಪಕ್ಷಗಳು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ಮಧ್ಯೆ ಸಿಟ್ಟಿಗೆದ್ದ ಸಿದ್ದರಾಮಯ್ಯ ಬಿಜೆಪಿ ಅವಧಿಯಲ್ಲಿನ 21 ಹಗರಣಗಳ ಬಗ್ಗೆ ಲಿಖಿತ ರೂಪದಲ್ಲಿ ಬಿಚ್ಚಿಟ್ಟಿದ್ದಾರೆ.

ಬಿಜೆಪಿ ಕಾಲದಲ್ಲಿ 21 ಹಗರಣಗಳು

ವಿಧಾನಸಭೆಯಲ್ಲಿ ಬಿಜೆಪಿ ಅವಧಿಯ ಹಗರಣಗಳ ಪಟ್ಟಿ ಓದಿದ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಸಿಎಂ ಆಗಿದ್ದಾಗ 42.16 ಕೋಟಿ ರೂ. ಎಪಿಎಂಸಿ ಹಗರಣವಾಗಿದ್ದು, ಈ ವೇಳೆ ಬಸವರಾಜ ಬೊಮ್ಮಾಯಿ ಮಂತ್ರಿಯಾಗಿದ್ದರು. ಇನ್ನು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಕೋಟ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಭೋವಿ ನಿಗಮದಲ್ಲಿ 87 ಕೋಟಿ ರೂ. ಹಗರಣವಾಗಿ ಎಂದರು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ

ದೇವರಾಜ ಅರಸು ಟ್ರಕ್ ಟರ್ಮಿನಲ್​ನಲ್ಲಿ 47.10 ಕೋಟಿ ರೂ. ಹಗರಣವಾಗಿತ್ತು. ಡಿಡಿಯುಟಿಟಿಎಲ್​ ಅಧ್ಯಕ್ಷರಾಗಿದ್ದ ವೀರಯ್ಯ ಬಂಧನವಾಗಿದ್ದರೂ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿ ಬೇರೆ ನಿಗಮಗಳಲ್ಲಿ 437 ಕೋಟಿ ರೂ. ಹಗರಣವಾಗಿದೆ ಎಂದು ಹೇಳಿದರು.

ಬೊಮ್ಮಾಯಿ ಸಿಎಂ ಆಗಿದ್ದಾಗ ಅಶ್ವತ್ಥ್ ನಾರಾಯಣ ಸಚಿವರಾಗಿದ್ದಾಗ ಕಿಯೋನಿಕ್ಸ್​ನಲ್ಲಿ 500 ಕೋಟಿ ರೂ. ಹಗರಣ ನಡೆದಿದೆ. ಬಿಜೆಪಿ ಅವಧಿಯಲ್ಲಿನ ಹಗರಣದ ಬಗ್ಗೆ ಸಿಐಡಿ ತನಿಖೆಯಲ್ಲಿ ಉಲ್ಲೇಖವಾಗಿದೆ. ಕೊವಿಡ್ ವೇಳೆ 40 ಸಾವಿರ ಕೋಟಿ ರೂ. ಹಗರಣವಾಗಿದೆ ಎಂದು ಶಾಸಕ ಯತ್ನಾಳ್ ಹೇಳಿದ್ದರು ಎಂದರು.

ಇದನ್ನೂ ಓದಿ: Assembly session; ಬದುಕಿರುವವರೆಗೆ ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುತ್ತೇನೆ: ಸಿದ್ದರಾಮಯ್ಯ

ಭದ್ರಾ ಮೇಲ್ದಂಡೆ ಯೋಜನೆ ಹಗರಣದ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದರು. ಬಿಟ್ ಕಾಯಿನ್ ಪ್ರಕರಣದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ. ಆಗ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಗೆ ನೂರಾರು ಕೋಟಿ ರೂ. ಆದಾಯ ಇದರ ಬಗ್ಗೆ ತನಿಖೆ ಯಾಕಿಲ್ಲ ಎಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ.

ಇಡಿ, ಬಿಜೆಪಿಗೆ ನಾವು ಭಯಪಡಲ್ಲ ಎಂದು ಸಿಎಂ 

ನಿಮ್ಮನ್ನು ಕಳ್ಳರು, ಲೂಟಿಕೋರರು ಅಂತಾ ಜನ ವಿಪಕ್ಷದಲ್ಲಿರಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವು 136 ಸ್ಥಾನ ಗೆದ್ದಿದ್ದೇವೆ. ಎಲ್ಲಾ ಹಗರಣ ತನಿಖೆ ಮಾಡಿಸಿ ತಪ್ಪು ಮಾಡಿದವರನ್ನು ಜೈಲಿಗೆ ಕಳುಹಿಸದೇ ಬಿಡಲ್ಲ. ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಶಿಕ್ಷೆ ಆಗುತ್ತದೆ.

ಹಿಂದೆ ಇಡಿ ಅಧಿಕಾರಿಗಳು ಬರಲಿಲ್ಲ, ಈಗ ಶುರು ಮಾಡಿದ್ದಾರೆ. ಇಡಿ, ಬಿಜೆಪಿಗೆ ನಾವು ಭಯಪಡಲ್ಲ. ನನ್ನ ಹೆಸರು ಹೇಳದಿದ್ದರೆ ಬಿಜೆಪಿಯವರಿಗೆ ತಿಂದಿದ್ದು ಜೀರ್ಣ ಆಗಲ್ಲ. ಸಿದ್ದರಾಮಯ್ಯ, ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂತಾ ಭಜನೆ ಮಾಡಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ