AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಆಪರೇಷನ್ ಮಾಡಿರುವುದು ಇವರೇ: ಲೇಡಿ ಸೇರಿ ಇಬ್ಬರ ಹೆಸರು ಬಹಿರಂಗಪಡಿಸಿದ ಸಿದ್ದರಾಮಯ್ಯ

ಕಳೆದ ಎರಡ್ಮೂರು ದಿನಗಳಿಂದ ತಣ್ಣಗಾದಂತೆ ಕಂಡ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಮತ್ತೆ ರೋಚಕ ತಿರುವು ಸಿಕ್ಕಿದೆ. ಯಾಕಂದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸ್ಟಿಂಗ್ ಆಪರೇಷನ್​​ ಹಿಂದೆ ಸ್ವಪಕ್ಷದ ನಾಯಕರು ಇದ್ದಾರೆ ಎನ್ನುವ ಸ್ಫೋಟಕ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಪ್ರಕರಣದ ದೂರುದಾರ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸ್ಟಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಎನ್ನುವುದನ್ನು ಇಬ್ಬರು ಹೆಸರು ಬಹಿರಂಗಪಡಿಸಿದ್ದಾರೆ. ಹೀಗಾಗಿ ಸ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸ್ಟಿಂಗ್ ಆಪರೇಷನ್ ಮಾಡಿರುವುದು ಇವರೇ: ಲೇಡಿ ಸೇರಿ ಇಬ್ಬರ ಹೆಸರು ಬಹಿರಂಗಪಡಿಸಿದ ಸಿದ್ದರಾಮಯ್ಯ
Siddaramaiah
ರಾಮ್​, ಮೈಸೂರು
| Edited By: |

Updated on:Oct 23, 2026 | 6:08 PM

Share

ಮೈಸೂರು, (ಅಕ್ಟೋಬರ್ 23): ರಾಜ್ಯ ರಾಜಕಾರಣದಲ್ಲಿ ಗಿರಕಿ ಹೊಡೀತಿದ್ದ ಸ್ಟಿಂಗ್ ಆಪರೇಷನ್ ಬೆಂಕಿ ಕಿಡಿ, ಈಗ ದೆಹಲಿ ಅಂಗಳ ತಲುಪಿದೆ. ಇದರ ನಡುವೆ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ, ತಮ್ಮ ತಂದೆ ಹೆಸರು ಕೆಡಿಸಲು ಸ್ವಪಕ್ಷದವರೇ (ಕಾಂಗ್ರೆಸ್) ಸ್ಟಿಂಗ್ ಆಪರೇಷನ್ ಮಾಡಿಸಿದ್ದಾರೆ ಎಂದು ಹೇಳೋ ಮೂಲಕ, ಇಡೀ ಪ್ರಕರಣಕ್ಕೆ ತಿರುವುಕೊಟ್ಟಿದ್ದಾರೆ. ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅಂತೂ, ಸಿಎಂ ಡಿಕೆಶಿ ವಿರುದ್ಧ ಮತ್ತೆ ಬೆಂಕಿಯುಗುಳಿಸಿದ್ದಾರೆ. ಇನ್ನೊಂದೆಡೆ ಸ್ಟಿಂಗ್​​ನಲ್ಲಿ ಸ್ವಪಕ್ಷದವರು ಇರುವುದು ಪತ್ತೆಯಾದರೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಈ ಸ್ಟಿಂಗ್ ಪ್ರಕರಣದ ದೂರುದಾರ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಇದು ನನ್ನನ್ನು ಬ್ಲಾಕ್‌ಮೇಲ್ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಸುಳ್ಳು ಆರೋಪಗಳ ಮೂಲಕ ಅಪಪ್ರಚಾರ ಮಾಡುವುದನ್ನು ತಡೆಯಲು ಕೋರ್ಟ್ ಆದೇಶ ತಂದಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸ್ಟಿಂಗ್ ಸೂತ್ರದಾರಿ ಹೆಸರು ಬಿಚ್ಚಿಟ್ಟ ಸಿದ್ದರಾಮಯ್ಯ

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಈ ವಿಚಾರ ನನ್ನ ಗಮನಕ್ಕೆ ಬಂತು. ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಜನರಿಗೆ ಸತ್ಯಾಂಶ ತಿಳಿಯಬೇಕು ಎನ್ನುವ ಉದ್ದೇಶದಿಂದ ನಾನೇ ಸ್ವಯಂಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ಇದರಲ್ಲಿ ಯಾವುದೇ ಹುರುಳಿಲ್ಲ, ಸಂಪೂರ್ಣ ಸತ್ಯಕ್ಕೆ ದೂರವಾದ ಆರೋಪವಿದು” ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಬ್ಲ್ಯಾಕ್​ಮೇಲ್​ಗೆಂದೇ ಸ್ಟಿಂಗ್ ಆಪರೇಷನ್, ಕಾಂಗ್ರೆಸ್​ನವರೂ ಶಾಮೀಲು: ಯತೀಂದ್ರ ಸ್ಫೋಟಕ ಆರೋಪ

ತಪ್ಪು ಮಾಡದ ಮೇಲೆ ನನಗೆ ಯಾರ ನೈತಿಕ ಬೆಂಬಲವೂ ಬೇಕಾಗಿಲ್ಲ

ನಾನು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಇಂತಹ ಯಾವುದೇ ಕೃತ್ಯಗಳು ನಡೆದಿರಲಿಲ್ಲ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಇಂತಹ ಕೀಳು ಆರೋಪ ಬಂದೇ ಇರಲಿಲ್ಲ. ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಬ್ಲಾಕ್‌ಮೇಲ್ ತಂತ್ರಗಳನ್ನು ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡದ ಮೇಲೆ ನನಗೆ ಯಾರ ನೈತಿಕ ಬೆಂಬಲವೂ ಬೇಕಾಗಿಲ್ಲ, ಯಾರೂ ನನ್ನ ಪರವಾಗಿ ನಿಲ್ಲಬೇಕಾದ ಅಗತ್ಯವೂ ಇಲ್ಲ ಎಂದರು.

ರಾಜಕೀಯ ಲಾಭಕ್ಕಾಗಿ ಕೆಲವರು ಮಾತನಾಡುತ್ತಿದ್ದಾರೆ

ರಾಜಕೀಯ ಲಾಭಕ್ಕಾಗಿ ಕೆಲವರು ಮಾತನಾಡುತ್ತಿದ್ದಾರೆ, ಮಾತನಾಡಿಕೊಳ್ಳಲಿ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು. ಇದರ ಹಿಂದೆ ಸ್ವಪಕ್ಷದವರಿದ್ದಾರೋ ಅಥವಾ ವಿರೋಧ ಪಕ್ಷದವರಿದ್ದಾರೋ ಎಂಬುದು ತನಿಖೆಯ ನಂತರವೇ ತಿಳಿಯಲಿದೆ. ನನಗೆ ಸರ್ಕಾರದ ತನಿಖೆ ಮೇಲೆ ಪೂರ್ಣ ನಂಬಿಕೆಯಿದೆ. ಇದಕ್ಕಾಗಿ ಎಸ್‌ಐಟಿ ಅಥವಾ ಬೇರೆ ಯಾವುದೇ ಉನ್ನತ ಮಟ್ಟದ ತನಿಖೆಯ ಅಗತ್ಯವಿಲ್ಲ. ಇಂತಹ ಷಡ್ಯಂತ್ರ ರೂಪಿಸಿದವರ ಉದ್ದೇಶ ಎಂದಿಗೂ ಸಫಲವಾಗುವುದಿಲ್ಲ ಎಂದು ಹೇಳಿದರು. ಒಟ್ಟಿನಲ್ಲಿ ಸ್ಟಿಂಗ್ ಆಪರೇಷನ್ ಕಹಾನಿಗೆ ಮತ್ತೆ ದೊಡ್ಡ ತಿರುವು ಸಿಕ್ಕಿದ್ದು, ಸಿಸಿಬಿ ತನಿಖೆಯಿಂದ ಎಲ್ಲವೂ ಬಯಲಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Fri, 23 October 26

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!