ಯಡಿಯೂರಪ್ಪ ಕಳಪೆ ಮುಖ್ಯಮಂತ್ರಿ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

Siddaramaiah: ಬಿಎಸ್ ಯಡಿಯೂರಪ್ಪ ತೆಗೆಯಬೇಕೆಂದು ಬಹಳ ಹಿಂದಿನಿಂದಲೂ ಇದೆ. ಹೀಗಾಗಿ ಯಡಿಯೂರಪ್ಪ ಹೊಸ ದಾಳವನ್ನು ಉರುಳಿಸಿದ್ದಾರೆ. ತಾನು ಪ್ರಾಮಾಣಿಕನೆಂದು ತೋರಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಶಾಸಕ ರೇಣುಕಾಚಾರ್ಯರನ್ನು ಮುಂದೆ ಬಿಟ್ಟು ನೋಡುತ್ತಿದ್ದಾರೆ.

ಯಡಿಯೂರಪ್ಪ ಕಳಪೆ ಮುಖ್ಯಮಂತ್ರಿ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Edited By:

Updated on: Jun 09, 2021 | 12:30 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಆಡಳಿತ ವಿಫಲವಾಗಿದೆ. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೂ ಹೋಗಿದೆ. ಆದ್ದರಿಂದ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ. ಹೀಗಾಗಿಯೇ ಸಿಎಂ ಯಡಿಯೂರಪ್ಪ ನಾಟಕವಾಡುತ್ತಿದ್ದಾರೆ. ಯಡಿಯೂರಪ್ಪ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್​ವೈ ತೆಗೆಯಬೇಕೆಂದು ಬಹಳ ಹಿಂದಿನಿಂದಲೂ ಇದೆ. ಹೀಗಾಗಿ ಯಡಿಯೂರಪ್ಪ ಹೊಸ ದಾಳವನ್ನು ಉರುಳಿಸಿದ್ದಾರೆ. ತಾನು ಪ್ರಾಮಾಣಿಕನೆಂದು ತೋರಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಶಾಸಕ ರೇಣುಕಾಚಾರ್ಯರನ್ನು ಮುಂದೆ ಬಿಟ್ಟು ನೋಡುತ್ತಿದ್ದಾರೆ. ಹೈಕಮಾಂಡ್ ಮನವೊಲಿಸುವುದಕ್ಕೂ ಅವರು ನೋಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಇನ್ನು ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಇಬ್ಬರೂ ಅಧಿಕಾರಿಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ಎತ್ತಿಕಟ್ಟಿ ಇಬ್ಬರ ಮಧ್ಯೆ ಗಲಾಟೆಯನ್ನು ತಂದಿಟ್ಟಿದ್ದಾರಷ್ಟೆ. ಅಧಿಕಾರಿಗಳಿಬ್ಬರ ಮೇಲೆ ಆಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ರಾಜ್ಯದಲ್ಲಿ ಸಂಪೂರ್ಣ ಆಡಳಿತ ವ್ಯವಸ್ಥೆ ಕುಸಿದುಹೋಗಿದೆ. ರೋಹಿಣಿ ಸಿಂಧೂರಿ ಭೂ ಹಗರಣದ ಬಗ್ಗೆ ಮಾತಾಡಿದ್ದಾರೆ. ಇದರ ಬಗ್ಗೆ ತನಿಖೆಯಾಗಬೇಕೆಂದು ಇದರ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ

ಚಾಮರಾಜನಗರ ಆಕ್ಸಿಜನ್ ದುರಂತ; ಆಡಿಯೋದಲ್ಲಿರುವುದು ಸತ್ಯವಾದರೆ ಅಧಿಕಾರಿಯನ್ನು ಬಂಧಿಸಿ ಎಂದ ಮಾಜಿ ಶಾಸಕ ವಾಸು

ಶಿವಮೊಗ್ಗ ಕೊವಿಡ್ ಕೇರ್ ಸೆಂಟರ್​ನಲ್ಲಿ ಸೂಕ್ತ ಸೌಲಭ್ಯವಿಲ್ಲದೆ ಜನರ ಪರದಾಟ; ವಿಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಸೋಂಕಿತರು

(Siddaramaiah said Chief Minister Yediyurappa was making a drama)

Published On - 1:54 pm, Tue, 8 June 21